ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾಕ್ ಡೌನ್ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ; ಒಟ್ಟು 100 ಮಂದಿ ವಶಕ್ಕೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಏಪ್ರಿಲ್ 03: ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕೆಸವಿನಕಟ್ಟೆ ಗ್ರಾಮದಲ್ಲಿ 70 ಜನರಿಗಿಂತ ಹೆಚ್ಚು ಜನರು ಸೇರಿ ನಮಾಜ್ ಮಾಡಿದ್ದು, ಅವರನ್ನು ಕುಂಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಸೀದಿಗೆ ನಮಾಜ್ ಗೆ ಆಗಮಿಸಿದವರಲ್ಲಿ ಜ್ವರದಿಂದ ಬಳಲುತ್ತಿದ್ದ 7 ಜನ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ನಮಾಜ್ ಮಾಡುತ್ತಿದ್ದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿ ಜನರನ್ನು ವಶಕ್ಕೆ ಪಡೆದಿದ್ದಾರೆ. ಜ್ವರದಿಂದ ಬಳಲುತ್ತಿದ್ದವರನ್ನು ಕ್ವಾರಂಟೈನ್ ಮಾಡಲು ಮೆಗ್ಗಾನ್ ಗೆ ಕಳುಹಿಸಿದ್ದಾರೆ. ಅವರೊಂದಿಗೆ ಸಂಪರ್ಕ ಹೊಂದಿದ್ದ 70 ಜನರನ್ನು ಬೇರೆಡೆ ಕ್ವಾರಂಟೈನ್ ಮಾಡಲು ನಿರ್ಧರಿಸಿದ್ದಾರೆ.

ಲಾಕ್‌ಡೌನ್; ಹುಬ್ಬಳ್ಳಿಯಲ್ಲಿ ನಡೆಯಿತು ಪೊಲೀಸರ ಮೇಲೆ ಕಲ್ಲು ತೂರಾಟಲಾಕ್‌ಡೌನ್; ಹುಬ್ಬಳ್ಳಿಯಲ್ಲಿ ನಡೆಯಿತು ಪೊಲೀಸರ ಮೇಲೆ ಕಲ್ಲು ತೂರಾಟ

ಬಳ್ಳಾರಿಯಲ್ಲೂ ಮೂವತ್ತು ಜನ ವಶಕ್ಕೆ: ಬಳ್ಳಾರಿಯಲ್ಲೂ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನ ಬಲ್ಲಾಹುಣ್ಸಿ ಗ್ರಾಮದಲ್ಲಿ 30ಕ್ಕೂ ಹೆಚ್ಚು ಜನ ಸಾಮೂಹಿಕ ಪ್ರಾರ್ಥನೆ ಮಾಡಲು ಮುಂದಾಗಿದ್ದು, ಇದನ್ನು ಅರಿತ ಸ್ಥಳೀಯ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Police Took Custody Of 100 People In Shivamogga Ballary For Doing Mass Prayer

 ಕೊರೊನಾ ಶಂಕಿತರನ್ನು ಆಸ್ಪತ್ರೆ ದಿಗ್ಬಂಧನದಲ್ಲಿ ಇಟ್ಟರೂ ಸಾಮೂಹಿಕ ಪ್ರಾರ್ಥನೆ ಕೊರೊನಾ ಶಂಕಿತರನ್ನು ಆಸ್ಪತ್ರೆ ದಿಗ್ಬಂಧನದಲ್ಲಿ ಇಟ್ಟರೂ ಸಾಮೂಹಿಕ ಪ್ರಾರ್ಥನೆ

ಸಾಮೂಹಿಕ ಪ್ರಾರ್ಥನೆ ಮಾಡುವ ಸಂದರ್ಭದಲ್ಲಿ ಪೊಲೀಸರು ಆಗಮಿಸಿ , ಮಸೀದಿಯಲ್ಲಿ ಪ್ರಾರ್ಥನೆ ಮಾಡುತಿದ್ದ ಮೂವತ್ತು ಜನರನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲರಿಗೂ ಸ್ಕ್ರೀನಿಂಗ್ ಮಾಡಿಸಿದ್ದಾರೆ. ಕಾನೂನು ಉಲ್ಲಂಘನೆ ಮಾಡಿ ಪ್ರಾರ್ಥನೆ ಮಾಡಲು ಮುಂದಾದವರ ವಿರುದ್ಧ ಪ್ರಕರಣ ದಾಖಲಿಸಿ ಎಲ್ಲರನ್ನೂ ಹಗರಿ ಬೊಮ್ಮನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

English summary
Police took custody of total 100 people in shivamogga and ballary for doing mass prayer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X