ಶಿವಮೊಗ್ಗ ಜೆಡಿಎಸ್‌ಗೆ ನೂತನ ಸಾರಥಿ ನೇಮಕ

ಶಿವಮೊಗ್ಗ, ಆಗಸ್ಟ್ 13 : ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಯತ್ತ ಗಮನ ಹರಿಸಿದೆ. ಶಿವಮೊಗ್ಗ ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷರಾಗಿ ಆರ್‌.ಎಂ.ಮಂಜುನಾಥ ಗೌಡ ಅವರನ್ನು ನೇಮಕ ಮಾಡಲಾಗಿದೆ.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಆರ್.ಎಂ.ಮಂಜುನಾಥ ಗೌಡ ಅವರನ್ನು ಅಧ್ಯಕ್ಷರಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಿರಂಜನ್ ಅವರು ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು.

ಆರ್.ಎಂ.ಮಂಜುನಾಥ ಗೌಡ ಅವರು 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ತೊರೆದು ಜೆಡಿಎಸ್ ಸೇರಿದ್ದರು. ಚುನಾವಣೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ 40127 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು.

RM Manjunatha Gowda

ಒಬ್ಬರೂ ಶಾಸಕರಿಲ್ಲ : 2013ರ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಮೂರು ಸ್ಥಾನಗಳಲ್ಲಿ ಜಯಗಳಿಸಿತ್ತು. ಆದರೆ, 2018ರ ಚುನಾವಣೆಯಲ್ಲಿ ಯಾವುದೇ ಕ್ಷೇತ್ರದಲ್ಲಿ ಜಯಗಳಿಸಿಲ್ಲ. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವುದರಿಂದ ಪಕ್ಷ ಸಂಘಟನೆ ಮಾಡುವುದು ನೂತನ ಅಧ್ಯಕ್ಷರ ಮುಂದಿರುವ ಸವಾಲು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+