ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ; ಪದವಿ, ಸಿಇಟಿ ಪರೀಕ್ಷೆ ವಿರೋಧಿಸಿ ಸಿಎಂ‌ ಮನೆಗೆ ಮುತ್ತಿಗೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜುಲೈ 25: ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರ ಸಿಇಟಿ ಮತ್ತು ಪದವಿ ಪರೀಕ್ಷೆ ನಡೆಸಲು ನಿರ್ಧಾರ ಮಾಡಿದೆ ಎಂದು ಆರೋಪಿಸಿ ಎನ್ ಎಸ್ ಯುಐ ಕಾರ್ಯಕರ್ತರು ಇಂದು ಇಲ್ಲಿನ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

Recommended Video

ಭಾರತದಲ್ಲಿ ಚೀನಾ ವ್ಯವಹಾರ ಇನ್ನು ಮುಂದೆ ಸುಲಭವಲ್ಲ | Oneindia Kannada

ನಗರ ಬಡಾವಣೆಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮನೆಗೆ ಎನ್ ಎಸ್ ಯುಐ ಕಾರ್ಯಕರ್ತರು ಪಿಪಿಇ ಕಿಟ್ ಧರಿಸಿ ಮುತ್ತಿಗೆ ಹಾಕಿದ್ದು, ವಿನೋಬನಗರ ಪೊಲೀಸರು ಇವರನ್ನು ಬಂಧಿಸಿದ್ದಾರೆ. ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದರೂ ಸಿಇಟಿ ಹಾಗೂ ಪದವಿ ಪರೀಕ್ಷೆ ನಡೆಸುವುದಾಗಿ ಸರ್ಕಾರ ಘೋಷಿಸಿದೆ ಎಂದು ಸಿಎಂ ಮನೆಗೆ ಮುತ್ತಿಗೆ ಹಾಕಿದರು.

ಕೋವಿಡ್ ಸೋಂಕಿದ್ದರೂ ಸಿಇಟಿ ಬರೆಯಲು ಅವಕಾಶ!ಕೋವಿಡ್ ಸೋಂಕಿದ್ದರೂ ಸಿಇಟಿ ಬರೆಯಲು ಅವಕಾಶ!

Protest By NSUI In Shivamogga Against CET Degree Exams In between Coronavirus

ರಾಜ್ಯ ಸರ್ಕಾರದ ವಿರುದ್ಧ ಸಂಘಟನೆಯ ಕಾರ್ಯಕರ್ತರು ಘೋಷಣೆ ಕೂಗಿದರು. ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ವಾಹನದಲ್ಲಿ ಠಾಣೆಗೆ ಕರೆದುಕೊಂಡು ಹೋದರು.

English summary
NSUI activists protest infront of cm house against the decision of conducting cet, degree examinations inbetween increasing coronavirus cases,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X