• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಮೊಗ್ಗದಲ್ಲಿ ಜೆಡಿಎಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆ!

|

ಶಿವಮೊಗ್ಗ, ಏಪ್ರಿಲ್ 2; ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗುವ ಸಾಧ್ಯತೆ ಇದೆ. ಮಾಜಿ ಶಾಸಕ ಮಧು ಬಂಗಾರಪ್ಪ ಬಳಿಕ ಮತ್ತೊಬ್ಬ ನಾಯಕರು ಕಾಂಗ್ರೆಸ್ ನತ್ತ ಹೊರಟು ನಿಂತಿದ್ದಾರೆ.

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ, ತೀರ್ಥಹಳ್ಳಿಯ ಪ್ರಭಾವಿ ನಾಯಕ ಆರ್. ಎಂ. ಮಂಜುನಾಥ ಗೌಡ ಕಾಂಗ್ರೆಸ್ ಸೇರಲಿದ್ದಾರೆ. ಹಲವು ದಿನಗಳಿಂದ ಈ ಸುದ್ದಿ ಹರಿದಾಡುತ್ತಿತ್ತು. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಮಂಜುನಾಥ ಗೌಡರು ಜಿಲ್ಲೆಯಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದಾರೆ.

ಸಿದ್ದರಾಮಯ್ಯ ಭೇಟಿ ಬಳಿಕ ಮಧು ಬಂಗಾರಪ್ಪ ಹೇಳಿದ್ದೇನು? ಸಿದ್ದರಾಮಯ್ಯ ಭೇಟಿ ಬಳಿಕ ಮಧು ಬಂಗಾರಪ್ಪ ಹೇಳಿದ್ದೇನು?

ಶುಕ್ರವಾರ ಆರ್. ಎಂ. ಮಂಜುನಾಥ ಗೌಡ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದರು. ಬೆಂಬಲಿಗರ ಜೊತೆ ಆಗಮಿಸಿದ್ದ ಅವರು ಕಾಂಗ್ರೆಸ್ ಸೇರುವ ಕುರಿತು ಚರ್ಚೆ ನಡೆಸಿದರು.

ಮಂಜುನಾಥ ಗೌಡ ಕಾಂಗ್ರೆಸ್ ಸೇರ್ಪಡೆಗೆ ಕಿಮ್ಮನೆ ವಿರೋಧ! ಮಂಜುನಾಥ ಗೌಡ ಕಾಂಗ್ರೆಸ್ ಸೇರ್ಪಡೆಗೆ ಕಿಮ್ಮನೆ ವಿರೋಧ!

ಕಳೆದ ತಿಂಗಳು ಡಿ. ಕೆ. ಶಿವಕುಮಾರ್ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದರು. ಆಗ ಸಾಗರದಲ್ಲಿ ಆರ್. ಎಂ. ಮಂಜುನಾಥ ಗೌಡ ಭೇಟಿ ಮಾಡಿದ್ದರು. ಜೆಡಿಎಸ್ ಜಿಲ್ಲಾಧ್ಯಕ್ಷರೇ ಪಕ್ಷ ಬಿಡಲು ಹೊರಟಿರುವುದು ಪಕ್ಷಕ್ಕೆ ಭಾರೀ ಹಿನ್ನಡೆ ಉಂಟು ಮಾಡಲಿದೆ.

'ಕೈ’ ಹಿಡಿದ ಮಧು: ಉತ್ತರ ಕನ್ನಡ ರಾಜಕಾರಣದ ಕಥೆಯೇನು?'ಕೈ’ ಹಿಡಿದ ಮಧು: ಉತ್ತರ ಕನ್ನಡ ರಾಜಕಾರಣದ ಕಥೆಯೇನು?

ಮಂಜುನಾಥ ಗೌಡ ಕಾಂಗ್ರೆಸ್‌ಗೆ?

ಮಂಜುನಾಥ ಗೌಡ ಕಾಂಗ್ರೆಸ್‌ಗೆ?

ಆರ್. ಎಂ. ಮಂಜುನಾಥ ಗೌಡ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆ ಸಂಬಂಧ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಡಿ. ಸುಧಾಕರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಮುಂತಾದವರು ಜೊತೆಯಲ್ಲಿದ್ದರು.

2018ರ ಚುನಾವಣೆ ಸೋಲು

2018ರ ಚುನಾವಣೆ ಸೋಲು

2018ರ ಜನವರಿಯಲ್ಲಿ ಆರ್. ಎಂ. ಮಂಜುನಾಥ ಗೌಡ ಅವರು ಜೆಡಿಎಸ್‌ ಸೇರುವುದಾಗಿ ಘೋಷಣೆ ಮಾಡಿದ್ದರು. ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು 40,127 ಮತಗಳನ್ನು ಪಡೆದು ಸೋಲು ಕಂಡಿದ್ದರು. ಬಿಜೆಪಿಯ ಆರಗ ಜ್ಞಾನೇಂದ್ರ ಶಾಸಕರಾಗಿ ಆಯ್ಕೆಯಾಗಿದ್ದರು.

ಕಿಮ್ಮನೆ ರತ್ನಾಕರ್ ಭೇಟಿ

ಕಿಮ್ಮನೆ ರತ್ನಾಕರ್ ಭೇಟಿ

ತೀರ್ಥಹಳ್ಳಿ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್‌ ವಕ್ತಾರ ಕಿಮ್ಮನೆ ರತ್ನಾಕರ್ ಆರ್. ಎಂ. ಮಂಜುನಾಥ ಗೌಡ ಕಾಂಗ್ರೆಸ್ ಸೇರಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇಂದು ಅವರು ಸಹ ಡಿ. ಕೆ. ಶಿವಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಜಿಲ್ಲಾಧ್ಯಕ್ಷರ ವಿರುದ್ಧ ಆಕ್ರೋಶ

ಜಿಲ್ಲಾಧ್ಯಕ್ಷರ ವಿರುದ್ಧ ಆಕ್ರೋಶ

ಕೆಲವು ದಿನಗಳ ಹಿಂದೆ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಸಭೆ ನಡೆಯಿತು. ಸಭೆಯಲ್ಲಿ ಆರ್. ಎಂ. ಮಂಜುನಾಥ ಗೌಡ ಅವರ ವಿರುದ್ಧ ಮುಖಂಡರು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಮಂಜುನಾಥ ಗೌಡ ಅವರನ್ನು ರಾತ್ರೋರಾತ್ರಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅದು ಪಕ್ಷದ ಕ್ರಮವೇ ಅಲ್ಲ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಅಧ್ಯಕ್ಷರನ್ನು ಬದಲಾವಣೆ ಮಾಡಿ ಎಂಬ ಕೂಗು ಸಹ ಕೇಳಿ ಬಂದಿತ್ತು.

English summary
Shivamogga JD(S) district president R. M. Manjunath Gowda met the KPCC president D. K. Shivakumar and discuss about joining of Congress. He contest for 2018 assembly elections form Thirthahalli assembly constituency as JD(S) candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X