ರಾಜ್ಯದ ಆರ್‌ಎಸ್‌ಎಸ್‌ ಕಚೇರಿಗಳಿಗೆ ಹೆಚ್ಚಿನ ಭದ್ರತೆ: ಆರಗ ಜ್ಞಾನೇಂದ್ರ

ಶಿವಮೊಗ್ಗ, ಜೂನ್ 7: ರಾಜ್ಯದ ಆರ್‌ಎಸ್‌ಎಸ್‌ ಕಚೇರಿಗಳ ಮೇಲೆ ದಾಳಿ ಮಾಡುವ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಎಲ್ಲಾ ಆರ್.ಎಸ್.ಎಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಗೃಹ ಸಚಿವ , ಉತ್ತರ ಪ್ರದೇಶದ ಎರಡು ಹಾಗೂ ಕರ್ನಾಟಕದ ನಾಲ್ಕು ಆರ್‌ಎಸ್‌ಎಸ್‌ ಕಚೇರಿಗಳನ್ನು ಧ್ವಂಸಗೊಳಿಸುವುದಾಗಿ ಬೆದರಿಕೆ ಬಂದಿದೆ‌. ತಮಿಳುನಾಡಿನ ವ್ಯಕ್ತಿಯೊಬ್ಬ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರಿಗೆ ವಾಟ್ಸಪ್‌ನಲ್ಲಿ ಈ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದು ತಿಳಿಸಿದರು.

ವಾಟ್ಸಪ್ ಸಂದೇಶ ಕಳಿಸಿದ ವ್ಯಕ್ತಿಯನ್ನು ಗುರುತಿಸಲಾಗಿದೆ. ಆರೋಪಿ ಸೆಂಥಿಲ್ ಎಂಬವನನ್ನು ತಮಿಳು ನಾಡಿನಲ್ಲಿ ಬಂಧಿಸಲಾಗಿದೆ. ಈ ರೀತಿಯಾಗಿ ಬೆದರಿಕೆ ಕರೆ ಅಥವಾ ಸಂದೇಶಗಳನ್ನು ಕಳಿಸುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

Security Tightened at All RSS Offices after Phone Threat

ಶಂಕಿತ ಉಗ್ರನ ಬಂಧನ
ಭಯೋತ್ಪದನೆ ಚಟುವಟಿಕೆಗಳಲ್ಲಿ ತೊಡಗಿದ್ದನೆನ್ನಲಾದ ಜಮ್ಮು ಕಾಶ್ಮೀರದ ನಿವಾಸಿಯೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ‌. ರಾಜ್ಯದ ಪೊಲೀಸರೂ ಈ ಕುರಿತು ತನಿಖೆ ಆರಂಭಿಸಿದ್ದಾರೆ. ಬೆಂಗಳೂರಿನಲ್ಲಿ ಶಂಕಿತ ಉಗ್ರನಿಗೆ ಆಶ್ರಯ ನೀಡಿದ್ದ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಬಗ್ಗೆ ತನಿಖೆ ನಡೆಯುತ್ತಿದೆ. ರಾಜ್ಯ ಪೊಲೀಸರು, ಜಮ್ಮು ಕಾಶ್ಮೀರ ರಾಜ್ಯದ ಪೋಲೀಸರ ಜತೆ ಸಮನ್ವಯ ಸಾಧಿಸಿ ತನಿಖೆಯನ್ನು ತೀವ್ರ ಗೊಳಿಸಿದ್ದಾರೆ ಎಂದು ತಿಳಿಸಿದರು.

ಶಂಕಿತ ಉಗ್ರನಿಗೆ ಮೊಬೈಲ್ ಫೋನ್ ಪಡೆಯಲು, ಇತರ ದಾಖಲೆಗಳನ್ನು ಪಡೆಯಲು ಸ್ಥಳೀಯರು ಸಹಾಯ ಮಾಡಿದ್ದಾರೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಮೊಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ.

Security Tightened at All RSS Offices after Phone Threat

ಜಮ್ಮು ಕಾಶ್ಮೀರದ ಉಗ್ರನನ್ನು ಪತ್ತೆ ಹಚ್ಚಲು ರಾಜ್ಯದ ಪೊಲೀಸರೂ ಸಹಕರಿಸಿದ್ದು, ಹೆಚ್ಚಿನ ವಿಚಾರಣೆಗಾಗಿ, ರಾಜ್ಯದ ಪೊಲೀಸರು ಜಮ್ಮು ಕಾಶ್ಮೀರದ ಪೊಲೀಸರೊಂದಿಗೆ ಸಂಪರ್ಕ ಹೊಂದಿದ್ದು, ತನಿಖೆ ಮುಂದುವರೆದಿದೆ ಎಂದರು.

ಹಿಜಬುಲ್ ಮುಜಾಹಿದ್ದೀನ್ ಸಂಘಟನೆಯ ಕಮಾಂಡರ್ ಆಗಿದ್ದ ತಾಲಿಬ್ ಹುಸೇನ್ ಜಮ್ಮು ಕಾಶ್ಮೀರದಿಂದ ಬಂದು ಬೆಂಗಳೂರಿನ ಶ್ರೀರಾಂಪುರದಲ್ಲಿ ವಾಸವಾಗಿದ್ದ. ಆತನ ಮೇಲೆ ಯಾರಿಗೂ ಅನುಮಾನ ಬಂದಿರಲಿಲ್ಲ. ""ತಾಲಿಬ್ ಹುಸೇನ್ ಬಳಿಯಲ್ಲಿ ಆಧಾರ್ ಕಾರ್ಡ್ ಇತ್ತು, ಅದನ್ನ ನೋಡಿ ರೂಂ ಕೊಡಲಾಗಿತ್ತು.ಇಬ್ಬರು ಪತ್ನಿಯರು, ಜಮ್ಮುನಲ್ಲಿ ಒಂದು ಮದುವೆಯಾಗಿದ್ದ. ನಂತರ ಇಲ್ಲಿ ಒಂದು ಮದುವೆಯಾಗಿದ್ದ.ಇಲ್ಲಿ ಇಬ್ಬರು ಮಕ್ಕಳು ಸಹ ಇದ್ದರು. ಒಂಭತ್ತು ತಿಂಗಳಿಂದ ಮಸೀದಿಗೆ ಹೊಂದಿಕೊಂಡ ಮನೆಯಲ್ಲಿ ವಾಸವಾಗಿದ್ದ. ರೈಲು ನಿಲ್ದಾಣದಲ್ಲಿ ಲೋಡಿಂಗ್, ಅನ್ ಲೋಡಿಂಗ್ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

(ಒನ್ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+