• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಭದ್ರಾವತಿಯಲ್ಲಿ ನಿಷೇಧಾಜ್ಞೆ; ಬಂಧನದ ಬಗ್ಗೆ ಶಾಸಕರ ಸ್ಪಷ್ಟನೆ

|

ಶಿವಮೊಗ್ಗ, ಮಾರ್ಚ್ 03: ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮಾರ್ಚ್ 5ರ ಮಧ್ಯರಾತ್ರಿ 12 ಗಂಟೆಯ ತನಕ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕ್ಷೇತ್ರದ ಶಾಸಕ ಬಿ. ಕೆ. ಸಂಗಮೇಶ್ವರ್ ಬಂಧನದ ಕುರಿತಾಗಿ ಸ್ಪಷ್ಟನೆಯನ್ನು ನೀಡಿದ್ದಾರೆ.

ಕನಕ ಮಂಟಪದಲ್ಲಿ ನಡೆದ ಕಬ್ಬಡಿ ಪಂದ್ಯಾವಳಿ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿತ್ತು. ನಂತರ ಬೆಳವಣಿಗೆಯಲ್ಲಿ ಮತ್ತೊಮ್ಮೆ ಗಲಾಟೆ ನಡೆಯುವ ಸುಳಿವು ಸಿಕ್ಕಿತ್ತು.

ಭದ್ರಾವತಿ ಪೊಲೀಸರ ಭರ್ಜರಿ ಬೇಟೆ: 10 ಲಕ್ಷ ರೂ. ಅಧಿಕ ಮೌಲ್ಯದ ಆಭರಣ ವಶ

ಆದ್ದರಿಂದ ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಸಂತೋಷ್ ಕುಮಾರ್ ಜಿ. ಆದೇಶ ಹೊರಡಿಸಿದ್ದಾರೆ. ಮಾರಾಮಾರಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು, ಪ್ರತಿದೂರು ದಾಖಲಾಗಿದೆ. ಐದು ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗಿದೆ.

ಭದ್ರಾವತಿ ಎಂಪಿಎಂ ಖಾಸಗೀಕರಣ; ಸರ್ಕಾರದಿಂದ ಟೆಂಡರ್ ಆಹ್ವಾನ

ಪಟ್ಟಣದಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ನಡೆಸುವುದು, ಸಭೆ ಮಾಡವುದು, ಮಾರಕಾಸ್ತ್ರ ಹಿಡಿದು ಓಡಾಡುವುದನ್ನು ನಿಷೇಧಿಸಲಾಗಿದೆ. ಪ್ರತಿಕೃತಿ ದಹನ, ಬಹಿರಂಗ ಘೋಷಣೆ ಕೂಗದಂತೆ ಸೂಚನೆ ನೀಡಲಾಗಿದೆ.

ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೋವಿಡ್‌ಗೆ ಬಲಿ

ಭದ್ರಾವತಿ ಶಾಸಕ ಬಿ. ಕೆ. ಸಂಗಮೇಶ್ವರ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಹಳೇ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಹಿನ್ನಲೆಯಲ್ಲಿ ಶಾಸಕರ ನಿವಾಸಕ್ಕೆ ಪೊಲೀಸ್ ಭದ್ರತೆಯನ್ನು ನೀಡಲಾಗಿದೆ.

ಶಾಸಕರ ಭದ್ರತೆ ಸುದ್ದಿ; ಬುಧವಾರ ವಾಟ್ಸಪ್‌ಗಳಲ್ಲಿ ಕಾಂಗ್ರೆಸ್ ಶಾಸಕ ಬಿ. ಕೆ. ಸಂಗಮೇಶ್ವರ್ ಬಂಧನವಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. "ನನ್ನನ್ನು ಯಾಕೆ ಪೊಲೀಸರು ಬಂಧಿಸುತ್ತಾರೆ. ವದಂತಿಗಳಿಗೆ ಕಿವಿಗೊಡಬೇಡಿ. ನಾನು ಬೆಂಗಳೂರಿನ ಶಾಸಕರ ಭವನದಲ್ಲಿ ಇದ್ದೇನೆ" ಎಂದು ಶಾಸಕರು ವಿಡಿಯೋ ಸಂದೇಶದ ಮೂಲಕ ಸ್ಪಷ್ಟನೆ ನೀಡಿದ್ದಾರೆ.

"ಭ್ರಷ್ಟ ಬಿಜೆಪಿ ವಿರುದ್ಧ ಹೋರಾಟ ಮಾಡಿದ್ದೇನೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಮಾಡಿದ್ದೇನೆ. ಬಿಜೆಪಿಯ ಅನಾಚಾರಗಳನ್ನು ಪ್ರಶ್ನೆ ಮಾಡಿ ಜನರಿಗೆ ತಿಳಿಸುವುದು ತಪ್ಪಾ?, ಭದ್ರಾವತಿಯಲ್ಲಿ ಕಬ್ಬಡಿ ಪಂದ್ಯ ಆಯೋಜನೆ ಮಾಡಿದ್ದು ತಪ್ಪಾ?" ಎಂದು ಶಾಸಕರು ವಿಡಿಯೋ ಸಂದೇಶದಲ್ಲಿ ಪ್ರಶ್ನೆ ಮಾಡಿದ್ದಾರೆ.

English summary
The prohibitory section 144 was imposed in Bhadravathi, Shivamogga district till March 5, 2021after clash between Congress and BJP workers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X