Breaking; ಶಿವಮೊಗ್ಗ ನಗರದಲ್ಲಿ ಶುಕ್ರವಾರದ ತನಕ ಕರ್ಫ್ಯೂ ವಿಸ್ತರಣೆ

ಶಿವಮೊಗ್ಗ, ಫೆಬ್ರವರಿ 22; ಶಿವಮೊಗ್ಗ ನಗರದಲ್ಲಿ ಇನ್ನೆರಡು ದಿನ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ. ಫೆಬ್ರವರಿ 25ರ ಶುಕ್ರವಾರ ಬೆಳಗ್ಗೆ ತನಕ ಕರ್ಫ್ಯೂ ವಿಸ್ತರಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು, "ಬುಧವಾರ ಬೆಳಗ್ಗೆವರೆಗೆ ಕರ್ಫ್ಯೂ ಇತ್ತು. ಆದರೆ ಕೆಲವು ಘಟನೆಗಳು ಹಿನ್ನೆಲೆ ಶುಕ್ರವಾರ ಬೆಳಗ್ಗೆವರೆಗೆ ಕರ್ಫ್ಯೂ ವಿಸ್ತರಣೆ ಮಾಡಲಾಗುತ್ತಿದೆ" ಎಂದರು.

"ಕರ್ಫ್ಯೂ ಜಾರಿಯಲ್ಲಿ ಇರುವ ಅವಧಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಗರ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 9 ಗಂಟೆವರೆಗೆ ಅವಕಾಶ ಕಲ್ಪಿಸಲಾಗುತ್ತಿದೆ" ಎಂದು ತಿಳಿಸಿದರು.

Section 144 extended till Feb 25th morning, Schools will remain shut; Shivamogga DC

"ದೊಡ್ಡಪೇಟೆ, ಕೋಟೆ ಮತ್ತು ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ" ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಹರ್ಷ ಹತ್ಯೆ ಬಳಿಕ ಗಲಭೆ; ಭಾನುವಾರ ರಾತ್ರಿ ಶಿವಮೊಗ್ಗ ನಗರದ ಸೀಗೆಹಟ್ಟಿ ನಿವಾಸಿ 28 ವರ್ಷದ ಹರ್ಷ ಹತ್ಯೆಯಾಗಿತ್ತು. ಹರ್ಷ ಬಜರಂಗದಳ ಕಾರ್ಯಕರ್ತ. ಹರ್ಷ ಹತ್ಯೆಯ ಬಳಿಕ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಸೋಮವಾರ ಸಂಜೆ ಹರ್ಷ ಅಂತ್ಯಕ್ರಿಯೆ ವಿದ್ಯಾನಗರದಲ್ಲಿರುವ ರೋಟರಿ ಚಿತಾಗಾರದಲ್ಲಿ ನಡೆಯಿತು. ಹರ್ಷ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಬಿ. ಎಚ್. ರಸ್ತೆಯಲ್ಲಿ ಕಲ್ಲು ತೂರಾಟ ನಡೆದಿತ್ತು. ಉದ್ರಿಕ್ತರು ಸಿದ್ದಯ್ಯ ರಸ್ತೆಯಲ್ಲಿಯೂ ಕಲ್ಲು ತೂರಾಟ ನಡೆಸಿದ್ದರು.

ಮೆರವಣಿಗೆ ಸಾಗುವಾಗ ಹೊಳೆ ಬಸ್ ನಿಲ್ದಾಣದ ಬಳಿ ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಕಬ್ಬಿನ ಹಾಲು ತಯಾರು ಮಾಡುವ ಗಾಡಿಯನ್ನು ತುಂಗಾ ನದಿ ಸೇತುವೆ ಮೇಲಿನಿಂದ ನದಿಗೆ ಹಾಕಲಾಗಿತ್ತು.

