ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ವ್ಯಕ್ತಿಚಿತ್ರ

By Mahesh
|
Google Oneindia Kannada News

'ರಾಜನಂತಲ್ಲ ಒಬ್ಬ ಸೇವಕನಂತೆ ಜನತೆಯ ಸೇವೆ ಮಾಡುವುದಾಗಿ ನಮ್ರತೆಯಿಂದ ಜನರ ಮುಂದೆ ಮತ್ತೊಮ್ಮೆ ಕೈ ಜೋಡಿಸಿ ಕರ್ನಾಟಕ ರಾಜಕೀಯ ಕ್ಷೇತ್ರದ ಶಿಸ್ತಿನ ಸಿಪಾಯಿ ಬಿಎಸ್ ಯಡಿಯೂರಪ್ಪ ಅವರು ನಿಂತಿದ್ದಾರೆ. ವಿರೋಧ ಪಕ್ಷಗಳ ಆರೋಪ, ಹತ್ತು ಹಲವು ಹಗರಣಗಳನ್ನೆಲ್ಲ ಮೆಟ್ಟಿನಿಂತು ಸ್ವಂತ ಬಲದಿಂದ ರಾಜ್ಯದ ಜನತೆಯ ನಂಬಿಕೆಯನ್ನು ಗಳಿಸಿದ ಛಲಗಾರ ಬಿ.ಎಸ್.ಯಡಿಯೂರಪ್ಪ ಅವರು ತಾವೇ ಕಟ್ಟಿದ್ದ ಪ್ರಾದೇಶಿಕ ಪಕ್ಷದ ಕನಸನ್ನು ಕತ್ತು ಹಿಸುಕಿ ಮತ್ತೆ ಹಳೆ ಗಂಡನ ಪಾದವೇ ಗತಿ ಎಂದು ಭಾ.ಜ.ಪಗೆ ಬಂದು ಮೋದಿ ಜಪ ಮಾಡುತ್ತಿದ್ದಾರೆ.

ಹೌದು ಈ ಹಿಂದಿನ ಯಡಿಯೂರಪ್ಪಗೆ ಹೋಲಿಸಿದರೆ ಈಗಿನ ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿಎಸ್ ವೈ ಕೊಂಚ ಮೆತ್ತಗಾಗಿದ್ದಾರೆ. ಆದರೆ, ಕಾವೇರಿ ಹೋರಾಟದಿಂದ ರಾಮಜನ್ಮಭೂಮಿ ಹೋರಾಟದವರೆಗೆ, ಜೀತಮುಕ್ತರ ಸಮಸ್ಯೆಯಿಂದ ಬಗರ್ ಹುಕಂ ಸಮಸ್ಯೆವರೆಗೆ ನಿರಂತರ ಹೋರಾಟ, ಜನಪರ ಕಾಳಜಿ ಹೊಂದಿರುವ ನಾಯಕರಾಗಿ ಇಂದಿಗೂ ಗುರುತಿಸಿಕೊಳ್ಳುತ್ತಾರೆ.

ದಿನ ಪ್ರತಿ ಬೆಳಿಗ್ಗೆ ದೇವರ ಪೂಜೆ ಮಾಡದಿದ್ದರು ಪರವಾಗಿಲ್ಲ, ದೀನ ದಲಿತರ ಸೇವೆ ಮಾಡಿ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳುವ ಯಡಿಯೂರಪ್ಪ ಅವರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದ ಬಡ ರೈತ ಕುಟುಂಬದ ಸಿದ್ಧಲಿಂಗಪ್ಪ ಪುಟ್ಟಮ್ಮ ದಂಪತಿಗಳಿಗೆ 1943ರಲ್ಲಿ ಜನಿಸಿದರು. ತಾಯಿ ಪುಟ್ಟಮ್ಮ ಅವರನ್ನು ತಮ್ಮ ನಾಲ್ಕನೇ ವಯಸ್ಸಿನಲ್ಲಿಯೇ ಕಳೆದುಕೊಂಡ ಯಡಿಯೂರಪ್ಪ ತಂದೆಯ ಮಮತೆಯಲ್ಲಿ ಬೆಳೆದವರು. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]

ಬಿ.ಎಸ್. ಯಡಿಯೂರಪ್ಪ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದ ಬಡ ರೈತ ಕುಟುಂಬದ ಸಿದ್ಧಲಿಂಗಪ್ಪ ಪುಟ್ಟಮ್ಮ ದಂಪತಿಗಳಿಗೆ 1943ರಲ್ಲಿ ಜನಿಸಿದರು. ತಾಯಿ ಪುಟ್ಟಮ್ಮ ಅವರನ್ನು ತಮ್ಮ ನಾಲ್ಕನೇ ವಯಸ್ಸಿನಲ್ಲಿಯೇ ಕಳೆದುಕೊಂಡ ಯಡಿಯೂರಪ್ಪ ತಂದೆಯ ಮಮತೆಯಲ್ಲಿ ಬೆಳೆದವರು.

