ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ, ಭದ್ರಾವತಿ ನಗರಗಳಿಗೆ ಹೊಸ ಲಾಕ್‌ಡೌನ್ ರೂಲ್ಸ್

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜೂನ್ 20; ಶಿವಮೊಗ್ಗ ನಗರ ಹಾಗೂ ಭದ್ರಾವತಿ ನಗರಗಳಿಗೆ ಪ್ರತ್ಯೇಕವಾಗಿ ಲಾಕ್‍ಡೌನ್ ಮಾರ್ಗಸೂಚಿ ಹೊರಡಿಸಲಾಗಿದೆ. ಇನ್ನುಳಿದ ತಾಲೂಕುಗಳಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಜಾರಿಯಲ್ಲಿರಲಿದೆ.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು.

ಶಿವಮೊಗ್ಗ; ವಿವಿಧ ಯೋಜನೆಗಳ ಅಡಿ ಅರ್ಜಿ ಆಹ್ವಾನ ಶಿವಮೊಗ್ಗ; ವಿವಿಧ ಯೋಜನೆಗಳ ಅಡಿ ಅರ್ಜಿ ಆಹ್ವಾನ

ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಕೊರೊನಾ ಪ್ರಮಾಣ ಶೇ 5ಕ್ಕಿಂತಲೂ ಕಡಿಮೆ ಇದೆ. ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಡಿಮೆಯಾಗಿಲ್ಲ.

ಶಿವಮೊಗ್ಗ; ವಿಮಾನ ನಿಲ್ದಾಣದ ಟರ್ಮಿನಲ್ ನೀಲನಕ್ಷೆ ಅನಾವರಣಶಿವಮೊಗ್ಗ; ವಿಮಾನ ನಿಲ್ದಾಣದ ಟರ್ಮಿನಲ್ ನೀಲನಕ್ಷೆ ಅನಾವರಣ

Separate Lockdown Guidelines For Shivamogga And Bhadravathi City

ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಿ ವ್ಯಾಪಾರ ವಹಿವಾಟುಗಳಿಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ.

12 ಗಂಟೆ ತನಕ ಅವಕಾಶ; ತರಕಾರಿ, ದಿನಸಿ ಹೋಲ್ ಸೇಲ್ ವ್ಯಾಪಾರ, ಗಾಂಧಿಬಜಾರ್ ವ್ಯಾಪಾರಿಗಳಿಗೆ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಸಿಮೆಂಟ್, ಸ್ಟೀಲ್, ಹಾರ್ಡ್‍ವೇರ್, ಫೊಟೋ ಸ್ಟುಡಿಯೊ, ಚಿನ್ನ ಗಿರವಿ ಅಂಗಡಿ, ಟೈಲರ್ಗಳಿಗೆ, ಬಂಗಾರ ಕೆಲಸ ಮಾಡುವವರು ಮುಂತಾದ ಕ್ಷೇತ್ರದವರಿಗೆ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

ಶಿವಮೊಗ್ಗ; ತರಕಾರಿ, ದಿನಸಿ ತಲುಪದ ಹಳ್ಳಿಗಳಲ್ಲೂ ಸಿಕ್ತಿದೆ ಮದ್ಯ!ಶಿವಮೊಗ್ಗ; ತರಕಾರಿ, ದಿನಸಿ ತಲುಪದ ಹಳ್ಳಿಗಳಲ್ಲೂ ಸಿಕ್ತಿದೆ ಮದ್ಯ!

ಬಟ್ಟೆ ವ್ಯಾಪಾರ ಮತ್ತು ಚಿನ್ನದ ವ್ಯಾಪಾರಕ್ಕೆ ಅವಕಾಶ ನಿರಾಕರಿಸಲಾಗಿದೆ. ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿದೆ. ಆದರೆ ಬೀದಿ ಬದಿ ಆಹಾರ ಉತ್ಪನ್ನ ಮಾರಾಟಕ್ಕೆ ಅನುಮತಿ ನೀಡಲಾಗಿಲ್ಲ. ವಾಕಿಂಗ್, ಯೋಗ ಇತ್ಯಾದಿ ವ್ಯಾಯಾಮ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಗುಂಪು ಸೇರಿವಂತಿಲ್ಲ; "ಲಾಕ್‍ಡೌನ್ ಸಡಿಲಿಕೆ ಮಾಡಲಾಗಿದ್ದರೂ ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಅಂಗಡಿಗಳ ಮುಂದೆ ಸಾಮಾಜಿಕ ಅಂತರವನ್ನು ಜನರು ಪಾಲಿಸದಿದ್ದರೆ, ಆ ಅಂಗಡಿ ಮಾಲಿಕರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅಂಗಡಿಗಳ ಮುಂದೆ ಜನ ಜಂಗುಳಿ ಸೇರಿದ್ದರೆ ಅಂತಹ ಅಂಗಡಿಗಳನ್ನು ಮುಚ್ಚಿಸಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ" ಎಂದು ಈಶ್ವರಪ್ಪ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಎಲ್. ವೈಶಾಲಿ, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿದ್ದರು.

English summary
Shivamogga district administration issued separate lockdown guidelines for Shivamogga and Bhadravathi city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X