ಆಗಸ್ಟ್ ತಿಂಗಳಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ದಾಖಲೆ ಮಳೆ !

ಶಿವಮೊಗ್ಗ, ಆಗಸ್ಟ್ 20: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 82.06 ಮಿಮಿ ಮಳೆಯಾಗಿದ್ದು, ಸರಾಸರಿ 11.72 ಮಿಮಿ ಮಳೆ ದಾಖಲಾಗಿದೆ.

Recommended Video

      India, Japan and Australia ತ್ರಿಪಕ್ಷೀಯ ಪೂರೈಕೆ ಸರಪಳಿಯನ್ನು ಸ್ಥಾಪಿಸಲು ಉತ್ಸುಕವಾಗಿವೆ | Oneindia Kannada

      ಆಗಸ್ಟ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 417.87 ಮಿಮಿ ಇದ್ದು, ಇದುವರೆಗೆ ಸರಾಸರಿ 687.07 ಮಿಮಿ ಮಳೆ ದಾಖಲಾಗಿದೆ.

      ಶಿವಮೊಗ್ಗ 2.60 ಮಿಮಿ., ಭದ್ರಾವತಿ 4.40 ಮಿಮಿ., ತೀರ್ಥಹಳ್ಳಿ 33.20 ಮಿಮಿ., ಸಾಗರ 7.06 ಮಿಮಿ., ಶಿಕಾರಿಪುರ 1.00 ಮಿಮಿ., ಸೊರಬ 6.00 ಮಿಮಿ. ಹಾಗೂ ಹೊಸನಗರ 27.80 ಮಿಮಿ. ಮಳೆಯಾಗಿದೆ.

      Shivamogga rain recored this season, Dams water level on Aug 20

      ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 103.5 ಮಿ.ಮೀರಷ್ಟು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆಗುಂಬೆಯಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

      ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಮಲೆನಾಡು ಜಿಲ್ಲೆಗಳಿಗೆ ಚದುರಿದಂತೆ ಸಾಧಾರಣ ಮಳೆ, . ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿ ಬಂದಿದೆ.

      ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ ಗಳಲ್ಲಿ:
      * ಲಿಂಗನಮಕ್ಕಿ: 1819 (ಗರಿಷ್ಠ), 1801.75 (ಇಂದಿನ ಮಟ್ಟ), 29142.00 (ಒಳಹರಿವು), 348.73 (ಹೊರಹರಿವು).
      * ಭದ್ರಾ: 186 (ಗರಿಷ್ಠ), 180.40 (ಇಂದಿನ ಮಟ್ಟ), 15326.00 (ಒಳಹರಿವು), 2710.00 (ಹೊರಹರಿವು).
      * ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 33762.00 (ಒಳಹರಿವು), 33762.00 (ಹೊರಹರಿವು).
      * ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 584.52 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 4800 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
      * ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 563.12 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 2260 (ಒಳಹರಿವು), 0.00(ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
      * ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 575.08 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1277.00 (ಒಳಹರಿವು), 864 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
      * ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 580.18 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1479.00 (ಒಳಹರಿವು), 1764.00 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+