ಯಡಿಯೂರಪ್ಪನವರ ರಾಜಕೀಯ ಜೀವನ ಹುಟ್ಟಿಕೊಂಡಿದ್ದೇ ರೈತ ಹೋರಾಟದಿಂದ. ಯಡಿಯೂರಪ್ಪ ಸವೆಸಿದ ಹಾದಿ ಹೋರಾಟದಿಂದ ಕೂಡಿದೆ. ಈಗ ಶಿವಮೊಗ್ಗ ಕ್ಷೇತ್ರದಿಂದ ರಾಷ್ಟ್ರ ರಾಜಕಾರಣಕ್ಕೆ ಹೈ ಜಂಪ್ ಮಾಡಲು ಯತ್ನಿಸಿದ್ದಾರೆ. ಯಡಿಯೂರಪ್ಪ ಬದುಕಿನ ಸ್ಥೂಲ ಚಿತ್ರಣ ನಿಮ್ಮ ಮುಂದಿದೆ.

ಹೆಚ್ಚು ಯೋಜನೆ ಅನುಷ್ಠಾನಗೊಳಿಸಿದ ಹೆಗ್ಗಳಿಕೆ

ಹೆಚ್ಚು ಯೋಜನೆ ಅನುಷ್ಠಾನಗೊಳಿಸಿದ ಹೆಗ್ಗಳಿಕೆ

ರೈತರ ಸಾಲ ಮನ್ನಾ, ಸಾರಾಯಿ ನಿಷೇಧ. ಲಾಟರಿ ನಿಷೇಧ, ರೈತರಿಗೆ ಶೇ.4 ಬಡ್ಡಿದರದಲ್ಲಿ ಸಾಲ, ಬಿಪಿಎಲ್ ಕುಟುಂಬಗಳ ಹೆಣ್ಣುಮಕ್ಕಳ ಸಬಲೀಕರಣಕ್ಕೆ ಭಾಗ್ಯಲಕ್ಷ್ಮಿ ಯೋಜನೆ, ಉಚಿತ ಬೈಸಿಕಲ್ ವಿತರಣೆ ಯೋಜನೆ, ನಿರುದ್ಯೋಗ ನಿವಾರಣೆಗೆ ಸುವರ್ಣ ಕಾಯಕ ಉದ್ಯೋಗ ತರಬೇತಿಯೋಜನೆ, ಹಿರಿಯ ನಾಗರಿಕರ ಸಾಮಾಜಿಕ ಭದ್ರೆತೆಗೆ ಸಂಧ್ಯಾ ಸುರಕ್ಷಾ ಯೋಜನೆ, ಮೊದಲಾದ ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಬಜೆಟ್ ನಲ್ಲಿ ಅಳವಡಿಸಿ ಅನುಷ್ಠಾನಗೊಳಿಸಿದ ಹೆಗ್ಗಳಿಕೆ.

ಬಿಎಸ್ ವೈರದ್ದು ಕಡಿಮೆ ಸಾಧನೆ ಏನಲ್ಲ

ಬಿಎಸ್ ವೈರದ್ದು ಕಡಿಮೆ ಸಾಧನೆ ಏನಲ್ಲ

ಯಡಿಯೂರಪ್ಪನವರ ರಾಜಕೀಯ ಜೀವನ ಹುಟ್ಟಿಕೊಂಡಿದ್ದೇ ರೈತ ಹೋರಾಟದಿಂದ. ಯಡಿಯೂರಪ್ಪ ಸವೆಸಿದ ಹಾದಿ ಹೋರಾಟದಿಂದ ಕೂಡಿದೆ. ಸತತ ನಾಲ್ಕು ದಶಕಗಳಲ್ಲಿ ಅನೇಕ ಏಳು ಬೀಳುಗಳನ್ನು ಕಂಡಿದ್ದಾರೆ. ಬೂಕನಕೆರೆ ಎಂಬ ