Get Updates
Get notified of breaking news, exclusive insights, and must-see stories!

ಸಮೀಕ್ಷೆ; ಶಿಕಾರಿಪುರದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧಿಸಿದರೆ ಗೆಲುವು

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಿದರೆ ಗೆಲುವು ಸಾಧಿಸಲಿದ್ದಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

ಶಿವಮೊಗ್ಗ, ಮಾರ್ಚ್ 20; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಗೆ ಕೆಲವೇ ದಿನಗಳು ಬಾಕಿ ಇದೆ. ಯಾವ ಕ್ಷೇತ್ರದಿಂದ ಯಾರು ಕಣಕ್ಕಿಳಿಯುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಎಂಬುದು ಬಿಜೆಪಿ ಕಾರ್ಯಕರ್ತರು, ವಿಜಯೇಂದ್ರ ಅಭಿಮಾನಿಗಳ ಪ್ರಶ್ನೆ.

ಶಿಕಾರಿಪುರ ಕ್ಷೇತ್ರದ ಹಾಲಿ ಶಾಸಕ ಬಿ. ಎಸ್. ಯಡಿಯೂರಪ್ಪ. ಮುಂದಿನ ಚುನಾವಣೆಗೆ ತಾನು ಸ್ಪರ್ಧಿಸುವುದಿಲ್ಲ ಎಂದು ಅವರು ಈಗಾಗಲೇ ಘೋಷಣೆ ಮಾಡಿದ್ದಾರೆ. ಹೈಕಮಾಂಡ್ ನಾಯಕರು ಒಪ್ಪಿದರೆ ಬಿ. ವೈ. ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಿಂದ ಕಣಕ್ಕಿಳಿಯುವ ನಿರೀಕ್ಷೆ ಇದೆ. ಆದರೆ ಅಧಿಕೃತವಾಗಿ ಇನ್ನೂ ಘೋಷಣೆಯಾಗಿಲ್ಲ.

Poll Survey By Lok Poll Says BY Vijayendra Will Win Shikaripura

2023-24ನೇ ಸಾಲಿನ ಬಜೆಟ್ ಭಾಷಣದ ಮೇಲೆ ವಿಧಾನಭೆಯಲ್ಲಿ ಮಾತನಾಡಿದ ಬಿ. ಎಸ್. ಯಡಿಯೂರಪ್ಪ, "ನಾನು ಮತ್ತೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಹಾಗಾಗಿ ನಾನು ಮತ್ತೆ ಈ ಸದನದ ಒಳಗೆ ಬರುವ ಪ್ರಶ್ನೆ ಉದ್ಭವಿಸುವುದಿಲ್ಲ. ಪ್ರಧಾನಿ ಮೋದಿ ಅವರು ಎಲ್ಲ ಅವಕಾಶ, ಸ್ಥಾನಮಾನ ನೀಡಿದ್ದು, ಬದುಕಿನ ಕೊನೆಯ ಉಸಿರು ಇರುವ ತನಕ ಪಕ್ಷವನ್ನು ಅಧಿಕಾರಕ್ಕೆ ತರಲು ಶಕ್ತಿ ಮೀರಿ ಕೆಲಸ ಮಾಡುತ್ತೇನೆ" ಎಂದು ಘೋಷಣೆ ಮಾಡಿದರು.

ಈ ಮೂಲಕ ಯಡಿಯೂರಪ್ಪ 2023ರ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂಬ ಸಂದೇಶ ನೀಡಿದರು. ಈಗ ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಬಿ. ವೈ. ವಿಜಯೇಂದ್ರ ಹೆಸರು ಕೇಳಿ ಬರುತ್ತಿದೆ. ಒಂದು ವೇಳೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿ, ವಿಜಯೇಂದ್ರ ಕಣಕ್ಕಿಳಿದರೆ ಅವರು ಗೆಲುವು ಸಾಧಿಸಲಿದ್ದಾರೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ.

