ಶಿವಮೊಗ್ಗ ಪೊಲೀಸ್ ಠಾಣೆಗಳಿಗೆ ಸ್ಯಾನಿಟೈಸರ್ ಸಿಂಪಡಣೆ
ಶಿವಮೊಗ್ಗ, ಮೇ 20: ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಗಳು ಕ್ವಾರಂಟೈನ್ ಆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲ ಪೊಲೀಸ್ ಠಾಣೆಗಳಿಗೆ ಸ್ಯಾನಿಟೈಸ್ ಮಾಡಲಾಗಿದೆ.
ಜಿಲ್ಲಾ ಪೊಲೀಸ್ ಕಚೇರಿ ಮತ್ತು ಅದರ ಪಕ್ಕದಲ್ಲಿರುವ ಎಲ್ಲ ಪೊಲೀಸ್ ಠಾಣೆಗಳನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ಗ್ರಾಮಾಂತರ ಪೊಲೀಸ್ ಠಾಣೆಗಳಿಗೂ ಬೆಳಿಗ್ಗೆ ಅಗ್ನಿಶಾಮಕ ವಾಹನಗಳ ಮೂಲಕ ಸಂಪೂರ್ಣ ಔಷಧಿ ಸಿಂಪಡಿಸಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಸ್ಪ್ರೇ ಬಳಸಿಕೊಂಡು ಜಿಲ್ಲಾ ಪೊಲೀಸ್ ಕಚೇರಿಯ ಸುತ್ತಲು ಸ್ಯಾನಿಟೈಸರ್ ಸಿಂಪಡಿಸಿದ್ದಾರೆ. ಪ್ರತಿದಿನ ಪೊಲೀಸ್ ಠಾಣೆಗೆ ಹಲವರು ಬಂದು ಹೋಗುತ್ತಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications