ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿಗೆ ಶರಾವತಿ ನೀರು : ಜುಲೈ 10ರಂದು ಶಿವಮೊಗ್ಗ ಬಂದ್

|
Google Oneindia Kannada News

ಶಿವಮೊಗ್ಗ, ಜುಲೈ 09 : ಶರಾವತಿ ನದಿ ಉಳಿಸಿ ಎಂದು ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ದಿನದಿಂದ ಹೋರಾಟ ನಡೆಯುತ್ತಿದೆ. ವಿವಿಧ ಸಂಘಟನೆಗಳು ಒಟ್ಟಾಗಿ ಜುಲೈ 10ರ ಬುಧವಾರ ಶಿವಮೊಗ್ಗ ಜಿಲ್ಲಾ ಬಂದ್‌ಗೆ ಕರೆ ನೀಡಿವೆ.

ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ ಬುಧವಾರ ಶಿವಮೊಗ್ಗ ಜಿಲ್ಲಾ ಬಂದ್‌ಗೆ ಕರೆ ನೀಡಿದೆ. ಜನರು ಸ್ವಯಂ ಪ್ರೇರಿತರಾಗಿ ಬಂದ್‌ನಲ್ಲಿ ಪಾಲ್ಗೊಳ್ಳಬೇಕು. ಈ ಮೂಲಕ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಬೆಂಗಳೂರಿಗೆ ಶರಾವತಿ ನೀರು ಬೇಡ : ಶಿವಮೊಗ್ಗದಲ್ಲಿ ಹೋರಾಟ ಬೆಂಗಳೂರಿಗೆ ಶರಾವತಿ ನೀರು ಬೇಡ : ಶಿವಮೊಗ್ಗದಲ್ಲಿ ಹೋರಾಟ

ಬಂದ್ ದಿನವಾದ ಬುಧವಾರ ಹಾಲು, ತರಕಾರಿ, ಮೆಡಿಕಲ್ ಶಾಪ್, ಅಂಬ್ಯುಲೆನ್ಸ್ ಸೇವೆಗೆ ಯಾವುದೇ ತೊಂದರೆ ಇರುವುದಿಲ್ಲ ಎಂದು ಒಕ್ಕೂಟದ ಸದಸ್ಯರು ಸ್ಪಷ್ಟಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಬಂದ್‌ಗೆ ವಿವಿಧ ಸಂಘಟನೆಗಳು ಈಗಾಗಲೇ ಬೆಂಬಲ ಘೋಷಣೆ ಮಾಡಿವೆ.

ಬೆಂಗಳೂರಿಗೆ ಶರಾವತಿ ನೀರು, ಯೋಜನೆ ವಿರುದ್ಧ ಪತ್ರ ಚಳವಳಿಬೆಂಗಳೂರಿಗೆ ಶರಾವತಿ ನೀರು, ಯೋಜನೆ ವಿರುದ್ಧ ಪತ್ರ ಚಳವಳಿ

Sharavathi water to Bengaluru : Shivamogga bandh on July 10

ಶಿವಮೊಗ್ಗ ನಗರದ ಸೈನ್ಸ್ ಮೈದಾನದಿಂದ ಬುಧವಾರ ಬೃಹತ್ ಪ್ರತಿಭಟನಾ ಜಾಥಾ ನಡೆಯಲಿದೆ. ಶಿವಪ್ಪ ನಾಯಕ ವೃತ್ತ, ಅಮೀರ್ ಅಹಮದ್ ವೃತ್ತ, ಗೋಪಿ ವೃತ್ತದ ಮೂಲಕ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿಗಳ ಕಚೇರಿ ತಲುಪಲಿದೆ.

ಬಸವ ಕೇಂದ್ರದ ಶ್ರೀ ಬಸವ ಮುರುಳಸಿದ್ಧ ಸ್ವಾಮೀಜಿ, ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟದ ಅಧ್ಯಕ್ಷ, ಸಾಹಿತಿ ನಾ.ಡಿಸೋಜಾ, ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು, ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಹರಿದು ಬರಬೇಡಮ್ಮ ಶರಾವತಿ ನಾವೇ ನಿನ್ನನ್ನು ಎಳೆದು ತರುತ್ತೇವೆ!ಹರಿದು ಬರಬೇಡಮ್ಮ ಶರಾವತಿ ನಾವೇ ನಿನ್ನನ್ನು ಎಳೆದು ತರುತ್ತೇವೆ!

ಸಾಗರ, ಶಿವಮೊಗ್ಗ, ತೀರ್ಥಹಳ್ಳಿ, ಸೊರಬ ತಾಲೂಕುಗಳಲ್ಲಿ ಈಗಾಗಲೇ ಬಂದ್ ಬಗ್ಗೆ ಮಾಹಿತಿ ನೀಡಲಾಗಿದೆ. ತಾಲೂಕು ಮಟ್ಟದಲ್ಲಿಯೂ ಈಗಾಗಲೇ ಹೋರಾಟ ನಡೆದಿದೆ. ಹೊಸನಗರದಲ್ಲಿ ದೊಡ್ಡ ಹೋರಾಟ ನಡೆದಿದ್ದು ಬುಧವಾರ ಶಿವಮೊಗ್ಗದಲ್ಲಿ ಬೃಹತ್ ಹೋರಾಟ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ.

ಶಿವಮೊಗ್ಗ ಬಂದ್ ಹಿನ್ನಲೆಯಲ್ಲಿ ಜನ ಜೀವನಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಜಿಲ್ಲೆಯ ಖಾಸಗಿ ಶಾಲಾ-ಕಾಲೇಜುಗಳು ಬುಧವಾರ ರಜೆ ನೀಡುವ ಕುರಿತು ಇನ್ನೂ ಅಂತಿಮ ತೀರ್ಮಾನವನ್ನು ಕೈಗೊಂಡಿಲ್ಲ. ಖಾಸಗಿ ಬಸ್ ಸೇವೆ ಸ್ಥಗಿತಗೊಳ್ಳುವ ನಿರೀಕ್ಷೆ ಇದೆ.

ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಯೋಜನೆ ಅವೈಜ್ಞಾನಿಕವಾಗಿದೆ. ಸರ್ಕಾರ ಈ ಯೋಜನೆಯನ್ನು ಕೈ ಬಿಡಬೇಕು ಎಂದು ಹಲವು ದಿನಗಳಿಂದ ಶಿವಮೊಗ್ಗದಲ್ಲಿ ಹೋರಾಟ ನಡೆಯುತ್ತಿದೆ.

English summary
Sharavathi Nadi Ulisi Horata Okkuta called for Shivamogga district bandh on July 10, 2019. Bandh called against Karnataka government proposal of Sharavathi water to Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X