ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿಗೆ ಶರಾವತಿ ನೀರು, ಯೋಜನೆ ವಿರುದ್ಧ ಪತ್ರ ಚಳವಳಿ

|
Google Oneindia Kannada News

ಶಿವಮೊಗ್ಗ, ಜುಲೈ 02 : ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ಜುಲೈ 10ರಂದು ಶಿವಮೊಗ್ಗ ಬಂದ್‌ಗೆ ಕರೆ ನೀಡಲಾಗಿದೆ.

ಅಣ್ಣಾ ಹಜಾರೆ ಹೋರಾಟ ಸಮಿತಿ ಮಂಗಳವಾರ ಶಿವಮೊಗ್ಗ ನಗರದಲ್ಲಿ ಪೋಸ್ಟ್ ಕಾರ್ಡ್ ಚಳವಳಿ ನಡೆಸಿತು. ಯೋಜನೆಯನ್ನು ಕೈ ಬಿಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿತು.

ಶಿವಮೊಗ್ಗ : ತುಂಗಾ ಜಲಾಶಯದಿಂದ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆಶಿವಮೊಗ್ಗ : ತುಂಗಾ ಜಲಾಶಯದಿಂದ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಶರಾವತಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವುದು ಸಂಪೂರ್ಣ ಅವೈಜ್ಞಾನಿಕ ಯೋಜನೆಯಾಗಿದೆ. ರಾಜ್ಯಕ್ಕೆ ಬೆಳಕು ನೀಡುವ ಶರಾವತಿ ನದಿಯನ್ನು ಮುಟ್ಟಿದರೆ ರಾಜ್ಯವೇ ಕತ್ತಲಲ್ಲಿ ಮುಳುಗಲಿದೆ ಎಂದು ಎಚ್ಚರಿಕೆ ನೀಡಲಾಯಿತು.

ಬೆಂಗಳೂರಿಗೆ ಶರಾವತಿ ನೀರು ಬೇಡ, ಸಾಗರ ಬ್ಲಾಕ್ ಕಾಂಗ್ರೆಸ್ ಮನವಿಬೆಂಗಳೂರಿಗೆ ಶರಾವತಿ ನೀರು ಬೇಡ, ಸಾಗರ ಬ್ಲಾಕ್ ಕಾಂಗ್ರೆಸ್ ಮನವಿ

Postcard campaign against Sharavathi water to Bengaluru

ಬೆಂಗಳೂರು ನಗರದಲ್ಲಿ ಉತ್ತಮ ಮಳೆಯಾಗುತ್ತದೆ. ಅಲ್ಲಿನ ಕೆರೆಗಳನ್ನು ಅಭಿವೃದ್ಧಿ ಮಾಡಿ, ಮಳೆ ಕೊಯ್ಲು ಯೋಜನೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತನ್ನಿ. ಆಗ ನಗರದ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಪತ್ರದಲ್ಲಿ ಮುಖ್ಯಮಂತ್ರಿಗಳಿಗೆ ಸಲಹೆ ನೀಡಲಾಗಿದೆ.

ಬೆಂಗಳೂರಿಗೆ ಶರಾವತಿ ನೀರು : ಶಿವಮೊಗ್ಗದಲ್ಲಿ ಹೋರಾಟಕ್ಕೆ ವೇದಿಕೆ ಸಿದ್ಧಬೆಂಗಳೂರಿಗೆ ಶರಾವತಿ ನೀರು : ಶಿವಮೊಗ್ಗದಲ್ಲಿ ಹೋರಾಟಕ್ಕೆ ವೇದಿಕೆ ಸಿದ್ಧ

ಜನರ ತೆರಿಗೆ ಹಣವನ್ನು ದುಂದು ವೆಚ್ಚ ಮಾಡುವ ಇಂತಹ ಯೋಜನೆಯನ್ನು ಕೈಬಿಡಬೇಕು. ಶರಾವತಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋದರೆ ಮಲೆನಾಡಿನ ಸರ್ವನಾಶವಾಗುತ್ತದೆ. ಈ ಯೋಜನೆಯನ್ನು ತಕ್ಷಣ ನಿಲ್ಲಿಸಿ ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

ಬೆಂಗಳೂರು ಜಲಮಂಡಳಿಯ ನಿವೃತ್ತ ಇಂಜಿನಿಯರ್ ಬಿ.ಎನ್.‌ತ್ಯಾಗರಾಜ್ ಅವರು ನೀಡಿರುವ ವರದಿ ಅನ್ವಯ ಶರಾವತಿಯಿಂದ ಬೆಂಗಳೂರಿಗೆ ನೀರು ತರುವ ಯೋಜನೆಗೆ ಡಿಪಿಆರ್ ಸಿದ್ಧಪಡಿಸಲು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಆದೇಶ ನೀಡಿದ್ದಾರೆ.

ಮಲೆನಾಡಿನಲ್ಲಿ ಯೋಜನೆ ವಿರೋಧಿಸಿ ಭಾರೀ ಹೋರಾಟ ನಡೆಯುತ್ತಿದೆ. ಸರ್ಕಾರ ಅವೈಜ್ಞಾನಿಕ ಯೋಜನೆ ಕೈಬಿಡಬೇಕು ಎಂದು ಆಗ್ರಹಿಸಿ ಜುಲೈ 10ರಂದು ಶಿವಮೊಗ್ಗ ಬಂದ್‌ಗೆ ಕರೆ ನೀಡಲಾಗಿದೆ.

English summary
Anna Hazare horata samithi Shivamogga protest against Sharavathi water to Bengaluru. Samithi written the postcard to Chief Minister of Karnataka and demand that project should be dropped.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X