ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ; ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಮಾರ್ಚ್ 14; ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿನ ಸಮಸ್ಯೆ ಖಂಡಿಸಿ ಇವತ್ತು ವಿದ್ಯಾರ್ಥಿನಿಯರು ದಿಢೀರ್ ಪ್ರತಿಭಟನೆ ನಡೆಸಿದರು. ಕಾಲೇಜು ಮುಂಭಾಗ ಧರಣಿ ಕುಳಿತ ವಿದ್ಯಾರ್ಥಿನಿಯರು, ತಕ್ಷಣಕ್ಕೆ ಸಮಸ್ಯೆ ಪರಿಹರಿಸಬೇಕು ಎಂದು ಪಟ್ಟು ಹಿಡಿದರು.

ಕಳೆದ ವಾರ ಸಹ್ಯಾದ್ರಿ ಕಾಲೇಜಿನ 12 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದರು. ಹೊಟ್ಟನೋವು, ವಾಂತಿಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಾಲೇಜು ವತಿಯಿಂದ ಆಸ್ಪತ್ರೆಯ ಖರ್ಚು ಭರಿಸಲಾಗಿತ್ತು. ಈಗ ಹಣ ಹಿಂತಿರುಗಿಸುವಂತೆ ತಿಳಿಸಲಾಗಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದರು.

ನಿಂದನೆ, ಬಲವಂತದ ಮತಾಂತರಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ; ಹಾಸ್ಟೆಲ್ ವಾರ್ಡನ್ ಬಂಧನನಿಂದನೆ, ಬಲವಂತದ ಮತಾಂತರಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ; ಹಾಸ್ಟೆಲ್ ವಾರ್ಡನ್ ಬಂಧನ

ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಗುಣಮಟ್ಟದ ಆಹಾರ ನೀಡುತ್ತಿಲ್ಲ. ಪರೀಕ್ಷೆ ಸೇರಿದಂತೆ ವಿವಿಧ ಕಾರಣಕ್ಕೆ ಕಾಲೇಜಿಗೆ ಬರುವ ಅತಿಥಿಗಳಿಗೆ ಹಾಸ್ಟೆಲ್‌ನಿಂದ ಊಟ ಸರಬರಾಜು ಮಾಡುತ್ತಾರೆ. ಅದರ ಹೊರೆಯನ್ನು ವಿದ್ಯಾರ್ಥಿನಿಯರ ಮೇಲೆ ಹೊರಿಸಲಾಗುತ್ತಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದರು.

 ಶಿವಮೊಗ್ಗ: ಸಹ್ಯಾದ್ರಿ ಕಾಲೇಜು ಹಾಸ್ಟೆಲ್‌ನ 27 ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಸಹ್ಯಾದ್ರಿ ಕಾಲೇಜು ಹಾಸ್ಟೆಲ್‌ನ 27 ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Sahyadri College Hostel Students Protest

ಹಾಸ್ಟೆಲ್‌ನಲ್ಲಿ ಶೌಚಾಲಯ ಶುಚಿಯಾಗಿಲ್ಲ. ಅಡುಗೆ ಮನೆಯಲ್ಲೂ ಶುಚಿತ್ವ ಕಾಯ್ದುಕೊಂಡಿಲ್ಲ. ಸೆಕ್ಯೂರಿಟಿಗಳು ಮದ್ಯಪಾನ ಮಾಡಿ ಬರುತ್ತಾರೆ. ಅಲ್ಲದೆ ವಿದ್ಯಾರ್ಥಿನಿಯರ ಹಾಸ್ಟೆಲ್'ನಲ್ಲಿ ಹಲವು ಸಮಸ್ಯೆಗಳಿವೆ. ಅವುಗಳನ್ನು ಕೂಡಲೆ ಪರಿಹಾರ ಮಾಡಬೇಕು ಎಂದು ಆಗ್ರಹಿಸಿದರು.

 ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳಿಂದ ಕುವೆಂಪು ವಿವಿ ನಗರ ಕಚೇರಿ ಮುತ್ತಿಗೆ ಯತ್ನ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳಿಂದ ಕುವೆಂಪು ವಿವಿ ನಗರ ಕಚೇರಿ ಮುತ್ತಿಗೆ ಯತ್ನ

ಹಾಸ್ಟೆಲ್ ಆಡಳಿತದ ವಿರುದ್ಧ ಆಕ್ರೋಶ; ತರಗತಿ ಆರಂಭವಾಗುವ ಹೊತ್ತಿಗೆ ಸಹ್ಯಾದ್ರಿ ಕಾಲೇಜು ಮುಂಭಾಗ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಕಾಲೇಜು ಆಡಳಿತ ಮಂಡಳಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಹಾಸ್ಟೆಲ್ ಅವ್ಯವಸ್ಥೆಯನ್ನು ಕೂಡಲೆ ಪರಿಹರಿಸಬೇಕು ಎಂದು ವಿದ್ಯಾರ್ಥಿನಿಯರ ಆಗ್ರಹಿಸಿದರು. ಅಲ್ಲದೆ ಕುಲಪತಿ ಅವರು ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಪಟ್ಟು ಹಿಡಿದರು.

ಕಾಲೇಜು ಪ್ರಾಂಶುಪಾಲರು ಹೇಳಿದ್ದೇನು?; ಮಾಧ್ಯಮಗಳ ಜೊತೆಗೆ ಮಾತನಾಡಿದ ಸಹ್ಯಾದ್ರಿ ವಿಜ್ಞಾನ ಕಾಲೇಜು ಪ್ರಾಂಶುಪಾಲೆ ವಾಗ್ದೇವಿ ಅವರು, "ಮೂರು ದಿನದ ಹಿಂದೆ 20 ವಿದ್ಯಾರ್ಥಿನಿಯರಿಗೆ ಸಂಜೆ ವಾಂತಿಯಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. 11 ವಿದ್ಯಾರ್ಥಿನಿಯರ ಹೊರತು ಉಳಿದವರಿಗೆ ಚಿಕಿತ್ಸೆ ನೀಡಿ ಹಿಂದಕ್ಕೆ ಕಳುಹಿಸಿದರು. ಉಳಿದವರನ್ನು ರಾತ್ರಿ ಆಸ್ಪತ್ರೆಯಲ್ಲೆ ದಾಖಲು ಮಾಡಿಕೊಳ್ಳಲಾಯಿತು. ಮರುದಿನ ಅವರು ಡಿಸ್ಚಾರ್ಜ್ ಆದರು "ಎಂದು ತಿಳಿಸಿದರು.

"ವಿದ್ಯಾರ್ಥಿನಿಯರು ವಾಂತಿ ಮಾಡಿ ಹಾಗೆ ಬಿಟ್ಟು ಹೋಗಿದ್ದರು. ಅದನ್ನು ಸ್ವಚ್ಛ ಮಾಡಿರಲಿಲ್ಲ. ಶುಚಿಗೊಳಿಸುವ ಸಿಬ್ಬಂದಿ ಸ್ವಚ್ಛಗೊಳಿಸಿದ್ದಾರೆ. ಆಗ ವಿದ್ಯಾರ್ಥಿಯರು ಫ್ರೈಡ್ ರೈಸ್, ಚಿಕನ್ ಸೇವಿಸಿರುವುದು ಗೊತ್ತಾಗಿದೆ" ಎಂದು ಪ್ರಾಂಶುಪಾಲರು ಹೇಳಿದರು.

ಇನ್ನು, ವಿಚಾರ ತಿಳಿದು ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡ ಹಾಸ್ಟೆಲ್‌ಗೆ ಭೇಟಿ ನೀಡಿದ್ದರು. ಆ ದಿನ ಮಾಡಿದ್ದ ಪಾಯಸ, ಮಜ್ಜಿಗೆಯನ್ನು ಪರಿಶೀಲಿಸಿದರು. ತಾವು ಕೂಡ ಸೇವಿಸಿದರು. ಕುಡಿಯುವ ನೀರಿನ ಕುರಿತು ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ, ಆಸ್ಪತ್ರೆ ವೆಚ್ಚವನ್ನು ಭರಿಸುವುದು ಹೇಗೆ ಅನ್ನುವ ಕುರಿತು ಕೇಳಿದ್ದು ನಿಜ ಎಂದು ತಿಳಿಸಿದರು.

