• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಮೊಗ್ಗ: ಖಾಸಗಿ ಬಸ್ ಪ್ರಯಾಣ ದರ ಹೆಚ್ಚಳ, ಆಟೋ ಮೀಟರ್ ರೇಟ್ ದುಬಾರಿ ಸಂಭವ!

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜುಲೈ 29: "ಶಿವಮೊಗ್ಗ ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ ಪ್ರಯಾಣ ದರವನ್ನು ಶೇ.25ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು,'' ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, "ನೆರೆಯ ಜಿಲ್ಲೆಗಳಲ್ಲಿ ಈಗಾಗಲೇ ಖಾಸಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವಂತೆ ಜಿಲ್ಲೆಯಲ್ಲಿಯೂ ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು,'' ಎಂದು ಹೇಳಿದರು.

ಅನಾರೋಗ್ಯಕರ ಪೈಪೋಟಿ ತಪ್ಪಿಸಲು ಕ್ರಮ

ಅನಾರೋಗ್ಯಕರ ಪೈಪೋಟಿ ತಪ್ಪಿಸಲು ಕ್ರಮ

"ಖಾಸಗಿ ಮತ್ತು KSRTC ಬಸ್‌ಗಳ ನಡುವೆ ಅನಾರೋಗ್ಯಕರ ಪೈಪೋಟಿ ತಪ್ಪಿಸಲು ಎರಡು ಕಡೆಯವರು ಸಹಕರಿಸಬೇಕು. ಸರ್ಕಾರಿ ಬಸ್ ನಿಲ್ದಾಣದ ಒಳಗೆ ಖಾಸಗಿಯವರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಅನಾರೋಗ್ಯಕರ ಪೈಪೋಟಿಯಲ್ಲಿ ತೊಡಗುವ ಬಸ್‌ಗಳನ್ನು ತಡೆದು ನಿಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಂಚಾರಿ ಪೊಲೀಸರಿಗೆ ನಿರ್ದೇಶನ ನೀಡುವಂತೆ,'' ಅವರು ಸೂಚಿಸಿದರು.

ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಕ್ರಮ

ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಕ್ರಮ

ಆಟೋ ರಿಕ್ಷಾ ಪ್ರಯಾಣದ ಕನಿಷ್ಟ ದರವನ್ನು 40 ರೂ.ಗೆ ಪರಿಷ್ಕರಿಸಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, "ಬೇರೆ ಜಿಲ್ಲೆಗಳಲ್ಲಿರುವ ಕನಿಷ್ಟ ದರ ಸೇರಿದಂತೆ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಇದೇ ರೀತಿ ಶಿವಮೊಗ್ಗ ನಗರದ 20 ಕಿ.ಮೀ ವ್ಯಾಪ್ತಿಯಲ್ಲಿ ಆಟೋ ಚಾಲನೆಗೆ ಅವಕಾಶ ನೀಡಬೇಕೆಂಬ ಮನವಿ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು,'' ಎಂದರು.

ಹೊಸ ಆಟೋಗಳಿಗೆ ಪರವಾನಗಿ ಇಲ್ಲ

ಹೊಸ ಆಟೋಗಳಿಗೆ ಪರವಾನಗಿ ಇಲ್ಲ

"ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಹೊಸ ಆಟೋ ಪರವಾನಗಿ ಅವಕಾಶ ನೀಡಲಾಗುತ್ತಿಲ್ಲ. ಇಲೆಕ್ಟ್ರಿಕಲ್ ಆಟೋಗಳಿಗೆ ಪರವಾನಗಿ ಅಗತ್ಯವಿಲ್ಲ. ಆದರೆ ಅದರ ಚಾಲಕರು ಸಹ ಸಮವಸ್ತ್ರವನ್ನು ಧರಿಸಬೇಕು. ಆಟೋಗಳಲ್ಲಿ ಮೀಟರ್ ಹಾಕದಿರುವ ಬಗ್ಗೆ, ಹೆಚ್ಚಿನ ದರ ವಸೂಲು ಮಾಡುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದು, ಅದಕ್ಕೆ ಅವಕಾಶ ಮಾಡಬಾರದು. ಎಲ್ಲರೂ ಕಡ್ಡಾಯವಾಗಿ ಮೀಟರ್ ಹಾಕಿ ಆಟೋ ಚಲಾಯಿಸಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು," ಎಂದು ಎಚ್ಚರಿಕೆ ನೀಡಿದರು.

 ಎಲ್‍ಇಡಿ ಹೆಡ್‍ಲೈಟ್ ವಿರುದ್ಧ ಕ್ರಮ

ಎಲ್‍ಇಡಿ ಹೆಡ್‍ಲೈಟ್ ವಿರುದ್ಧ ಕ್ರಮ

"ಕೆಲವು ವಾಹನಗಳಲ್ಲಿ ಕಣ್ಣು ಕುಕ್ಕುವ ಎಲ್‍ಇಡಿ ಹೆಡ್‍ಲೈಟ್ ಅಳವಡಿಕೆಯಿಂದ ಅಪಘಾತಗಳು ಸಂಭವಿಸಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ವಾಹನಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು," ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, RTO ಅಧಿಕಾರಿ ಶ್ರೀಧರ್, ವಿವಿಧ ಸಂಘಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

English summary
A decision has been taken to increase the fare of private buses by 25% in the Shivamogga district, said District Collector KB Shivakumar said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X