ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಂದಾಯ ವಿಷಯಗಳ ನಿರ್ವಹಣೆ; ಶಿವಮೊಗ್ಗ ಜಿಲ್ಲೆ ರಾಜ್ಯಕ್ಕೆ ಪ್ರಥಮ

|
Google Oneindia Kannada News

ಶಿವಮೊಗ್ಗ, ಸೆಪ್ಟೆಂಬರ್ 17; ಕಂದಾಯ ಇಲಾಖೆಯ ವಿವಿಧ ಕಡತಗಳ ಶೀಘ್ರ ವಿಲೇವಾರಿ ಪಟ್ಟಿ ಬಿಡುಗಡೆಯಾಗಿದೆ. ರಾಜ್ಯದ ಜಿಲ್ಲೆಗಳ ಪಟ್ಟಿಯಲ್ಲಿ ಶಿವಮೊಗ್ಗಕ್ಕೆ ಆಗಸ್ಟ್ ತಿಂಗಳಿನಲ್ಲಿ ಪ್ರಥಮ ಸ್ಥಾನ ಸಿಕ್ಕಿದೆ. ಪ್ರತಿ ತಿಂಗಳು ಕಂದಾಯ ಇಲಾಖೆ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ.

ಕಂದಾಯ ಇಲಾಖೆ ಪ್ರತಿ ತಿಂಗಳು ಜಿಲ್ಲೆಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಭೂ ಪರಿವರ್ತನೆ ಅರ್ಜಿಗಳ ವಿಲೇವಾರಿ, ಉಪ ವಿಭಾಗದ ಆಯುಕ್ತರ ನ್ಯಾಯಾಲಯದ ಪ್ರಕರಣಗಳ ವಿಲೇವಾರಿ, ಜಿಲ್ಲಾಧಿಕಾರಿ ನ್ಯಾಯಾಲಯದ ಪ್ರಕರಣಗಳ ವಿಲೇವಾರಿ, ಪಹಣಿ ತಿದ್ದುಪಡಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕಡತಗಳ ವಿಲೇವಾರಿಯನ್ನು ಪರಿಗಣಿಸಿ ಈ ಸ್ಥಾನ ನೀಡಲಾಗುತ್ತದೆ.

 ಶಿವಮೊಗ್ಗ: ನಮ್ಮೂರ ಹೆಣ್ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಬ್ಯಾನರ್ ಕಟ್ಟಿದ ಗ್ರಾಮಸ್ಥರು; ಕಾರಣವೇನು? ಶಿವಮೊಗ್ಗ: ನಮ್ಮೂರ ಹೆಣ್ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಬ್ಯಾನರ್ ಕಟ್ಟಿದ ಗ್ರಾಮಸ್ಥರು; ಕಾರಣವೇನು?

ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ಮಾಹಿತಿ ನೀಡಿದ್ದು, "ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವೀಕರಿಸುವ ಎಲ್ಲಾ ಅರ್ಜಿಗಳನ್ನು ಕಾಲಮಿತಿಯ ಒಳಗಾಗಿ ವಿಲೇವಾರಿ ಮಾಡಲು ಎಲ್ಲಾ ಶಾಖಾ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದ್ದು, ಎಲ್ಲರ ಸಹಕಾರದಿಂದ ತ್ವರಿತವಾಗಿ ಕಡತಗಳ ವಿಲೇವಾರಿ ಸಾಧ್ಯವಾಗಿದೆ. ಕಚೇರಿಗೆ ಆಗಮಿಸುವ ಸಾರ್ವಜನಿಕರನ್ನು ಅಲೆದಾಡಿಸದೆ ಆದಷ್ಟು ಬೇಗನೆ ಕೆಲಸ ಕಾರ್ಯವನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ" ಎಂದು ಹೇಳಿದ್ದಾರೆ.

ಈ ವರ್ಷವೂ ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಇಲ್ಲಈ ವರ್ಷವೂ ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಇಲ್ಲ

Revenue Matters Maintenance Shivamogga District Top For Karnataka

ಕಂದಾಯ ವಿಷಯಗಳಲ್ಲಿ ಶಿವಮೊಗ್ಗ ಜಿಲ್ಲೆ ಉತ್ತಮ ಸಾಧನೆ ಮಾಡಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಭೂ ಪರಿವರ್ತನೆ ಪ್ರಕರಣಗಳು, ಉಪ ವಿಭಾಗ ಮತ್ತು ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯದ ಪ್ರಕರಣಗಳ ವಿಲೇವಾರಿಯಲ್ಲಿ ಗಣನೀಯ ಪ್ರಗತಿಯನ್ನು ಜಿಲ್ಲಾಡಳಿತ ಸಾಧಿಸಿದೆ.

 ಶಿವಮೊಗ್ಗ ಜಿಲ್ಲೆಗೆ ಎಫ್ಎಂ ರೇಡಿಯೋ ಮಂಜೂರು ಶಿವಮೊಗ್ಗ ಜಿಲ್ಲೆಗೆ ಎಫ್ಎಂ ರೇಡಿಯೋ ಮಂಜೂರು

ರೈತರಿಗೆ ಸಹಾಯಕ; ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್. ಹೊನ್ನಳ್ಳಿ ಮಾತನಾಡಿದ್ದು, "ರೈತರಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಪಹಣಿ ಪತ್ರಿಕೆಯ ಕಲಂ 3 ಮತ್ತು 9ರಲ್ಲಿನ ನ್ಯೂನತೆಗಳನ್ನು ಕಾಲಮಿತಿಯಲ್ಲಿ ತಿದ್ದುಪಡಿ ಮಾಡುವುದು ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದ ವಿಷಯಗಳಲ್ಲಿ ಉತ್ತಮ ಸಾಧನೆ ಮಾಡಲಾಗಿದೆ" ಎಂದು ಹೇಳಿದರು.

