ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕೆ 5 ಸಾವಿರ ಎಕರೆ ಜಾಗಕ್ಕೆ ಪ್ರಸ್ತಾವನೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಅಕ್ಟೋಬರ್ 08: ಶಿವಮೊಗ್ಗದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕಾಗಿ 5 ಎಕರೆ ಜಾಗಕ್ಕಾಗಿ ಹಾಗೂ ಜಿಲ್ಲೆಯಲ್ಲಿ ಇನ್ನೊಂದು ಕೇಂದ್ರೀಯ ವಿದ್ಯಾಲಯಕ್ಕಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದರು.

ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಯಲ್ಲಿ ನಿರ್ವಹಣಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಸದನಾಗಿ ವಿವಿಧ ಅಭಿವೃದ್ಧಿಗೆ ಕಾರ್ಯಗತವಾಗಿದ್ದು, ಅಟಲ್ ಜೀ ಶಾಲೆ, ಡಿಆರ್ ಡಿ ಒ ಘಟಕ, ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ರೈಲ್ವೆ ಸಂಪರ್ಕ ಹಾಗೂ ಮೊದಲಾದ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ನಾಗಮಂಗಲದಲ್ಲಿ ಭೂಸ್ವಾಧೀನ ಸರ್ವೆ ಬಗ್ಗೆ ಎಚ್ಡಿಕೆ ಜೊತೆ ಶೆಟ್ಟರ್ ಸಭೆನಾಗಮಂಗಲದಲ್ಲಿ ಭೂಸ್ವಾಧೀನ ಸರ್ವೆ ಬಗ್ಗೆ ಎಚ್ಡಿಕೆ ಜೊತೆ ಶೆಟ್ಟರ್ ಸಭೆ

ಗ್ರಾಮ ಪಂಚಾಯತಿ ಚುನಾವಣೆ ವಾರ್ ರೂಂ ಅನ್ನು ಪ್ರತಿ ಮಂಡಲಕ್ಕೂ ವಿಸ್ತರಿಸಲಾಗುವುದು ಎಂದು ತಿಳಿಸಿದರು. ಅಭಿವೃದ್ಧಿ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸಂಸದರು ಕರೆ ನೀಡಿದರು.

Shivamogga: Proposal Submitted For Construction Of Industrial Corridor Informed BY Raghavendra

ಕಾಂಗ್ರೆಸ್ ವಿರುದ್ಧ ವಾಗ್ದಾಳಿ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಂಸದರು, ಒಂದು ಕಾಲದಲ್ಲಿ ಸಂಸತ್ ನ ಮೂರನೆಯ ಒಂದು ಭಾಗದಷ್ಟು ಸದಸ್ಯರು ಕಾಂಗ್ರೆಸ್ ನಿಂದ ಗೆದ್ದು ಬರುತ್ತಿದ್ದರು. ಆದರೆ ಇಂದು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಪ್ರತಿಪಕ್ಷ ನಾಯಕರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಟರಾಜ್, ಶಾಸಕರಾದ ಕುಮಾರ್ ಬಂಗಾರಪ್ಪ, ಆರ್ಯ ವ್ಯಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ಕುಮಾರ್, ಸೂಡಾ ಅಧ್ಯಕ್ಷ ಎಸ್. ಜ್ಯೋತಿಪ್ರಕಾಶ್, ಜಿಲ್ಲಾ ಕಾರ್ಯಕಾರಣಿ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು, ಪಾಲಿಕೆ ಸದಸ್ಯರು ಮುಂತಾದವರು ಇದ್ದರು‌.

English summary
A proposal has been submitted for the construction of an industrial corridor at Shivamogga in 5 acres said BY Raghavendra
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X