• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಮೊಗ್ಗ: ಸರ್ಕಾರದ ಮಾರ್ಗಸೂಚಿ ಪ್ರಕಾರ ಸ್ವಾತಂತ್ರ್ಯೋತ್ಸವ ಆಯೋಜನೆಗೆ ಸಿದ್ಧತೆ

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ಜುಲೈ 31: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಸಿದ್ಧತೆಗಳನ್ನು ಮಾಡುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತಿಳಿಸಿದರು.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಗುರುವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ಬಾರಿಯೂ ಡಿಎಆರ್ ಪೆರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದರು.

ವೃದ್ಧನ ಅಂತ್ಯಕ್ರಿಯೆ ವಿಚಾರದಲ್ಲಿ ಮಹಾ ಎಡವಟ್ಟು ಮಾಡಿಕೊಂಡಿತಾ ಮೆಗ್ಗಾನ್ ಆಸ್ಪತ್ರೆ!

ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಜನತೆಯನ್ನು ಉದ್ದೇಶಿಸಿ‌ ಮಾತನಾಡಲಿದ್ದಾರೆ. ಆದರೆ ಈ ಬಾರಿ ಶಾಲಾ ಮಕ್ಕಳು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಸೀಮಿತ ಸಂಖ್ಯೆಯಲ್ಲಿ ಮಾತ್ರ ಸಾರ್ವಜನಿಕರು ಭಾಗವಹಿಸಲು ಅವಕಾಶವಿದ್ದು, ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು, ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಸಮಾರಂಭದ ಕೊನೆಯಲ್ಲಿ ಶಾಲಾ ಮಕ್ಕಳ ಬದಲಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೊರೊನಾ ಸೋಂಕಿನ ಬಗ್ಗೆ ಡಾ.ಗಿರಿಧರ್ ಕಜೆ ಅವರ ಸಲಹೆ ಇಲ್ಲಿದೆ

ಸಮಾರಂಭದಲ್ಲಿ ವೈದ್ಯರು, ನರ್ಸ್ ಗಳು, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಸೇರಿದಂತೆ ಆಯ್ದ ಕೊರೊನಾ ವಾರಿಯರ್ಸ್ ಗಳನ್ನು ಗೌರವಿಸಲಾಗುವುದು. ಈ ಬಾರಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸಮಾರಂಭಕ್ಕೆ ಆಹ್ವಾನಿಸಲಾಗುವುದಿಲ್ಲ. ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಅವರನ್ನು ಸನ್ಮಾನಿಸಿ ಗೌರವಿಸಲು ವ್ಯವಸ್ಥೆ ಮಾಡಬಹುದಾಗಿದೆ ಎಂದು ಸಲಹೆ ನೀಡಿದರು.

ಇನ್ನುಳಿದಂತೆ ಪ್ರತಿ ವರ್ಷದಂತೆ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಆಯೋಜಿಸಬೇಕು. ಎಲ್ಲಾ ಪ್ರಮುಖ ವೃತ್ತಗಳನ್ನು ಹಾಗೂ ಸರ್ಕಾರಿ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು ಎಂದರು. ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

English summary
Shivamogga District Collector KB Sivakumar said preparations were being made to celebrate Independence Day celebration According To The Government Guidelines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X