ಶಿವಮೊಗ್ಗಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಸಿಹಿಸುದ್ದಿ
ಶಿವಮೊಗ್ಗ, ಜನವರಿ 05: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಸಿಹಿಸುದ್ದಿ. ಶಿವಮೊಗ್ಗ ನಗರದಲ್ಲಿ ಆಟೋಗಳ ಬಗ್ಗೆ ಕೇಳಿ ಬರುತ್ತಿರುವ ದೂರುಗಳ ಬಗ್ಗೆ ಜಿಲ್ಲಾಡಳಿತಗಮನವನ್ನು ಹರಿಸಿದೆ. ಖಡಕ್ ಕ್ರಮದ ಎಚ್ಚರಿಕೆಯನ್ನು ಕೊಟ್ಟಿದೆ.
ಶಿವಮೊಗ್ಗ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಟೋರಿಕ್ಷಾ ಪರವಾನಗಿ ನೀಡುವ ಕುರಿತು ಏರ್ಪಡಿಸಲಾಗಿದ್ದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯು ಜಿಲ್ಲಾಧಿಕಾರಿಗಳು ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸೆಲ್ವಮಣಿ ಆರ್. ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಶಿವಮೊಗ್ಗ ನಗರ ಶಾಸಕ ಎಸ್. ಎನ್. ಚನ್ನಬಸಪ್ಪ, ಅಪರ ಪೊಲೀಸ್ ವರಿಷ್ಠಾಧಿಕಾರಿ ಅನಿಲ್‍ಕುಮಾರ್ ಭೂಮರಡ್ಡಿ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಬಿ. ಶಂಕ್ರಪ್ಪ, ಕೆಎಸ್‍ಆರ್‌ಟಿಸಿ ಡಿಸಿ ವಿಜಯಕುಮಾರ್, ಆಟೋ ಚಾಲಕರ ಸಂಘದ ಪದಾಧಿಕಾರಿಗಳು, ಖಾಸಗಿ ಬಸ್ ಮಾಲೀಕರ ಸಂಘದವರು ಪಾಲ್ಗೊಂಡಿದ್ದರು.
ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್. ಮಾತನಾಡಿ, "ಮೊದಲನೇ ಹಂತದಲ್ಲಿ ರೈಲು ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ಇನ್ನು 20 ದಿನಗಳ ಒಳಗೆ ಆಟೋರಿಕ್ಷಾ ಪ್ರಿ-ಪೇಯ್ಡ್ ಕೌಂಟರ್‌ಗಳನ್ನು ತೆರೆಯಬೇಕು" ಎಂದುದ ಆರ್‌ಟಿಓ ಅಧಿಕಾರಿಗೆ ಸೂಚಿಸಿದರು.
ರೈಲು ನಿಲ್ದಾಣದಿಂದ ಬಸ್‍ಸ್ಟ್ಯಾಂಡ್ ಕಡೆ ತೆರಳಲು ಕೆಎಸ್‍ಆರ್‌ಟಿಸಿ ಬಸ್ ಕಾರ್ಯಾಚರಣೆಯನ್ನು 10 ದಿನಗಳ ಒಳಗೆ ಆರಂಭಿಸಬೇಕೆಂದು ಕೆಎಸ್‍ಆರ್‌ಟಿಸಿಯವರಿಗೆ ಸೂಚಿಸಿದರು. ಬಸ್ ನಿಲ್ದಾಣ ಸ್ಥಳ ನಿಗದಿ ಕುರಿತು ಆರ್‌ಟಿಓ, ಆಟೋ, ಬಸ್ ಚಾಲಕರ ಸಂಘ, ಟ್ರಾಫಿಕ್ ಪೊಲೀಸ್, ಕೆಎಸ್‍ಆರ್‌ಟಿಸಿಯವರು ಸಮೀಕ್ಷೆ ಮಾಡಿ ನಿಗದಿಪಡಿಸುವಂತೆ ಸೂಚನೆ ಕೊಟ್ಟರು.
