Shikaripura: ನಿರೀಕ್ಷೆಯಂತೆ ಶಿಕಾರಿಪುರದಲ್ಲಿ ಬಿವೈ ವಿಜಯೇಂದ್ರ ಮುನ್ನಡೆ
ಶಿವಮೊಗ್ಗ, ಮೇ 13: ಶಿವಮೊಗ್ಗದ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರ 9.50ರ ಸುಮಾರಿಗೆ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ನಿಂದ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ಸ್ಪರ್ಧಿಸಿರುವ ನಾಗರಾಜ ಗೌಡ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.
ಕೆಲವು ನಿಮಿಷಗಳ ಹಿಂದಷ್ಟೇ ಪಕ್ಷೇತರ ಅಭ್ಯರ್ಥಿ ನಾಗರಾಜ ಗೌಡ ಸುಮಾರು 500 ಮತಗಳ ಅಂತರದಿಂದ ಮುಂದಿದ್ದರು. ಬಳಿಕ ಬಿವೈ ವಿಜಯೇಂದ್ರ 5176 ಮತಗಳ ಅಂತರದಿಂದ ಮುನ್ನಡೆ ಸಾಧಿಸುತ್ತಿದ್ದಾರೆ. ಸದ್ಯಕ್ಕೆ ಪಕ್ಷೇತರ ಅಭ್ಯರ್ಥಿ ನಾಗರಾಜ ಗೌಡ 3465 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ 312 ಮತಗಳನ್ನಷ್ಟೇ ಪಡೆದುಕೊಂಡಿದ್ದಾರೆ.

ಶಿಕಾರಿಪುರ ಕ್ಷೇತ್ರದಲ್ಲಿ ಒಟ್ಟು ಹತ್ತು ಅಭ್ಯರ್ಥಿಗಳು ಕಣದಲ್ಲಿದ್ದು, ಸದ್ಯಕ್ಕೆ ಬಿಜೆಪಿಯ ವಿಜಯೇಂದ್ರ ಮತ್ತು ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ನಡುವೆ ತೀವ್ರ ಪೈಪೋಟಿ ಕಾಣಿಸುತ್ತಿದೆ.

ಈ ಹಿಂದೆ ಶಿವಮೊಗ್ಗದ ಪ್ರೆಸ್ ಕ್ಲಬ್‌ನಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, "2004ರ ಚುನಾವಣೆ ಸಂದರ್ಭದಲ್ಲಿ ಯಾರು ಅಭ್ಯರ್ಥಿಯೆಂಬುದೇ ಗೊತ್ತಿರಲಿಲ್ಲ. ಅಂತಹ ಸಂದರ್ಭದಲ್ಲಿ ನಮ್ಮ ಶಿಕಾರಿಪುರದ ಸ್ವಾಭಿಮಾನಿ ಮತದಾರರು 46 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಬಿ.ಎಸ್. ಯಡಿಯೂರಪ್ಪರನ್ನು ಗೆಲ್ಲಿಸಿದ್ದರು. ನಾನು ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ" ಎಂದು ಹೇಳಿದ್ದರು.












Click it and Unblock the Notifications