ಶಾಲೆ ಮಕ್ಕಳ ಕೈಯಲ್ಲಿ ಮತ್ತೆ ಶೌಚಾಲಯ ಕ್ಲೀನಿಂಗ್: ಇದಕ್ಕೆ ಯಾವಾಗ ಬ್ರೇಕ್?

ಶಿವಮೊಗ್ಗ ಡಿಸೆಂಬರ್ 28: ಬೆಂಗಳೂರು ಕಥೆ ಆಯ್ತು ಈಗ ಶಿವಮೊಗ್ಗ ಕಥೆ ಏನಪ್ಪಾ ಅಂದರೆ ಶಾಲಾ ಮುಖ್ಯ ಶಿಕ್ಷಕರೊಬ್ಬರು ವಿದ್ಯಾರ್ಥಿಗಳ ಕೈಯಲ್ಲಿ ಶೌಚಾಲಯವನ್ನು ಸ್ವಚ್ಚಗೊಳಿಸಿದ ಘಟನೆ ನಡೆದಿದೆ. ಈ ಅಮಾನವೀಯ ಘಟನೆ ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದಿತ್ತು. ಇದು ವ್ಯಾಪಕ ಜನಾಕ್ರೋಶಕ್ಕೂ ಕಾರಣವಾಗಿತ್ತು. ಸಿಎಂ ಸಿದ್ದರಾಮಯ್ಯ ಅವರು ಕೂಡ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

ಆದರೀಗ ಸಚಿವ ತವರೂರಲ್ಲಿ ಇಂಥಹ ಘಟನೆ ಮರುಕಳಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಶಾಲಾ ಮಕ್ಕಳಿಂದ ಶೌಚಾಲಯವನ್ನು ಸ್ವಚ್ಚಗೊಳಿಸಲಾಗಿದೆ. ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ ಗ್ರಾ.ಪಂಚಾಯಿತಿಯ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶಂಕರಪ್ಪ ಹಾಗೂ ಇತರೆ ಶಿಕ್ಷಕರು ವಿದ್ಯಾರ್ಥಿಗಳ ಕೈಯಲ್ಲಿ ಶೌಚಾಲಯ ಸ್ವಚ್ಚಗೊಳಿಸಿದ್ದಾರೆ.

 school children clean toilets in Shivamogga

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜನಾಕ್ರೋಶಕ್ಕೆ ಗುರಿಯಾಗಿದೆ. ದಲಿತ ಸಂಘರ್ಷ ಸಮಿತಿ ಶಿವಮೊಗ್ಗ ಎಸಿ ಸತ್ಯನಾರಾಯಣ ಅವರಿಗೆ ಈ ಬಗ್ಗೆ ದೂರು ಸಲ್ಲಿಸಿದೆ. ಶಾಲಾ ಮಕ್ಕಳನ್ನು ದರ್ಬಳಿಕೆ ಮಾಡಿದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಸಂಘಟನೆ ಸೇರಿದಂತೆ ಪೋಷಕರು ಒತ್ತಾಯಿಸಿದ್ದಾರೆ.

ಇಂತಹ ಘಟನೆಗಳು ನಡೆಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಕೋಲಾರದಲ್ಲೂ ಇಂಥಹ ಅಮಾನವೀಯ ಘಟನೆ ಬೆಳಕಿಗೆ ಬಂದಿತ್ತು. ಇಲ್ಲಿ ವಿದ್ಯಾರ್ಥಿಗಳ ಕೈಯಲ್ಲಿ ಮಲ ಗುಂಡಿಯನ್ನು ಕ್ಲೀನ್ ಮಾಡಿಸಲಾಗಿತ್ತು. ಈ ಘಟನೆಯ ನಂತರ ಬೆಂಗಳೂರಿನಲ್ಲಿ ಶಾಲಾ ಮಕ್ಕಳ ಕೈಯಲ್ಲಿ ಶೌಚಾಲಯ ಸ್ವಚ್ಚಗೊಳಿಸದ ಘಟನೆ ನಡೆದಿತ್ತು.

ಬೆಂಗಳೂರಿನಲ್ಲಿ ಶಾಲಾ ಮಕ್ಕಳ ಕೈಯಲ್ಲಿ ಶೌಚಾಲಯ ಕ್ಲೀನಿಂಗ್:

ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಕೈಯಲ್ಲಿ ಶೌಚಾಲಯ ಸ್ವಚ್ಚಗೊಳಿಸಲಾಗಿತ್ತು. ಆಂದ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕೈಯಿಂದ ಟಾಯ್ಲೇಟ್ ಕ್ಲೀನಿಂಗ್ ಮಾಡಿಸಲಾಗಿತ್ತು. ಪೋಷಕರಿಗೆ ವಿಷಯ ಗೊತ್ತಾಗಿ, ಶಾಲೆಯ ಮುಂದೆ ಪ್ರತಿಭಟನೆ ಮಾಡಲಾಗಿತ್ತು. ಮಕ್ಕಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಕ್ಕೆ ಪೋಷಕರು ಅಸಮಾಧಾನಗೊಂಡು ಶಾಲೆಯ ಮುಂದೆ ಜಮಾಯಿಸಿ ಈ ಬಗ್ಗೆ ಕಂಪ್ಲೇಂಟ್​ ಮಾಡಿದ್ದರು.

ಈ ವಿಚಾರ ರಾಜಕೀಯ ತಿರುವು ಪಡೆದುಕೊಂಡು ಆರೋಪ ಪ್ರತ್ಯಾರೋಪಗಳು ಕೇಳಿ ಬಂದಿದ್ದವು. ಘಟನೆಯ ಬಗ್ಗೆ ಪರಿಶೀಲನೆ ಬಳಿಕ ಶಾಲಾ ಶಿಕ್ಷಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈ ಘಟನೆ ಮಾಸುವ ಮುನ್ನವೇ ಶಿವಮೊಗ್ಗದಲ್ಲಿ ಮತ್ತೆ ಇಂಥಹ ಘಟನೆ ನಡೆದಿದ್ದು ಜನಾಕ್ರೋಶಕ್ಕೆ ಗುರಿಯಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಂಘಟನೆಗಳು ಹಾಗೂ ಪೋಷಕರು ಸೂಕ್ರ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+