ಸಭೆಯಲ್ಲಿ ಚರ್ಚೆ ನಡೆದ ವಿಷಯಗಳು; ಹೊಸದಾಗಿ ಖರೀದಿಸಿ, ನೋಂದಣಿಯಾದ ಆಟೋರಿಕ್ಷಾಗಳಿಗೆ ಪರವಾನಿಗೆಯನ್ನು ನೀಡುವಂತೆ ಜಿಲ್ಲಾಧಿಕಾರಿಗಳು ಹೇಳಿದರು. ನಗರದಲ್ಲಿ ನೋಂದಾಯಿತ 304 ಸಂಖ್ಯೆಯ ಆಟೋರಿಕ್ಷಾಗಳಿಗೆ ಪರವಾನಗಿ ಬಾಕಿ ಇದ್ದು ಇವುಗಳಿಗೆ ಪರವಾನಗಿ ನೀಡುವಂತೆ ಸೂಚಿಸಿದರು. ಹಾಗೂ ನಿಯಮದನ್ವಯ 15 ವರ್ಷಗಳಿಗೂ ಮೇಲ್ಪಟ್ಟ ವಾಹನಗಳ ನವೀಕರಣ ಸಾಧ್ಯವಿಲ್ಲ ಎಂದು ಹೇಳಿದರು.
ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಬಿ. ಶಂಕ್ರಪ್ಪ ಮಾತನಾಡಿ, "ನಗರದಲ್ಲಿ ಸುಮಾರು 4 ಸಾವಿರ ಆಟೋಗಳು ಚಾಲನೆಯಲ್ಲಿವೆ. ಸುಮಾರು 2 ಸಾವಿರ ಆಟೋಗಳ ನವೀಕರಣ ಬಾಕಿ ಇದೆ" ಎಂದರು.
ಆಟೋ ಚಾಲಕರ ಸಂಘದ ಪದಾಧಿಕಾರಿಗಳು, "ನಗರದಲ್ಲಿ ಕೇವಲ 304 ಅಲ್ಲ, ಸುಮಾರು 1200 ನೋಂದಾಯಿತ ಆಟೋಗಳಿದ್ದು ಅವುಗಳಿಗೆಲ್ಲ ಪರವಾನಗಿ ನೀಡಬೇಕು ಹಾಗೂ ಶೋ ರೂಮಿನವರು ಆಟೋ ಖರೀದಿ ವೇಳೆ ಪರವಾನಗಿ ಕೊಡಿಸುತ್ತೇವೆಂದು 30 ರಿಂದ 40 ಸಾವಿರದವರೆಗೆ ಹಣ ವಸೂಲಿ ಮಾಡುತ್ತಿವೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು" ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, "ಆನ್‍ಲೈನ್‍ನಲ್ಲಿ ಪರವಾನಗಿ ಬಾಕಿ ಕಡಿಮೆ ತೋರಿಸುತ್ತಿದ್ದು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಪರವಾನಗಿ ನೀಡಲಾಗುವುದು. ಹಾಗೂ ಪರವಾನಗಿ ಪಡೆಯದ ಆಟೋಗಳ ನೋಂದಣಿ ನಿಲ್ಲಿಸುವಂತೆ" ತಿಳಿಸಿದರು.
ಶಾಸಕ ಎಸ್. ಎನ್. ಚನ್ನಬಸಪ್ಪ ಮಾತನಾಡಿ, "ನಗರದಲ್ಲಿ ಹೊಸದಾಗಿ ಆಟೋರಿಕ್ಷಾಗಳನ್ನು ಖರೀದಿಸಿ ನೋಂದಣಿ ಮಾಡಿಸಿಕೊಂಡವರಿಗೆ ಪರವಾನಿಗಿ ನೀಡಬೇಕು ಹಾಗೂ ನವೀಕರಣಕ್ಕೆ ಅರ್ಹರಾದವರಿಗೆ ನವೀಕರಣ ಮಾಡಬೇಕು" ಎಂದರು.
ಆಟೋ ಚಾಲಕರು ಆಟೋಗಳಿಗೆ ರೆಟ್ರೊ ಎಲೆಕ್ಟ್ರಿಕ್ ಸ್ಟಿಕ್ಕರ್ ಅಳವಡಿಕೆ ಮಾಡಬೇಕೆಂಬ ನಿಯಮವನ್ನು ತರಲಾಗಿದೆ. ಇದರಿಂದ ಚಾಲಕರಿಗೆ ರೂ. 2000 ವರೆಗೆ ಖರ್ಚು ಬರುತ್ತದೆ. ಹಾಗೂ ಎಫ್‍ಸಿ ವೇಳೆ ಇದರ ಬಿಲ್ ಅನ್ನು ಕೇಳಲಾಗುವುದರಿಂದ ತೊಂದರೆ ಆಗುತ್ತಿದ್ದು, ಸ್ಟಿಕ್ಕರ್‌ನಿಂದ ವಿನಾಯಿತಿ ಕೋರಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, "ಸ್ಟಿಕ್ಕರ್ ಹಾಕಿಸುವುದು ಒಳ್ಳೆಯದು. ಸ್ಟಿಕ್ಕರ್ ಅಳವಡಿಕೆ ಕುರಿತಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆದೇಶದಲ್ಲಿನ ಗೊಂದಲದ ಬಗ್ಗೆ ಸಂಬಂಧಿಸಿದ ಆಯುಕ್ತರಿಗೆ ಪತ್ರ ಬರೆದು ಸ್ಪಷ್ಪನೆ ಪಡೆಯಲಾಗುವುದು. ಹಳೇ ಸ್ಟಿಕ್ಕರ್ ಇರುವವರು ಹೊಸದಾಗಿ ಹಾಕಿಸುವ ಅವಶ್ಯಕತೆ ಇಲ್ಲ" ಎಂದರು.