600 ವಿದ್ಯಾರ್ಥಿನಿಯರು ಇದ್ದಾರೆ; "ಇನ್ನು ಹಾಸ್ಟೆಲ್‌ನಲ್ಲಿ ಸುಮಾರು 600 ವಿದ್ಯಾರ್ಥಿನಿಯರಿದ್ದಾರೆ. ಆಹಾರದಲ್ಲಿ ತೊಂದರೆ ಉಂಟಾಗಿದ್ದರೆ ದೊಡ್ಡ ಸಂಖ್ಯೆಯ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತಿತ್ತು. ಹಾಸ್ಟೆಲ್‌ನಲ್ಲಿ ಇರುವವರೆಲ್ಲ ನಮ್ಮ ವಿದ್ಯಾರ್ಥಿನಿಯರೇ. ಎಲ್ಲರೊಂದಿಗೂ ಚರ್ಚೆ ನಡೆಸಿ ಮುಂದಿನ ಕ್ರಮಗಳ ಕುರಿತು ನಿರ್ಧಾರ ಕೈಗೊಳ್ಳುತ್ತೇವೆ" ಎಂದು ಪ್ರಾಂಶುಪಾಲರು ಹೇಳಿದರು.

ಮತ್ತೊಂದೆಡೆ ವಿದ್ಯಾರ್ಥಿನಿಯರ ಹೋರಾಟಕ್ಕೆ ವಿದ್ಯಾರ್ಥಿ ಸಂಘಟನೆಗಳು ಬೆಂಬಲ ಸೂಚಿಸಿವೆ. ಎಬಿವಿಪಿ ವಿದ್ಯಾರ್ಥಿ ಸಂಘಟನೆ ಬೆಂಬಲ ವ್ಯಕ್ತಪಡಿಸಿದ್ದು, ಹಾಸ್ಟೆಲ್ ಊಟದಿಂದ ಸಮಸ್ಯೆ ಉಂಟಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಆದ್ದರಿಂದ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ, ಸಹ್ಯಾದ್ರಿ ಕಾಲೇಜು ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದೆ.

ಇನ್ನು, ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ಕೂಡ ವಿದ್ಯಾರ್ಥಿನಿಯರ ಹೋರಾಟಕ್ಕೆ ಬೆಂಬಲ ಸೂಚಿಸಿದೆ. ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಲಯದ ಅವ್ಯವಸ್ಥೆಯನ್ನು ಕೂಡಲೆ ಸರಿಪಡಿಸಬೇಕು ಎಂದು ಸಂಘಟನೆ ಆರೋಪಿಸಿದೆ.

ಹಾಸ್ಟೆಲ್‌ನಲ್ಲಿ ವಿಷಾಹಾರ ಸೇವಿಸಲಾಗಿದೆ ಎನ್ನಲಾಗಿರುವ ಪ್ರಕರಣ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರು ಮತ್ತು ಆಡಳಿತ ಮಂಡಳಿ ನಡುವೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ಈಗಾಗಲೆ ಹಿಜಾಬ್ ವಿವಾದ, ವಾಟ್ಸಪ್‌ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್ ಪೋಸ್ಟ್ ಮಾಡಿರುವ ವಿವಾದದಿಂದಾಗಿ ಕಾಲೇಜಿನಲ್ಲಿ ಗೊಂದಲ ನಿರ್ಮಾಣವಾಗಿತ್ತು. ಈಗ ಆಹಾರ ವಿವಾದ ಕಾಲೇಜು ಆಡಳಿತ ಮಂಡಳಿಗೆ ಹೊಸ ತಲೆನೋವು ಸೃಷ್ಟಿ ಮಾಡಿದೆ.

English summary
Sahyadri college students protest in college on the issue of hostel. Last week 12 students fall ill after consuming food at hostel.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X