• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯಡಿಯೂರಪ್ಪ ಮನೆ ಇರುವ ವಾರ್ಡ್‌ನಲ್ಲಿ ಕಾಂಗ್ರೆಸ್‌ಗೆ ಜಯ!

|

ಶಿವಮೊಗ್ಗ, ಜೂನ್ 03 : ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತವರು ಕ್ಷೇತ್ರ ಶಿಕಾರಿಪುರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಶಿಕಾರಿಪುರ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಯಡಿಯೂರಪ್ಪ ಮನೆ ಇರುವ ವಾರ್ಡ್‌ ಸಹ ಕಾಂಗ್ರೆಸ್ ಪಾಲಾಗಿದೆ.

ಸೋಮವಾರ ಶಿಕಾರಿಪುರ ಪುರಸಭೆ ಚುನಾವಣೆ ಫಲಿತಾಂಶ ಪ್ರಕಟವಾಯಿತು. 23 ವಾರ್ಡ್‌ಗಳನ್ನು ಹೊಂದಿರುವ ಪುರಸಭೆಯಲ್ಲಿ ಹಲವು ದಶಕಗಳಿಂದ ಬಿಜೆಪಿ ಗೆಲುವು ಸಾಧಿಸುತ್ತಿತ್ತು. ಆದರೆ, ಈ ಬಾರಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ.

ಯಡಿಯೂರಪ್ಪಗೆ ಆಘಾತ: ಶಿಕಾರಿಪುರ ಪುರಸಭೆ ಕಾಂಗ್ರೆಸ್ ಪಾಲು

23 ವಾರ್ಡ್‌ಗಳ ಪೈಕಿ 8 ಕಡೆಗಳಲ್ಲಿ ಬಿಜೆಪಿ ಜಯಗಳಿಸಿದೆ. ಈ ಮೂಲಕ ಯಡಿಯೂರಪ್ಪ ಮತ್ತು ನೂತನ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಜನರು ಶಾಕ್ ನೀಡಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ 2019 : ಸಂಪೂರ್ಣ ಫಲಿತಾಂಶ

ಕಾಂಗ್ರೆಸ್ 12 ವಾರ್ಡ್‌ಗಳಲ್ಲಿ ಜಯಗಳಿಸಿದರೆ, ಪಕ್ಷೇತರ ಅಭ್ಯರ್ಥಿಗಳು ಮೂರು ವಾರ್ಡ್‌ಗಳಲ್ಲಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಪುರಸಭೆಯಲ್ಲಿ ಆಡಳಿತದ ಚುಕ್ಕಾಣಿಯನ್ನು ಹಿಡಿಯಲಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ 2019 : ಸಂಪೂರ್ಣ ಫಲಿತಾಂಶ

ಶಿಕಾರಿಪುರದ 14ನೇ ವಾರ್ಡ್‌ನಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸವಿದೆ. ಈ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಕಾಂಗ್ರೆಸ್‌ನ ಶ್ವೇತಾ ಅವರು ಗೆಲುವು ಸಾಧಿಸಿದ್ದಾರೆ. ಆ ಮೂಲಕ ಯಡಿಯೂರಪ್ಪ ನಿವಾಸವಿರುವ ವಾರ್ಡ್‌ನಲ್ಲಿಯೇ ಬಿಜೆಪಿಗೆ ಸೋಲಾಗಿದೆ.

ಕಾಂಗ್ರೆಸ್ ಮುಖಂಡ ಶಾಂತ ವೀರಪ್ಪ ಗೌಡ ಅವರ ಸೊಸೆ ಶ್ವೇತಾ ಅವರು 511 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಬಿಜೆಪಿಯಿಂದ ಕಣಕ್ಕಿಳಿದಿದ್ದ ಲೀಲಾವತಿ ಅವರು 266 ಮತಗಳನ್ನು ಪಡೆದಿದ್ದಾರೆ.

English summary
Shivamogga district Shikaripura town municipal council election result 2019 announced. Shikaripura home town for Karnataka BJP president B.S.Yeddyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X