ಜನರ ದೂರು; ಸಭೆಯಲ್ಲಿ ಡಾ. ಶ್ರೀನಿವಾಸನ್ ಮಾತನಾಡಿ, "ರೈಲು ನಿಲ್ದಾಣದಲ್ಲಿ ಆಟೋ ಪಾಥ್ ಇದ್ದರೂ ಅಲ್ಲಿ ನಿಲುಗಡೆ ಮಾಡುತ್ತಿಲ್ಲ. ಬದಲಾಗಿ ಒಂದೆಡೆ ಆಟೋಗಳನ್ನು ಗುಡ್ಡೆ ಹಾಕಿಕೊಳ್ಳುತ್ತಿರುವುದರಿಂದ ಸಾರ್ವಜನಿಕರ ಓಡಾಟಕ್ಕೆ ಕಷ್ಟವಾಗಿದೆ" ಎಂದು ದೂರು ಹೇಳಿದರು.
ಬಸ್ಸು, ಲಾರಿ ಇತರೆ ವಾಹನಗಳು ಜೋರಾಗಿ ಹಾರ್ನ್ ಮಾಡುತ್ತಿರುವುದರಿಂದ ಕೆಲವು ರಸ್ತೆಗಳಲ್ಲಿ ಅತ್ಯಂತ ಶಬ್ದ ಮಾಲಿನ್ಯ ಉಂಟಾಗುತ್ತಿದೆ ಎಂದು ದೂರಿದರು. ಮತ್ತೊಬ್ಬರು ಬೆಳಗ್ಗಿನ ಜಾವ 5ರ ನಂತರ ಸಹ ಆಟೋದವರು 1 ಅರ್ಧ ಚಾರ್ಜ್ ಮಾಡುತ್ತಿದ್ದಾರೆ. ಮೀಟರ್ ಹಾಕುವುದಿಲ್ಲವೆಂದು ದೂರಿದರು.
ಜಿಲ್ಲಾಧಿಕಾರಿಳು ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ಆಟೋ ನಿಲ್ಲಿಸಿದ ಚಾಲಕರಿಗೆ ಸರ್ಕಲ್ ಇನ್ಸ್‌ಪೆಕ್ಟರ್ ದಂಡ ವಿಧಿಸಬೇಕು. ಜೋರಾಗಿ ಹಾರ್ನ್ ಕಂಡುಬಂದಲ್ಲಿ ಪೊಲೀಸ್ ಠಾಣೆಯ ಸಂಖ್ಯೆಗೆ ಒಂದು ದೂರು ಸಲ್ಲಿಸಿದಲ್ಲಿ ಕ್ರಮ ವಹಿಸಲಾಗುವುದು ಎಂದರು.
ಆಟೋಗಳಲ್ಲಿ ಮೀಟರ್ ಹಾಕಬೇಕು, ಹಾಗೂ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಮಾತ್ರ ಒಂದೂ ಅರ್ಧ ಚಾರ್ಜ್ ತೆಗೆದುಕೊಳ್ಳಬೇಕು. ನಂತರ ತೆಗೆದುಕೊಳ್ಳುವ ಹಾಗಿಲ್ಲ. ಈ ಸಮಯ ಮತ್ತು ದರದ ಕುರಿತು ರೈಲ್ವೆ ನಿಲ್ದಾಣದ ಬಳಿ ಸಾರ್ವಜನಿಕರ ಅನುಕೂಲಕ್ಕಾಗಿ ಒಂದು ಬೋರ್ಡ್ ಬರೆಸಿ ಹಾಕಿಸುವಂತೆ ಸೂಚಿಸಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications