ಶಿವಮೊಗ್ಗದಲ್ಲಿ ಡಿ.12ರವರೆಗೂ ನಿಷೇಧಾಜ್ಞೆ ಮುಂದುವರಿಕೆ

ಶಿವಮೊಗ್ಗ, ಡಿಸೆಂಬರ್ 08: ಜಿಲ್ಲೆಯಲ್ಲಿ ಈಚೆಗೆ ನಡೆದ ಗಲಭೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಡಿ.12 ರವರೆಗೂ ವಿಸ್ತರಣೆ ಮಾಡಲಾಗಿದೆ.

ಈ ಕುರಿತಂತೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಡಿ.12ರ ಶನಿವಾರ ಮುಂಜಾನೆ 10 ಗಂಟೆಯವರೆಗೂ ನಿಷೇಧಾಜ್ಞೆಯನ್ನು ನಗರದಾದ್ಯಂತ ವಿಸ್ತರಣೆ ಮಾಡಲಾಗಿದೆ. ಈಗಾಗಲೇ ಜಾರಿಯಲ್ಲಿರುವಂತೆ ಮೂರು ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಮುಂದುವರೆಯಲಿದೆ ಎಂದಿದ್ದಾರೆ.

ಸಾರ್ವಜನಿಕರ ಅನುಕೂಲಕ್ಕಾಗಿ ಪ್ರತಿದಿನ ಮುಂಜಾನೆ 7 ರಿಂದ 11 ಗಂಟೆಯವರೆಗೂ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಅವಕಾಶ ಮಾಡಿಕೊಡಲಾಗಿದೆ.

Shivamogga: Section 144 Continues Till December 12

ಈಗಾಗಲೇ ಅನೇಕ ಸಂಘಟನೆಗಳು 144 ಸೆಕ್ಷನ್ ಹಿಂಪಡೆಯುವಂತೆ ಮನವಿ ಮಾಡಿದ್ದು ಸಾಮಾನ್ಯ ಜನರು ಜೀವನ ನಡೆಸುವುದು ಕಷ್ಟವಾಗಿದೆ ಎಂದು ಸಡಿಲಗೊಳಿಸುವಂತೆ ಮನವಿ‌ ಮಾಡಿದ್ದಾರೆ. ಆದರೆ ನಿಷೇಧಾಜ್ಞೆ ಮುಂದುವರೆಸಿ ಆದೇಶ ಹೊರಡಿಸಲಾಗಿದೆ.

ಡಿಸೆಂಬರ್ 3ರಂದು ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲೆ ಹಲ್ಲೆ ನಡೆದಿದ್ದು, ಈ ಸಂಬಂಧ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕೋಮು ಗಲಭೆ ಉಂಟಾಗಿತ್ತು. ನಂತರ ಶಾಂತಿ ಕಾಪಾಡುವ ಸಲುವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+