ಶಿವಮೊಗ್ಗದಲ್ಲಿ 'ಯುವನಿಧಿ' ಯೋಜನೆಗೆ ಚಾಲನೆ; ಸಚಿವರಿಂದ ಪರಿಶೀಲನೆ

ಶಿವಮೊಗ್ಗ, ಜನವರಿ 04: ಕರ್ನಾಟಕ ಕಾಂಗ್ರೆಸ್ ಸರ್ಕರದ 5ನೇ ಗ್ಯಾರಂಟಿ 'ಯುವನಿಧಿ' ಯೋಜನೆಗೆ ಈಗಾಗಲೇ ನೋಂದಣಿ ನಡೆಯುತ್ತಿದೆ. ಜನವರಿ 12ರಂದು ಶಿವಮೊಗ್ಗದಲ್ಲಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

'ಯುವನಿಧಿ' ಕಾರ್ಯಕ್ರಮದ ಚಾಲನಾ ಸಮಾರಂಭ ಶಿವಮೊಗ್ಗ ನಗರದ ಫ್ರೀಡಂಪಾರ್ಕ್‍ನಲ್ಲಿ ನಡೆಯಲಿದೆ. ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಕಾರ್ಯಕ್ರಮದ ಸಿದ್ಧತೆ ವೀಕ್ಷಣೆ ಮಾಡಿದರು. ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಜೊತೆಗಿದ್ದರು.

Sharan Prakash Patil Inspects Yuva Nidhi Scheme Inauguration Preparations

ಬಳಿಕ ಸಚಿವರು ಶಿವಮೊಗ್ಗ ಜಿಲ್ಲಾಡಳಿತ ಸಭಾಂಗಣದಲ್ಲಿ ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ಹಾವೇರಿ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಶಿವಮೊಗ್ಗ ಜಿಲ್ಲೆಯ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ನಡೆಸಿದರು.

ಕಾರ್ಯಕ್ರಮದ ಯಶಸ್ಸಿಗೆ ಸೂಚನೆ; ಸಭೆಯಲ್ಲಿ ಮಾತನಾಡಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್, "ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಜನವರಿ 12ರಂದು ಭವ್ಯ ವೇದಿಕೆಯಲ್ಲಿ ಚಾಲನೆ ನೀಡಲಾಗುವುದು. ಅದಕ್ಕಾಗಿ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ" ಎಂದರು.

"ಸುಮಾರು 1 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿ ಯುವಕರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು, ಬರುವವರಿಗಾಗಿ ವೇದಿಕೆಯ ಸಿದ್ಧತೆ, ಆಸನ ವ್ಯವಸ್ಥೆ, ವಾಹನ ನಿಲುಗಡೆ, ಊಟೋಪಹಾರ ಹಾಗೂ ಮೂಲಭೂತ ವ್ಯವಸ್ಥೆ ಒದಗಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು" ಎಂದು ತಿಳಿಸಿದರು.

"ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ರಸ್ತೆ ಸಾರಿಗೆ ನಿಗಮ ಮತ್ತ ಖಾಸಗಿ ಒಡೆತನದ ಸುಮಾರು 800-1000 ಬಸ್ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ" ಎಂದು ಹೇಳಿದರು.

"ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಾಗುವವರು ಹಾಗೂ ಅಂತಿಮ ವರ್ಷದ ಸೆಮಿಸ್ಟರ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಡಿಪ್ಲೋಮಾ, ಪದವಿ ಕಾಲೇಜುಗಳ ಪ್ರಶಿಕ್ಷಣಾರ್ಥಿಗಳನ್ನು ನಿರೀಕ್ಷಿಸಲಾಗುತ್ತಿದೆ. ನಂತರ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಂತಿರುವ ಹತ್ತಿರದ ತಾಲೂಕುಗಳ ವಿದ್ಯಾರ್ಥಿಗಳನ್ನು ಕರೆತರಲು ವಾಹನ ಸೌಲಭ್ಯ ಒದಗಿಸಲಾಗುವುದು. ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯಿಂದಲೇ ಬಹುಸಂಖ್ಯೆಯ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ" ಎಂದು ತಿಳಿಸಿದರು.

"ಈಗಾಗಲೇ ಯುವನಿಧಿ ಯೋಜನೆಯ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ರಾಜ್ಯದ ಎಲ್ಲಾ ಫಲಾನುಭವಿಗಳಿಗೂ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮೊಬೈಲ್ ಸಂದೇಶ ಕಳುಹಿಸಲು ಉದ್ದೇಶಿಸಲಾಗಿದೆ. ವಿವಿಧ ಸ್ಥಳಗಳಿಂದ ಕಾರ್ಯಕ್ರಮಕ್ಕೆ ಹೊರಡುವ ವಿದ್ಯಾರ್ಥಿಗಳನ್ನು ನೋಡಿಕೊಳ್ಳಲು ಪ್ರತಿ ಬಸ್ ಒಂದಕ್ಕೆ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು" ಎಂದು ಸಚಿವರು ಸೂಚಿಸಿದರು.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿ, "ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಯುವನಿಧಿ ಯೋಜನೆಯ ವಿದ್ಯಾವಂತ ನಿರುದ್ಯೋಗಿ ಫಲಾನುಭವಿಗಳಲ್ಲದೇ, ಅಂತಿಮ ವರ್ಷಗಳ ಸೆಮಿಸ್ಟರ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಡಿಪ್ಲೋಮಾ, ಪದವಿ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ವ್ಯವಸ್ಥಿತ ಆಯೋಜನೆಗಾಗಿ ಅಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗುವುದು" ಎಂದರು.

ಉನ್ನತ ಶಿಕ್ಷಣ ಖಾತೆ ಸಚಿವ ಡಾ. ಎಂ. ಸಿ. ಸುಧಾಕರ್ ಮಾತನಾಡಿ, "ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳನ್ನು ಕರೆತರಲು ಸಾಕಷ್ಟು ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರತಿ ಬಸ್‍ಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದಲ್ಲದೇ, ಸುರಕ್ಷತೆಯ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಹೆಸರು ಮತ್ತು ಮೊಬೈಲ್ ನಂಬರ್ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಮಾಹಿತಿ ನೀಡಿದರು.

ನೋಂದಣಿ ಮಾಡುವುದು ಹೇಗೆ?;ಯುವನಿಧಿ ಯೋಜನೆಗೆ ನೋಂದಣಿ ಈಗಾಗಲೇ ಆರಂಭವಾಗಿದೆ. 2022-23ನೇ ಸಾಲಿನಲ್ಲಿ ಯಾವುದೇ ಡಿಪ್ಲೊಮಾ ಹಾಗೂ ಪದವಿ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ. ಅನುಮೋದನೆಗೊಂಡ ಅಭ್ಯರ್ಥಿಗಳಿಗೆ ಮುಂದಿನ 24 ತಿಂಗಳು ಪದವೀಧರರಿಗೆ ಮಾಸಿಕ ರೂ. 3000 ಹಾಗೂ ಡಿಪ್ಲೊಮಾ ಮುಗಿಸಿದವರಿಗೆ ಮಾಸಿಕ ರೂ. 1500 ನಿರುದ್ಯೋಗ ಭತ್ಯೆ ಸಿಗಲಿದೆ. ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ.

ಅರ್ಜಿ ಸಲ್ಲಿಸುವವರು ಕರ್ನಾಟಕದ ನಿವಾಸಿಯಾಗಿರಬೇಕು. 2023ರಲ್ಲಿ ಪದವಿ/ ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು. ಅರ್ಜಿ ಸಲ್ಲಿಸಿದ ದಿನದಿಂದ ಹುದ್ದೆ ಸಿಗುವವರೆಗೂ ಅಥವಾ 2ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗಲಿದೆ.

ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್‍ ಅಗತ್ಯ. ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್‍ನಲ್ಲಿ ಸಲ್ಲಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+