ಶಿವಮೊಗ್ಗದಲ್ಲಿ ಅನಂತಕುಮಾರ್ ಹೆಗಡೆಗೆ ಕಪ್ಪು ಬಾವುಟ ಪ್ರದರ್ಶನ
ಶಿವಮೊಗ್ಗ, ಜನವರಿ 12: ಸಂವಿಧಾನ ಬದಲಿಸಲೇ ಅಧಿಕಾರಕ್ಕೆ ಬಂದಿರುವುದಾಗಿ ಹೇಳಿಕೆ ನೀಡಿದ್ದ ಕೇಂದ್ರ ಕೇಂದ್ರ ಕೌಶಲ್ಯಾಭಿವೃದ್ದಿ ಖಾತೆ ರಾಜ್ಯ ಸಚಿವ ಅನಂತ್ ಕುಮಾರ್ ಹೆಗಡೆಯವರಿಗೆ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ.
ಶಿವಮೊಗ್ಗ ಸಾಗರ ರಸ್ತೆಯ ಫೆಸಿಟ್ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ಕಿಲ್ ವೀಲ್ಸ್ ಕಾರ್ಯಕ್ರಮ ಉದ್ಘಾಟನೆಗೆ ಸಚಿವ ಅನಂತ್ ಕುಮಾರ್ ಹೆಗಡೆ ಆಗಮಿಸಿದ್ದ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸಚಿವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಸಚಿವರು ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಜಾತ್ಯಾತೀತರ ಬಗ್ಗೆ ತುಚ್ಛವಾದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಪ್ರಚೋದನಾಕಾರಿ ಹೇಳಿಕೆ ನೀಡಿರುವ ಸಚಿವ ಅನಂತ್ ಕುಮಾರ್ ಹೆಗಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ 50ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.












Click it and Unblock the Notifications