ಶಿಕಾರಿಪುರ ಪುರಸಭಾ ಆರೋಗ್ಯ ನಿರೀಕ್ಷಕರಿಗೆ ಸೋಂಕು; ಕಚೇರಿಗೆ ಪ್ರವೇಶ ನಿರ್ಬಂಧ
ಶಿವಮೊಗ್ಗ, ಜುಲೈ 22: ಶಿವಮೊಗ್ಗದ ಶಿಕಾರಿಪುರ ಪುರಸಭೆಯ ಆರೋಗ್ಯ ನಿರೀಕ್ಷಕರೊಬ್ಬರಲ್ಲಿ ಕೊರೊನಾ ಸೋಂಕು ದೃಢವಾಗಿದೆ ಎಂದು ಮುಖ್ಯಾಧಿಕಾರಿ ಸುರೇಶ್ ತಿಳಿಸಿದ್ದಾರೆ.
ಕೊರೊನಾ ಸೋಂಕಿನ ವಿರುದ್ಧ ಹಗಲಿರುಳು ಶ್ರಮವಹಿಸಿ ಸೇವೆ ಸಲ್ಲಿಸುತ್ತಿರುವ ಪುರಸಭಾ ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡಿದ್ದು ಸಿಬ್ಬಂದಿಯಲ್ಲಿ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಒಂದು ವಾರ ಪುರಸಭಾ ಕಚೇರಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಅತ್ಯಂತ ತುರ್ತು ಸೇವೆಗಳು ಮಾತ್ರ ಲಭ್ಯವಿದೆ ಎಂದು ತಿಳಿಸಿದ್ದಾರೆ.
ಪುರಸಭಾ ಸಿಬ್ಬಂದಿ ಜೊತೆ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗೆ ಹಾಗೂ ಸ್ನೇಹಿತ, ಕುಟುಂಬದವರ ಕೊರೊನಾ ಪರೀಕ್ಷೆ ನಡೆಸಲಾಗುತ್ತದೆ. ಜೊತೆಗೆ ಕೊರೊನಾ ವಾರಿಯರ್ಸ್ ಎಂದು ಆಸ್ಪತ್ರೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೊಲೀಸರು ಹೀಗೆ ಅನೇಕ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಕೋವಿಡ್ ವಿಮೆ ನೀಡಲಾಗುತ್ತಿದೆ.

ಇದರೊಂದಿಗೆ ಕೊರೊನಾ ಸೋಂಕಿನ ನಿರ್ವಹಣೆಯಲ್ಲಿ ಕೆಲಸ ಮಾಡುತ್ತಿರುವ ಕಂದಾಯ ಇಲಾಖೆ, ಪುರಸಭೆ, ತಾಲೂಕು ಪಂಚಾಯಿತಿ ಹೀಗೆ ಅನೇಕ ಇಲಾಖೆಗಳ ಸಿಬ್ಬಂದಿಗೂ ವಿಮೆ ಸೌಲಭ್ಯ ಕಲ್ಪಿಸಬೇಕು ಎಂಬ ಕೂಗು ಕೇಳಿಬಂದಿದೆ.












Click it and Unblock the Notifications