Vijayendra

ಸಮೀಕ್ಷೆ ಹೇಳುವುದು ಏನು?; Lok Poll ಮಾರ್ಚ್ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಕುರಿತು ಸಮೀಕ್ಷೆಯೊಂದನ್ನು ಮಾಡಿತ್ತು. ಈ ಸಮೀಕ್ಷೆಯ ಪ್ರಕಾರ ಬಿಜೆಪಿ 77-83, ಕಾಂಗ್ರೆಸ್ 116 -122, ಜೆಡಿಎಸ್ 21-27 ಮತ್ತು ಇತರರು 1-4 ಸ್ಥಾನಗಳಲ್ಲಿ ಜಯಗಳಿಸಬಹುದು ಎಂದು ಹೇಳಿತ್ತು. ಈಗ ರಾಜ್ಯದ 10 ಪ್ರಮುಖ ಕ್ಷೇತ್ರಗಳಲ್ಲಿ ಯಾರು ಗೆಲ್ಲಬಹುದು ಎಂದು ಸಮೀಕ್ಷೆ ನಡೆಸಿ, ಅದರ ಫಲಿತಾಂಶ ಬಿಡುಗಡೆ ಮಾಡಿದೆ. ಇದರಲ್ಲಿ ಶಿಕಾರಿಪುರ ಕ್ಷೇತ್ರವೂ ಸೇರಿದೆ.

ಸಮೀಕ್ಷೆಯ ಫಲಿತಾಂಶದ ಪ್ರಕಾರ ಬಿ. ವೈ. ವಿಜಯೇಂದ್ರ ಅಭ್ಯರ್ಥಿಯಾದರೆ ಶಿಕಾರಿಪುರದಲ್ಲಿ ಗೆಲುವು ಸಾಧಿಸಲಿದ್ದಾರೆ. ಕ್ಷೇತ್ರದಲ್ಲಿ ಹೊಂದಿರುವ ವೈಯಕ್ತಿಕ ಮತಗಳು, ಯಡಿಯೂರಪ್ಪ ಇನ್ನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬ ಅನುಕಂಪದ ಮತಗಳು ವಿಜಯೇಂದ್ರಗೆ ಸಹಾಯಕವಾಗಲಿದೆ.

ಈ ಫಲಿತಾಂಶದ ಪ್ರಕಾರ ಬಿ. ವೈ. ವಿಜಯೇಂದ್ರ ಶೇ 48ರಷ್ಟು ಮತಗಳನ್ನು ಪಡೆದು ಗೆಲವು ಸಾಧಿಸಲಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಶೇ 39ರಷ್ಟು ಮತಗಳನ್ನು ಪಡೆಯಲಿದ್ದಾರೆ. ಜೆಡಿಎಸ್‌ನ ಅಭ್ಯರ್ಥಿ ಶೇ 8ರಷ್ಟು ಮತ ಪಡೆಯಲಿದ್ದಾರೆ. ಇತರ ಅಭ್ಯರ್ಥಿಗಳು ಶೇ 5ರಷ್ಟು ಮತ ಪಡೆಯಲಿದ್ದಾರೆ. ಮೂರು ಪಕ್ಷಗಳು ಶಿಕಾರಿಪುರ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಯಾರು? ಎಂದು ಇನ್ನೂ ಘೋಷಣೆ ಮಾಡಿಲ್ಲ. ಬಿ. ವೈ. ವಿಜಯೇಂದ್ರ ಕಣಕ್ಕಿಳಿಯುವ ಕುರಿತು ಸಹ ಅಂತಿಮ ಘೋಷಣೆಯಾಗಬೇಕಿದೆ.

2018ರ ಚುನಾವಣೆಯಲ್ಲಿ ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ. ಎಸ್. ಯಡಿಯೂರಪ್ಪ 86,983 ಮತಗಳನ್ನು ಪಡೆದು ಜಯಗಳಿಸಿದ್ದರು. ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಳಿಕ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಬಳಿಕ ಬಹುಮತವಿಲ್ಲದೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. 2019ರಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎರಡು ವರ್ಷ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಣೆ ಮಾಡಿದರು. ಕಾಂಗ್ರೆಸ್‌ನ ಗೋಣಿ ಮಲತೇಶ್ 51,585 ಮತ ಮತ್ತು ಜೆಡಿಎಸ್‌ನ ಹೆಚ್‌. ಟಿ. ಬಳಿಗಾರ್ 13,191 ಮತಗಳನ್ನು ಪಡೆದಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+