ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದಲ್ಲಿ ರೌಡಿ ಪರೇಡ್, ಚಟುವಟಿಕೆ ಬಿಡಲು ಲಾಸ್ಟ್‌ ವಾರ್ನಿಂಗ್ ಕೊಟ್ಟ ಎಸ್‌ಪಿ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜುಲೈ 4: ಬಕ್ರೀದ್, ಗಣೇಶೋತ್ಸವ ಸೇರಿದಂತೆ ಸಾಲು ಸಾಲು ಹಬ್ಬಗಳು ಬರುತ್ತಿರುವುದರಿಂದ ರೌಡಿಗಳ ಮೇಲೆ ಪೊಲೀಸರು ಹೆಚ್ಚಿನ ನಿಗಾ ಇರಿಸಿದ್ದಾರೆ. ಶಿವಮೊಗ್ಗದಲ್ಲಿ ಭಾನುವಾರ ರೌಡಿ ಪರೇಡ್ ಮಾಡಿ, ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

ನಗರದ ಡಿಎಆರ್ ಮೈದಾನದಲ್ಲಿ ರೌಡಿ ಪರೇಡ್ ನಡೆಸಲಾಯಿತು. 175 ರೌಡಿಗಳು ಪರೇಡ್‌ನಲ್ಲಿ ಪಾಲ್ಗೊಂಡಿದ್ದರು. ಪ್ರತಿಯೊಬ್ಬರ ಮಾಹಿತಿ ಪಡೆದ ಜಿಲ್ಲಾ ರಕ್ಷಣಾಧಿಕಾರಿ ಅವರು, ಕಾನೂನು ಬಾಹಿರ ಚಟುವಟಿಕೆ ನಿಲ್ಲಿಸುವಂತೆ ಖಡಕ್ ಎಚ್ಚರಿಕೆ ನೀಡಿದರು.

ಕುವೆಂಪು ವಿವಿ ಎಡವಟ್ಟು, ಪುಸ್ತಕವಿಲ್ಲದೇ ಗೊಂದಲದಲ್ಲಿ ವಿದ್ಯಾರ್ಥಿಗಳುಕುವೆಂಪು ವಿವಿ ಎಡವಟ್ಟು, ಪುಸ್ತಕವಿಲ್ಲದೇ ಗೊಂದಲದಲ್ಲಿ ವಿದ್ಯಾರ್ಥಿಗಳು

ಶಿವಮೊಗ್ಗ ಉಪ ವಿಭಾಗದ ಆರು ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳು ಪರೇಡ್‌ನಲ್ಲಿ ಪಾಲ್ಗೊಂಡಿದ್ದರು. ದೊಡ್ಡಪೇಟೆ, ಕೋಟೆ, ವಿನೋಬನಗರ, ಜಯನಗರ, ತುಂಗಾ ನಗರ ಮತ್ತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳಿದ್ದರು. ಆಯಾ ಠಾಣೆಗಳ ವ್ಯಾಪ್ತಿಯ ರೌಡಿಗಳನ್ನು ಪ್ರತ್ಯೇಕವಾಗಿ ನಿಲ್ಲಿಸಿ ವಿಚಾರಣೆ ನಡೆಸಲಾಯಿತು.

ಸೈಕಲ್ ಆಯಿತು ಈಗ ಸರ್ಕಾರಿ ಶಾಲಾ ಮಕ್ಕಳಿಗಿಲ್ಲ ಶೂ, ಸಾಕ್ಸ್ ಭಾಗ್ಯ!ಸೈಕಲ್ ಆಯಿತು ಈಗ ಸರ್ಕಾರಿ ಶಾಲಾ ಮಕ್ಕಳಿಗಿಲ್ಲ ಶೂ, ಸಾಕ್ಸ್ ಭಾಗ್ಯ!

ಚಟುವಟಿಕೆ ನಿಲ್ಲಿಸಲು ಡಿಸೆಂಬರ್ ಡೆಡ್‌ಲೈನ್

ಚಟುವಟಿಕೆ ನಿಲ್ಲಿಸಲು ಡಿಸೆಂಬರ್ ಡೆಡ್‌ಲೈನ್

ಪರೇಡ್‌ನಲ್ಲಿ ಪಾಲ್ಗೊಂಡಿದ್ದ ಕೆಲವರು ಈಗಾಗಲೇ ತಮ್ಮ ಎಲ್ಲಾ ಚಟುವಟಿಕೆ ನಿಲ್ಲಿಸಿದ್ದಾರೆ. ಅವರ ಕುರಿತು ಪಟ್ಟಿ ಸಿದ್ಧಪಡಿಸಿಕೊಂಡಿದ್ದೇವೆ. ಡಿಸೆಂಬರ್ ತನಕ ಅವರ ಮೇಲೆ ನಿಗಾ ವಹಿಸಲಾಗುತ್ತದೆ. ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸದೆ ಇದ್ದರೆ ಅವರನ್ನು ರೌಡಿ ಪಟ್ಟಿಯಿಂದ ಹೊರಗಿಡುವ ಕಾರ್ಯ ನಡೆಯಲಿದೆ ಎಂದು ಪರೇಡ್‌ನಲ್ಲಿ ಭಾಗವಹಿಸಿದ್ದ ರೌಡಿಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಹೇಳಿದರು.

