ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೊರಬ ಪಟ್ಟಣ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆ

|
Google Oneindia Kannada News

ಶಿವಮೊಗ್ಗ, ಮೇ 15 : ಸೊರಬ ಪಟ್ಟಣ ಪಂಚಾಯಿತಿ ಚುನಾವಣೆಗೆ ಇದ್ದ ಅಡೆತಡೆ ನಿವಾರಣೆಯಾಗಿದೆ. ಚುನಾವಣಾ ಅಧಿಸೂಚನೆ ಪ್ರಕಟಗೊಂಡಿದ್ದು, ಜೂನ್ 1 ರಂದು ಮತದಾನ ನಡೆಯಲಿದ್ದು, ಜೂನ್ 3ರಂದು ಮತ ಎಣಿಕೆ ನಡೆಯಲಿದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣ ಪಂಚಾಯಿತಿಗೆ ಚುನಾವಣೆಯನ್ನು ನಡೆಸಲು ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಜೂನ್ 1 ರಂದು ಬೆ.7 ರಿಂದ ಸಂಜೆ 5ರ ವರೆಗೆ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಮೇ 21 ಕೊನೆಯ ದಿನವಾಗಿದೆ. ನಾಮಪತ್ರ ವಾಪಸ್ ಪಡೆಯಲು ಮೇ 24 ಕೊನೆ ದಿನ.

63 ಸ್ಥಳೀಯ ಸಂಸ್ಥೆಗಳ ಚುನಾವಣೆ : ಅಂಕಿ-ಸಂಖ್ಯೆಗಳ ಲೆಕ್ಕ63 ಸ್ಥಳೀಯ ಸಂಸ್ಥೆಗಳ ಚುನಾವಣೆ : ಅಂಕಿ-ಸಂಖ್ಯೆಗಳ ಲೆಕ್ಕ

ಸೊರಬ ಪಟ್ಟಣ ಪಂಚಾಯಿತಿ ಚುನಾವಣೆಯನ್ನು ತಡೆ ಹಿಡಿಯಬೇಕು ಎಂದು ಕೆಲವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೇರಿಸಿ ಅಧಿಸೂಚನೆ ಹೊರಡಿಸಿದ ಬಳಿಕ ಚುನಾವಣೆ ನಡೆಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು.

63 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಪ್ರಕಟ63 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಪ್ರಕಟ

Schedule announced for Sorab town panchayath election 2019

ಮೇ 14ರ ಸೋಮವಾರ ಹೈಕೋರ್ಟ್ ಚುನಾವಣೆ ನಡೆಸಲು ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿ, ಸಲ್ಲಿಕೆಯಾಗಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಆದ್ದರಿಂದ, ಚುನಾವಣಾ ಅಧಿಸೂಚನೆ ಪ್ರಕಟವಾಗಿದೆ.

ಮೀಸಲಾತಿ : ಪಟ್ಟಣ ಪಂಚಾಯಿತಿ ಚುನಾವಣಾ ಅಧಿಸೂಚನೆ ಜೊತೆಗೆ ಮೀಸಲಾತಿಯನ್ನು ಪ್ರಕಟಿಸಲಾಗಿದೆ. ವಾರ್ಡ್ ನಂ.1 ಹಿಂದುಳಿದ ವರ್ಗ(ಎ) ಮಹಿಳೆ, ವಾರ್ಡ್ ನಂ. 2, 3 ಹಾಗೂ 8 ಸಾಮಾನ್ಯ ವರ್ಗ, ವಾರ್ಡ್ ನಂ.4 ಪರಿಶಿಷ್ಠ ಪಂಗಡ, ವಾರ್ಡ್ ನಂ.5 ಮತ್ತು 9 ಹಿಂದುಳಿದ ವರ್ಗ (ಎ), ನಂ.7 ಹಿಂದುಳಿದ ವರ್ಗ (ಬಿ), ವಾರ್ಡ್ ನಂ. 6, 10, 11 ಸಾಮಾನ್ಯ ಮಹಿಳೆ ಹಾಗೂ ನಂ 12 ಪರಿಶಿಷ್ಠ ಜಾತಿಯ ಅಭ್ಯರ್ಥಿಗೆ ಮೀಸಲಾಗಿದೆ.

English summary
After Karnataka High Court green signal election commission announced schedule for the Sorab town panchayath election. Shivamogga district Sorab town panchayath election will be held on June 1, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X