ಶಿವಮೊಗ್ಗ: ಖಾಸಗಿ ಬಸ್ ಪ್ರಯಾಣ ದರ ಹೆಚ್ಚಳ, ಆಟೋ ಮೀಟರ್ ರೇಟ್ ದುಬಾರಿ ಸಂಭವ!
ಶಿವಮೊಗ್ಗ, ಜುಲೈ 29: "ಶಿವಮೊಗ್ಗ ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ ಪ್ರಯಾಣ ದರವನ್ನು ಶೇ.25ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು,'' ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, "ನೆರೆಯ ಜಿಲ್ಲೆಗಳಲ್ಲಿ ಈಗಾಗಲೇ ಖಾಸಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವಂತೆ ಜಿಲ್ಲೆಯಲ್ಲಿಯೂ ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು,'' ಎಂದು ಹೇಳಿದರು.

ಅನಾರೋಗ್ಯಕರ ಪೈಪೋಟಿ ತಪ್ಪಿಸಲು ಕ್ರಮ
"ಖಾಸಗಿ ಮತ್ತು KSRTC ಬಸ್‌ಗಳ ನಡುವೆ ಅನಾರೋಗ್ಯಕರ ಪೈಪೋಟಿ ತಪ್ಪಿಸಲು ಎರಡು ಕಡೆಯವರು ಸಹಕರಿಸಬೇಕು. ಸರ್ಕಾರಿ ಬಸ್ ನಿಲ್ದಾಣದ ಒಳಗೆ ಖಾಸಗಿಯವರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಅನಾರೋಗ್ಯಕರ ಪೈಪೋಟಿಯಲ್ಲಿ ತೊಡಗುವ ಬಸ್‌ಗಳನ್ನು ತಡೆದು ನಿಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಂಚಾರಿ ಪೊಲೀಸರಿಗೆ ನಿರ್ದೇಶನ ನೀಡುವಂತೆ,'' ಅವರು ಸೂಚಿಸಿದರು.

ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಕ್ರಮ
ಆಟೋ ರಿಕ್ಷಾ ಪ್ರಯಾಣದ ಕನಿಷ್ಟ ದರವನ್ನು 40 ರೂ.ಗೆ ಪರಿಷ್ಕರಿಸಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, "ಬೇರೆ ಜಿಲ್ಲೆಗಳಲ್ಲಿರುವ ಕನಿಷ್ಟ ದರ ಸೇರಿದಂತೆ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಇದೇ ರೀತಿ ಶಿವಮೊಗ್ಗ ನಗರದ 20 ಕಿ.ಮೀ ವ್ಯಾಪ್ತಿಯಲ್ಲಿ ಆಟೋ ಚಾಲನೆಗೆ ಅವಕಾಶ ನೀಡಬೇಕೆಂಬ ಮನವಿ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು,'' ಎಂದರು.

ಹೊಸ ಆಟೋಗಳಿಗೆ ಪರವಾನಗಿ ಇಲ್ಲ
"ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಹೊಸ ಆಟೋ ಪರವಾನಗಿ ಅವಕಾಶ ನೀಡಲಾಗುತ್ತಿಲ್ಲ. ಇಲೆಕ್ಟ್ರಿಕಲ್ ಆಟೋಗಳಿಗೆ ಪರವಾನಗಿ ಅಗತ್ಯವಿಲ್ಲ. ಆದರೆ ಅದರ ಚಾಲಕರು ಸಹ ಸಮವಸ್ತ್ರವನ್ನು ಧರಿಸಬೇಕು. ಆಟೋಗಳಲ್ಲಿ ಮೀಟರ್ ಹಾಕದಿರುವ ಬಗ್ಗೆ, ಹೆಚ್ಚಿನ ದರ ವಸೂಲು ಮಾಡುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದು, ಅದಕ್ಕೆ ಅವಕಾಶ ಮಾಡಬಾರದು. ಎಲ್ಲರೂ ಕಡ್ಡಾಯವಾಗಿ ಮೀಟರ್ ಹಾಕಿ ಆಟೋ ಚಲಾಯಿಸಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು," ಎಂದು ಎಚ್ಚರಿಕೆ ನೀಡಿದರು.

ಎಲ್‍ಇಡಿ ಹೆಡ್‍ಲೈಟ್ ವಿರುದ್ಧ ಕ್ರಮ
"ಕೆಲವು ವಾಹನಗಳಲ್ಲಿ ಕಣ್ಣು ಕುಕ್ಕುವ ಎಲ್‍ಇಡಿ ಹೆಡ್‍ಲೈಟ್ ಅಳವಡಿಕೆಯಿಂದ ಅಪಘಾತಗಳು ಸಂಭವಿಸಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ವಾಹನಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು," ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, RTO ಅಧಿಕಾರಿ ಶ್ರೀಧರ್, ವಿವಿಧ ಸಂಘಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications