ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜನರ ಪ್ರವೇಶ ನಿರ್ಬಂಧ

ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟನೆಗೆ ಸಿದ್ಧಗೊಂಡಿದೆ. ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟನೆಗೊಳ್ಳಲಿದೆ. ಈಗ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

|
Google Oneindia Kannada News

ಶಿವಮೊಗ್ಗ, ಜನವರಿ 24; ಶಿವಮೊಗ್ಗ ನಗರದ ಹೊರ ವಲಯದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಫೆಬ್ರವರಿಯಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಗೊಳ್ಳಲಿದೆ.

ಮಂಗಳವಾರ ಶಿವಮೊಗ್ಗ ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಸುರಕ್ಷತಾ ಕ್ರಮದ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೇ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದ ಸುಂದರ ಒಳಾಂಗಣ ವಿನ್ಯಾಸಶಿವಮೊಗ್ಗ ವಿಮಾನ ನಿಲ್ದಾಣದ ಸುಂದರ ಒಳಾಂಗಣ ವಿನ್ಯಾಸ

ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೇ ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆಯ ಹಿನ್ನೆಲೆಯಲ್ಲಿ ಮತ್ತು ಕಾಮಗಾರಿಗಳಿಗೆ ತೊಡಕಾಗದಂತೆ, ಜನರ ಪ್ರವೇಶ ನಿರ್ಬಂಧಿಸಲಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆ ದಿನಾಂಕ ಮುಂದೂಡಿಕೆ, ಇಲ್ಲಿದೆ ವಿವರಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆ ದಿನಾಂಕ ಮುಂದೂಡಿಕೆ, ಇಲ್ಲಿದೆ ವಿವರ

Public Entry To Shimoga Airport Banned

ವಿಮಾಣ ನಿಲ್ದಾಣ ಉದ್ಘಾಟನೆ ಆಗುವವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. ನೂತನ ವಿಮಾನ ನಿಲ್ದಾಣದ ವೀಕ್ಷಣೆಗೆ ನೂರಾರು ಜನರು ಆಗಮಿಸುತ್ತಿದ್ದಾರೆ.

ವಿಮಾನ ನಿಲ್ದಾಣ ಟರ್ಮಿನಲ್ ವಿನ್ಯಾಸಕ್ಕೆ ಕಾಂಗ್ರೆಸ್ ಕ್ಯಾತೆ!ವಿಮಾನ ನಿಲ್ದಾಣ ಟರ್ಮಿನಲ್ ವಿನ್ಯಾಸಕ್ಕೆ ಕಾಂಗ್ರೆಸ್ ಕ್ಯಾತೆ!

ನಿಲ್ದಾಣದ ರನ್‍ವೇಯಲ್ಲಿ ವಾಹನ ಚಲಾಯಿಸುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳು ಜನರ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಭೇಟಿ ನೀಡುತ್ತಿರುವ ಅನೇಕರು ಅಲ್ಲಿ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡುತ್ತಿದ್ದಾರೆ. ರನ್‌ವೇನಲ್ಲಿ ವಾಹನ ಓಡಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನಿರ್ಬಂಧ ಹೇರಲಾಗಿದೆ.

ಸುಮಾರು 500 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಈ ವಿಮಾನ ನಿಲ್ದಾಣ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕನಸಾಗಿದೆ.

3.50 ಕಿ. ಮೀ. ಉದ್ದದ ರನ್‌ವೇ ನಿರ್ಮಾಣ ಮಾಡಲಾಗಿದ್ದು, ಏರ್‌ಬಸ್ ಸಹ ಇಳಿಯಲು ಅನುಕೂಲವಿದೆ. ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ ಎಂದು ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಜನವರಿ 30ರಿಂದ ತಾಂತ್ರಿಕ ಕೆಲಸಗಳು ನಡೆಯಲಿವೆ. ನಂತರ ರನ್‌ ವೇನಲ್ಲಿ ವಿಮಾನ ಇಳಿಸಿ ಮತ್ತೆ ಹಾರಿಸಿ ಪ್ರಾಯೋಗಿಕ ಹಾರಾಟ ನಡೆಸಲಾಗುತ್ತದೆ. ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂಬ ಜನರ ಬಹುದಿನದ ಬೇಡಿಕೆಯೂ ಈಡೇರಿದಂತಾಗಿದೆ.

English summary
Shivamogga deputy commissioner Dr. Selvamani R. banned public entry to Shimoga airport. Airport all set for inauguration.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X