ಪ್ರಸ್ತುತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಶತ ಇ-ಆಫೀಸ್ ವ್ಯವಸ್ಥೆಯನ್ನು ಅನುಷ್ಟಾನಗೊಳಿಸಲಾಗಿದೆ. ಸ್ವೀಕರಿಸಲಾಗುವ ಪ್ರತಿಯೊಂದು ಅರ್ಜಿಯನ್ನು ಅದೇ ದಿನ ಡಿಜಟಲೀಕರಣಗೊಳಿಸಿ ಕಡತವನ್ನು ಸೃಷ್ಟಿಸಲಾಗುತ್ತಿದೆ. ಇದು ಸಂಪೂರ್ಣ ಪಾರದರ್ಶಕ ವ್ಯವಸ್ಥೆಯಾಗಿದ್ದು, ಕಡತಗಳ ವಿಲೇವಾರಿ ಸುಗಮವಾಗಲು ಸಾಧ್ಯವಾಗಿದೆ.

ಸಾರ್ವಜನಿಕರ ಅರ್ಜಿಗಳ ತ್ವರಿತವಾಗಿ ವಿಲೇವಾರಿ ಮಾಡಲು ಇ-ಆಫೀಸ್ ವ್ಯವಸ್ಥೆ ಪೂರಕವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಉಪವಿಭಾಗೀಯ ಆಯುಕ್ತರ ಕಚೇರಿ ಮತ್ತು ತಹಶೀಲ್ದಾರ್ ಕಚೇರಿಯಲ್ಲಿ ಸಹ ಇ-ಆಫೀಸ್ ವ್ಯವಸ್ಥೆಯನ್ನು ಹಂತ ಹಂತವಾಗಿ ಅನುಷ್ಟಾನಗೊಳಿಸಲಾಗುತ್ತಿದೆ.

ಮುಂದಿನ ಹಂತದಲ್ಲಿ ಇಡೀ ಕಂದಾಯ ಇಲಾಖೆಯನ್ನು ಇ-ಆಫೀಸ್ ಮೂಲಕ ಪರಸ್ಪರ ಜೋಡಿಸಲಾಗುವುದು. ಇದರಿಂದ ಸಾರ್ವಜನಿಕರು ಕಚೇರಿಗಳಿಗೆ ಓಡಾಡುವುದು ತಪ್ಪಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಸಾಮಾಜಿಕ ಭದ್ರತಾ ಯೋಜನೆಗಳ ಅನುಷ್ಟಾನ, ಗ್ರಾಮ ಪಮಚಾಯತ್ ಮಟ್ಟದಲ್ಲಿ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಘಟಕ ಸ್ಥಾಪನೆಗೆ ಭೂಮಿ ಗುರುತಿಸುವ ಪ್ರಕ್ರಿಯೆ, ಸ್ಮಶಾನಗಳಿಗೆ ಭೂಮಿಯನ್ನು ಗುರುತಿಸುವ ಪ್ರಕ್ರಿಯೆಯನ್ನು ಸಹ ಚುರುಕುಗೊಳಿಸಲಾಗಿದೆ.

ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಇನ್ನಷ್ಟು ತ್ವರಿತಗತಿಯಲ್ಲಿ ಸೇವೆಯನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಡಳಿತ ಹೇಳಿದೆ.

ದಟ್ಟವಾದ ಕಾಡು, ಗುಡ್ಡಗಳಿಂದ ಮತ್ತು ಹಲವಾರು ಜಲಪಾತಗಳನ್ನು ಒಳಗೊಂಡ ಪ್ರಸಿದ್ಧ ಪ್ರವಾಸಿ ತಾಣ ಶಿವಮೊಗ್ಗ ಜಿಲ್ಲೆಯಾಗಿದೆ. ಬಹುಪಾಲು ಪ್ರದೇಶವು ಹಚ್ಚ ಹಸಿರಿನಿಂದ ಕೂಡಿದೆ. ಶಿವಮೊಗ್ಗ ಜಿಲ್ಲೆ ಮಲೆನಾಡಿನ ಹೆಬ್ಬಾಗಿಲು ಆಗಿದೆ.

ಜಿಲ್ಲೆಯೂ ಫಲವತ್ತಾದ ಕೃಷಿ ಭೂಮಿಯನ್ನು ಹೊಂದಿದ್ದು ವಿವಿಧ ಬೆಳೆಗಳನ್ನು ಸಹ ಬೆಳೆಯಲಾಗುತ್ತದೆ. ಕಲೆ, ಸಾಹಿತ್ಯ, ರಾಜಕೀಯ ಹೀಗೆ ವಿವಿಧ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ಜಿಲ್ಲೆ ನೀಡಿದೆ.

7 ತಾಲೂಕುಗಳನ್ನು ಹೊಂದಿರುವ ಜಿಲ್ಲೆಯಲ್ಲಿ 9 ನಗರ ಸ್ಥಳೀಯ ಸಂಸ್ಥೆಗಳಿವೆ. 1532 ಗ್ರಾಮಗಳಿವೆ. ಜಿಲ್ಲೆಯ ಸಾಕ್ಷರತಾ ಪ್ರಮಾಣ ಶೇ 80.45ರಷ್ಟಿದೆ. ಜಿಲ್ಲೆಯ ಒಟ್ಟು ಜನಸಂಖ್ಯೆ 17,52,753.

English summary
Shivamogga district bagged number one rain in Karnataka in the revenue matters maintenance.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X