ಗಲಭೆ ಹಿನ್ನಲೆಯಲ್ಲಿ ಪೊಲೀಸರು ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಿದ್ದರು. ಸೋಮವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ ತನಕ ಕರ್ಫ್ಯೂ ಜಾರಿಯಲ್ಲಿತ್ತು. ಈಗ ಅದನ್ನು ಶುಕ್ರವಾರ ಬೆಳಗ್ಗೆ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಬಂಧಿತರ ಸಂಖ್ಯೆ 6ಕ್ಕೆ ಏರಿಕೆ; "ಹರ್ಷ ಹತ್ಯೆ ಪ್ರಕರಣ ಸಂಬಂಧ ಈವರೆಗೂ ಆರು ಆರೋಪಿಗಳನ್ನು ಬಂಧಿಸಲಾಗಿದೆ" ಎಂದು ಜಿಲ್ಲಾ ರಕ್ಷಣಾಧಿಕಾರಿ ಬಿ. ಎಂ. ಲಕ್ಷ್ಮೀಪ್ರಸಾದ್ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಇಬ್ಬರು ಆರೋಪಿಗಳನ್ನು ಶಿವಮೊಗ್ಗದಲ್ಲಿ ಬಂಧಿಸಲಾಗಿದೆ. ಉಳಿದ ನಾಲ್ವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ" ಎಂದರು.

"ಪ್ರಕರಣದ ಪ್ರಮುಖ ಆರೋಪಿಗಳಾದ ಖಾಸಿಫ್ (30), ಸಯ್ಯದ್ ನದೀಂ ಎಂಬುವವರನ್ನು ಶಿವಮೊಗ್ಗದಲ್ಲಿ ಬಂಧಿಸಲಾಗಿತ್ತು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈಗ ಅಸೀಫ್ ಉಲ್ಲಾ ಖಾನ್, ರಿಹಾನ್ ಷರೀಫ್, ನಿಹಾನ್, ಅಬ್ದುಲ್ ಅಫ್ನಾನ್ ಎಂಬುವವರನ್ನು ಬಂಧಿಸಲಾಗಿದೆ" ಎಂದು ಮಾಹಿತಿ ನೀಡಿದರು.

ಎಲ್ಲರೂ ಸಣ್ಣ ವಯಸ್ಸಿನವರು; "ಬಂಧಿತರೆಲ್ಲ 21 ರಿಂದ 22 ವರ್ಷ ವಯಸ್ಸಿನವರು. ಖಾಸಿಫ್ ಮಾತ್ರ 30 ವರ್ಷದವನು. ಎಲ್ಲರೂ ಕ್ಲಾರ್ಕ್ ಪೇಟೆ ನಿವಾಸಿಗಳಾಗಿದ್ದರು. ಒಟ್ಟಿಗೆ ಇರುತ್ತಿದ್ದರು. ಇತ್ತೀಚೆಗೆ ಎಲ್ಲರೂ ಬೇರೆ ಬೇರೆ ಕಡೆ ವಾಸವಾಗಿದ್ದಾರೆ. ಖಾಸಿಫ್ ಮಾತ್ರ ಕ್ಲಾರ್ಕ್ ಪೇಟೆಯಲ್ಲಿ ವಾಸವಾಗಿದ್ದಾನೆ" ಎಂದು ಜಿಲ್ಲಾ ರಕ್ಷಣಾಧಿಕಾರಿಗಳು ತಿಳಿಸಿದರು.

"ಹತ್ಯೆ ಪ್ರಕರಣದ ಸಂಬಂಧ 12 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣ ಸಂಬಂಧ ಮತ್ತಷ್ಟು ಮಂದಿಯನ್ನು ಬಂಧಿಸುವ ಸಾಧ್ಯತೆ ಇದೆ" ಎಂದರು.

ಹತ್ಯೆಗೆ ಕಾರಣವೇನು?; "ಹರ್ಷ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧಿತರ ವಿಚಾರಣೆ ಬಳಿಕ ಈ ಕುರಿತು ಸ್ಪಷ್ಟತೆ ಸಿಗಲಿದೆ. ಭಾನುವಾರ ರಾತ್ರಿ ಹರ್ಷನನ್ನು ಸ್ವಲ್ಪ ದೂರದವರೆಗೆ ಓಡಿಸಿಕೊಂಡು ಹೋಗಿ ಹತ್ಯೆ ಮಾಡಿದ್ದಾರೆ" ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+