• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ; ಯುವ ಕಾಂಗ್ರೆಸ್ ಪ್ರತಿಭಟನೆ

|

ಬೆಂಗಳೂರು, ಮಾರ್ಚ್ 02; ಗೋಕಾಕ್ ಶಾಸಕ ಮತ್ತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಸಚಿವರ ರಾಸಲೀಲೆ ಸಿಡಿ ರಾಜ್ಯ ರಾಜಕೀಯದಲ್ಲಿ ಮಂಗಳವಾರ ಭಾರೀ ಚರ್ಚೆಗೆ ಕಾರಣವಾಗಿದೆ.

ಮಂಗಳವಾರ ರಾತ್ರಿ ಶಿವಮೊಗ್ಗ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಪಿ. ಗಿರೀಶ್ ನೇತೃತ್ವದಲ್ಲಿ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ ಎಂದು ಆಗ್ರಹಿಸಿದರು.

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ; ಸಿಎಂ ಭೇಟಿಯಾದ ಗೃಹ ಸಚಿವರು

ಸಚಿವರ ರಾಸಲೀಲೆ ವಿಡಿಯೋ ಪ್ರಕರಣವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಕರ್ನಾಟಕ ಬಿಜೆಪಿ ಘಟಕ ಕೇಂದ್ರ ನಾಯಕರ ಸೂಚನೆಗಾಗಿ ಕಾಯುತ್ತಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆ ನಡೆಸಿದ್ದಾರೆ.

ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ ದೂರಿನಲ್ಲಿ ಏನಿದೆ? ಸಂಪೂರ್ಣ ವಿವರ ಇಲ್ಲಿದೆ

ಮುಖ್ಯಮಂತ್ರಿಗಳು ಬುಧವಾರ ಮಧ್ಯಾಹ್ನ 2 ಗಂಟೆಗೆ ಸಚಿವ ಸಂಪುಟ ಸಭೆಯನ್ನು ಕರೆದಿದ್ದಾರೆ. ಸಚಿವರ ರಾಜೀನಾಮೆ ಪಡೆಯುವ ಕುರಿತು ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ.

ಮಾರ್ಚ್ 4 ರಿಂದ ಕರ್ನಾಟಕ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸದನದಲ್ಲಿ ಆಗುವ ಮುಜುಗರ ತಪ್ಪಿಸಿಕೊಳ್ಳಲು ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ; ಗೋಕಾಕ್‌ನಲ್ಲಿ ಪವರ್ ಕಟ್

ಮೈಸೂರಿನಲ್ಲಿದ್ದ ರಮೇಶ್ ಜಾರಕಿಹೊಳಿ ರಾತ್ರಿ 9 ಗಂಟೆ ಸುಮಾರಿಗೆ ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಆಗಮಿಸಿದ್ದಾರೆ. ಬುಧವಾರ ದೆಹಲಿಗೆ ಭೇಟಿ ನೀಡುವುದಾಗಿ ಅವರು ಹೇಳಿಕೆ ನೀಡಿದ್ದಾರೆ.

English summary
Shivamogga yuva Congress protest against water resources minister Ramesh Jarkiholi after minister CD with a woman in a compromising position goes viral. Yuva Congress demand for minister resignation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X