Get Updates
Get notified of breaking news, exclusive insights, and must-see stories!

ಶಿವಮೊಗ್ಗದಲ್ಲಿ ಜೆಡಿಎಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆ!

ಶಿವಮೊಗ್ಗ, ಏಪ್ರಿಲ್ 2; ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗುವ ಸಾಧ್ಯತೆ ಇದೆ. ಮಾಜಿ ಶಾಸಕ ಮಧು ಬಂಗಾರಪ್ಪ ಬಳಿಕ ಮತ್ತೊಬ್ಬ ನಾಯಕರು ಕಾಂಗ್ರೆಸ್ ನತ್ತ ಹೊರಟು ನಿಂತಿದ್ದಾರೆ.

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ, ತೀರ್ಥಹಳ್ಳಿಯ ಪ್ರಭಾವಿ ನಾಯಕ ಆರ್. ಎಂ. ಮಂಜುನಾಥ ಗೌಡ ಕಾಂಗ್ರೆಸ್ ಸೇರಲಿದ್ದಾರೆ. ಹಲವು ದಿನಗಳಿಂದ ಈ ಸುದ್ದಿ ಹರಿದಾಡುತ್ತಿತ್ತು. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಮಂಜುನಾಥ ಗೌಡರು ಜಿಲ್ಲೆಯಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದಾರೆ.

ಶುಕ್ರವಾರ ಆರ್. ಎಂ. ಮಂಜುನಾಥ ಗೌಡ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದರು. ಬೆಂಬಲಿಗರ ಜೊತೆ ಆಗಮಿಸಿದ್ದ ಅವರು ಕಾಂಗ್ರೆಸ್ ಸೇರುವ ಕುರಿತು ಚರ್ಚೆ ನಡೆಸಿದರು.

ಕಳೆದ ತಿಂಗಳು ಡಿ. ಕೆ. ಶಿವಕುಮಾರ್ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದರು. ಆಗ ಸಾಗರದಲ್ಲಿ ಆರ್. ಎಂ. ಮಂಜುನಾಥ ಗೌಡ ಭೇಟಿ ಮಾಡಿದ್ದರು. ಜೆಡಿಎಸ್ ಜಿಲ್ಲಾಧ್ಯಕ್ಷರೇ ಪಕ್ಷ ಬಿಡಲು ಹೊರಟಿರುವುದು ಪಕ್ಷಕ್ಕೆ ಭಾರೀ ಹಿನ್ನಡೆ ಉಂಟು ಮಾಡಲಿದೆ.

ಮಂಜುನಾಥ ಗೌಡ ಕಾಂಗ್ರೆಸ್‌ಗೆ?

ಮಂಜುನಾಥ ಗೌಡ ಕಾಂಗ್ರೆಸ್‌ಗೆ?

ಆರ್. ಎಂ. ಮಂಜುನಾಥ ಗೌಡ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆ ಸಂಬಂಧ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಡಿ. ಸುಧಾಕರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಮುಂತಾದವರು ಜೊತೆಯಲ್ಲಿದ್ದರು.

2018ರ ಚುನಾವಣೆ ಸೋಲು

2018ರ ಚುನಾವಣೆ ಸೋಲು

2018ರ ಜನವರಿಯಲ್ಲಿ ಆರ್. ಎಂ. ಮಂಜುನಾಥ ಗೌಡ ಅವರು ಜೆಡಿಎಸ್‌ ಸೇರುವುದಾಗಿ ಘೋಷಣೆ ಮಾಡಿದ್ದರು. ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು 40,127 ಮತಗಳನ್ನು ಪಡೆದು ಸೋಲು ಕಂಡಿದ್ದರು. ಬಿಜೆಪಿಯ ಆರಗ ಜ್ಞಾನೇಂದ್ರ ಶಾಸಕರಾಗಿ ಆಯ್ಕೆಯಾಗಿದ್ದರು.

ಕಿಮ್ಮನೆ ರತ್ನಾಕರ್ ಭೇಟಿ

ಕಿಮ್ಮನೆ ರತ್ನಾಕರ್ ಭೇಟಿ

ತೀರ್ಥಹಳ್ಳಿ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್‌ ವಕ್ತಾರ ಕಿಮ್ಮನೆ ರತ್ನಾಕರ್ ಆರ್. ಎಂ. ಮಂಜುನಾಥ ಗೌಡ ಕಾಂಗ್ರೆಸ್ ಸೇರಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇಂದು ಅವರು ಸಹ ಡಿ. ಕೆ. ಶಿವಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಜಿಲ್ಲಾಧ್ಯಕ್ಷರ ವಿರುದ್ಧ ಆಕ್ರೋಶ

ಜಿಲ್ಲಾಧ್ಯಕ್ಷರ ವಿರುದ್ಧ ಆಕ್ರೋಶ

ಕೆಲವು ದಿನಗಳ ಹಿಂದೆ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಸಭೆ ನಡೆಯಿತು. ಸಭೆಯಲ್ಲಿ ಆರ್. ಎಂ. ಮಂಜುನಾಥ ಗೌಡ ಅವರ ವಿರುದ್ಧ ಮುಖಂಡರು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಮಂಜುನಾಥ ಗೌಡ ಅವರನ್ನು ರಾತ್ರೋರಾತ್ರಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅದು ಪಕ್ಷದ ಕ್ರಮವೇ ಅಲ್ಲ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಅಧ್ಯಕ್ಷರನ್ನು ಬದಲಾವಣೆ ಮಾಡಿ ಎಂಬ ಕೂಗು ಸಹ ಕೇಳಿ ಬಂದಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+