ಶಿವಮೊಗ್ಗ : ಕಲುಷಿತ ನೀರು ಕುಡಿದು 2 ಸಾವು, 40 ಮಂದಿ ಅಸ್ವಸ್ಥ
ಶಿವಮೊಗ್ಗ, ಫೆಬ್ರವರಿ 12 : ಕಲುಷಿತ ನೀರು ಕುಡಿದು ಇಬ್ಬರು ಸಾವನ್ನಪ್ಪಿ, 40ಕ್ಕೂ ಅಧಿಕ ಜನರು ಅಸ್ವಸ್ಥರಾದ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿಯೇ ಕುಡಿಯುವ ನೀರು ಸರಬರಾಜು ಮಾಡಿತ್ತು.
ಭದ್ರಾವತಿ ಸಮೀಪದ ಮೈದೊಳಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತಪಟ್ಟವರನ್ನು ಶಿವಪ್ಪ (75), ಹನುಮಂತಪ್ಪ (42) ಎಂದು ಗುರುತಿಸಲಾಗಿದೆ. ಗ್ರಾಮ ಪಂಚಾಯಿತಿ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡಿತ್ತು.
ನೀರು ಕುಡಿದ ಹಲವರು ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. 19ಕ್ಕೂ ಹೆಚ್ಚು ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನೀರು ಪೂರೈಕೆ ಮಾಡುವ ಟ್ಯಾಂಕರ್‌ಗೆ ಕಲುಷಿತ ನೀರು ಸೇರ್ಪಡೆಯಾಗಿದ್ದು ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ.

ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್, ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.












Click it and Unblock the Notifications