ರೌಡಿ ಶೀಟರ್‌ಗಳ ಮೇಲೆ ನಿರಂಗರ ನಿಗಾ

ರೌಡಿ ಶೀಟರ್‌ಗಳ ಮೇಲೆ ನಿರಂಗರ ನಿಗಾ

ರೌಡಿ ಚಟುವಟಿಕೆಯಲ್ಲಿ ತೊಡಗಿರುವವರ ಮೇಲೆ ನಿರಂತರ ನಿಗಾ ವಹಿಸಲಾಗುತ್ತದೆ. ಅವರು ಯಾರೊಂದಿಗೆ ಸೇರುತ್ತಾರೆ, ಸಹಚರರು ಯಾರು, ಎಲ್ಲಿ ಸೇರುತ್ತಾರೆ ಎನ್ನುವ ಕುರಿತು ಮಾಹಿತಿ ಕಲೆ ಹಾಕಲಾಗುತ್ತದೆ. ನಿರಂತರವಾಗಿ ಪರಿಶೀಲನೆ ನಡೆಯಲಿದೆ. ಅಲ್ಲದೇ ಅಂತಹ ವ್ಯಕ್ತಿಗಳ ಮನೆಗಳಿಗೂ ತೆರಳಿ ಪರಿಶೀಲನೆ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದರು.

ಗಾಂಜಾ ಹಾವಳಿ ತಪ್ಪಿಸಲು ಕ್ರಮ

ಗಾಂಜಾ ಹಾವಳಿ ತಪ್ಪಿಸಲು ಕ್ರಮ

ಜಿಲ್ಲೆಯಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದ್ದು, ಇದರ ಕಡಿವಾಣಕ್ಕೂ ಕ್ರಮ ಕೈಗೊಳ್ಳಲಾಗಿದೆ. ರೌಡಿ ಪರೇಡ್‌ಗೆ ಬಂದಿದ್ದವರ ಪೈಕಿ ಕೆಲವರು ಗಾಂಜಾ ಸೇವನೆ ಮಾಡುವ ಶಂಕೆ ಇದ್ದು, ಅಂತಹವರ ವಿರುದ್ಧ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಎಚ್ಚರಿಕೆ ನೀಡಿದರು.

ಹಬ್ಬಗಳ ಹಿನ್ನಲೆ ಜಾಗೃತಿ

ಹಬ್ಬಗಳ ಹಿನ್ನಲೆ ಜಾಗೃತಿ

ಮುಂದಿನ ತಿಂಗಳಿನಿಂದ ಈ ವರ್ಷದ ಸಾಲು ಸಾಲು ಹಬ್ಬಗಳು ಬರಲಿವೆ. ಈ ಹಿನ್ನೆಲೆಯಲ್ಲಿ ರೌಡಿಗಳ ಮೇಲೆ ಹೆಚ್ಚು ನಿಗಾ ವಹಿಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಕೋಮು ಸೂಕ್ಷ್ಮ ಇರುವುದರಿಂದ ರೌಡಿಗಳ ಮೇಲೆ ಹೆಚ್ಚು ಗಮನ ವಹಿಸಿದ್ದೇವೆ. ಬಕ್ರೀದ್, ಗಣೇಶ ಹಬ್ಬ, ಈದ್ ಮಿಲಾದ್ ಹಬ್ಬಗಳಿವೆ. ಬಕ್ರೀದ್ ಹಿನ್ನೆಲೆಯಲ್ಲಿ ಗೋವುಗಳ ಸಾಗಣೆ ಮಾಡುವ ಸದ್ಯತೆ ಇರುವುದರಿಂದ, ಅಂತಹವರಿಗೆ ಎಚ್ಚರಿಕೆ ನೀಡಲಾಗಿದೆ. ಕೆಲವರ ಮೇಲೆ ಗೂಂಡಾ ಕಾಯ್ದೆ ಹಾಕಲಾಗುತ್ತಿದೆ. ಈಗಾಗಲೇ ಚೋರ್ ಸಲೀಂ ಎಂಬಾತನ ವಿರುದ್ಧ ಗೂಂಡಾ ಕಾಯ್ದೆ ಹಾಕಲಾಗಿದೆ. ಕಡೇಕಲ್ ಹಬೀಬ್ ಎಂಬಾತನ ವಿರುದ್ಧ ಗೂಂಡಾ ಕಾಯ್ದೆಗೆ ಶಿಫಾರಸು ಮಾಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿಪ್ರಸಾದ್ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯಾದ್ಯಂತ ಸುಮಾರು 1400 ರೌಡಿಗಳಿದ್ದಾರೆ. ಶಿವಮೊಗ್ಗ ಉಪ ವಿಭಾಗದಲ್ಲಿಯೇ ಸುಮಾರು 800 ರೌಡಿಶೀಟರ್‌ಗಳಿದ್ದಾರೆ ಎಂದು ಕಮಿಷನರ್ ತಿಳಿಸಿದ್ದಾರೆ.

Recommended Video

Kohli ಹಾಗು Bairstow ನಡುವೆ ಏನಿದು ಗಲಾಟೆ | *Cricket | OneIndia Kannada

English summary
Shivamogga SP Lakshmi Prasad conducted Rowdy parade on Sunday. He warned them to stop the illegal activity before December.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X