ಆಗುಂಬೆಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಪರ್ಯಾಯ ಮಾರ್ಗಗಳು
ಶಿವಮೊಗ್ಗ, ಜೂನ್ 29: ನೈಋತ್ಯ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿಯೂ ಮಳೆ ಜೋರಾಗಿದ್ದು, ಶಿವಮೊಗ್ಗ-ಉಡುಪಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ವಾಹನಗಳ ಸುರಕ್ಷತೆ ಮೇಲೆ ಹೆಚ್ಚಿನ ಗಮನ ಹರಿಸಲಾಗಿದೆ.
ಶಿವಮೊಗ್ಗ ಜಿಲ್ಲಾಡಳಿತ ರಾಷ್ಟ್ರೀಯ ಹೆದ್ದಾರಿ-169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟ್‌ನ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿ ಭೂಕುಸಿತ ಆಗುವ ಸಂಭವ ಇರುವುದರಿಂದ ಭಾರಿ ವಾಹನ ಸಂಚಾರ ನಿಷೇಧಿಸಿದೆ.

ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಜೂನ್ 27 ರಿಂದ ಸೆಪ್ಟೆಂಬರ್ 15ರವರೆಗೆ ಆಗುಂಬೆ ಘಾಟ್ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಬದಲಿ ಮಾರ್ಗದ ಬಗ್ಗೆಯೂ ಮಾಹಿತಿ ನೀಡಲಾಗಿದೆ.
ಆದೇಶದ ವಿವರಗಳು: ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೊರಡಿಸಿರುವ ಆದೇಶ ರಾಷ್ಟ್ರೀಯ ಹೆದ್ದಾರಿ-169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸುವ ಕುರಿತು ಎಂಬ ವಿಷಯ ಒಳಗೊಂಡಿದೆ.
ಆದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ-169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವುದರಿಂದ ದಿನಾಂಕ 27/6/2024 ರಿಂದ 15/9/2024ರ ವರೆಗೆ ಸದರಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು) ನಿಷೇಧಿಸುವಂತೆ ಕಾರ್ಯಪಾಲಕ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ವಿಭಾಗ ಶಿವಮೊಗ್ಗ ಇವರು ಕೋರಿದ್ದರು.
ಪ್ರಕರಣದಲ್ಲಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಇವರು ಸಲ್ಲಿಸಿರುವ ವರದಿಯಲ್ಲಿ ರಾಷ್ಟ್ರೀಯ ಹೆದ್ದಾರಿ-169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಬಗ್ಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ವರದಿ ಪಡೆದುಕೊಂಡಿದ್ದು, ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವವಿರುವುದರಿಂದ ತಾತ್ಕಾಲಿಕವಾಗಿ ಭಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅನುವು ಮಾಡಿಕೊಡಬಹುದೆಂದು ವರದಿ ಸಲ್ಲಿಸಿರುತ್ತಾರೆ.
ಪ್ರಾದೇಶಿಕ ಸಾರಿಗೆ ಅಧಿಕಾರಿ, ಶಿವಮೊಗ್ಗ ಇವರು ಸಲ್ಲಿಸಿರುವ ವರದಿಯಲ್ಲಿ ಖುದ್ದಾಗಿ ಸ್ಥಳ ಪರಿಶೀಲನೆ ಮಾಡಿದಾಗ, ಸದರಿ ಸ್ಥಳದಲ್ಲಿ ಹೆಚ್ಚಿನ ಮಳ ಆಗುತ್ತಿದ್ದು ತಿರುವುಗಳಲ್ಲಿ ಅಲ್ಲಲ್ಲಿ ಭೂ ಕುಸಿತ ಅಗುವ ಸಂಭವ ಕಂಡುಬಂದಿದ್ದು, ಈ ಸ್ಥಳಗಳಲ್ಲಿ ಭಾರಿ ವಾಹನಗಳು ಚಲಿಸಲು ಕಷ್ಟ ಸಾಧ್ಯತೆ ಇರುವುದರಿಂದ ಉಂಟಾಗಬಹುದಾದ ಅಪಘಾತಗಳನ್ನು ತಪ್ಪಿಸುವ ಹಿತದೃಷ್ಟಿಯಿಂದ ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸುವುದು ಸೂಕ್ತ ಎಂಬ ಅಭಿಪ್ರಾಯ ಸಲ್ಲಿಸಿದ್ದಾರೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಮೋಟಾರು ವಾಹನಗಳ ಕಾಯಿದ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989ರ ಕಲಂ 221 (ಎ) (2) ಮತ್ತು (5) ರನ್ವಯ ರಾಷ್ಟ್ರೀಯ ಹೆದ್ದಾರಿ-169ಎ ಆಗುಂಬೆ ಘಾಟಿಯ ಮೂಲಕ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಆದೇಶಿಸಿದೆ.
ಭಾರೀ ವಾಹನಗಳಿಗೆ ಪರ್ಯಾಯ ಮಾರ್ಗಗಳು: ತೀರ್ಥಹಳ್ಳಿ -ಉಡುಪಿ: ತೀರ್ಥಹಳ್ಳಿ- ಮಾಸ್ತಿಕಟ್ಟೆ-ಸಿದ್ದಾಪುರ-ಕುಂದಾಪುರ ಮಾರ್ಗವಾಗಿ ಸಂಚಾರ. ಉಡುಪಿ-ತೀರ್ಥಹಳ್ಳಿ ವಾಹನಗಳು ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮೂಲಕ ಸಂಚಾರ ನಡೆಸಬಹುದು.
ಶಿವಮೊಗ್ಗ-ತೀರ್ಥಹಳ್ಳಿ-ಆಗುಂಗೆ ಮೂಲಕ ಉಡುಪಿ ಮತ್ತು ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ-169ಎನಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸುತ್ತಿರುವುದು ಇದೇ ಮೊದಲಲ್ಲ. ಪ್ರತಿ ಬಾರಿಯ ಮಳೆಗಾಳದಲ್ಲಿಯೂ ಆಗುಂಬೆ ಘಾಟ್ ರಸ್ತೆಯ ಸುರಕ್ಷತೆಯ ದೃಷ್ಟಿಯಿಂದ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಘಾಟ್ ರಸ್ತೆಯನ್ನು ಬಳಕೆ ಮಾಡಲಾಗುತ್ತದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ











Click it and Unblock the Notifications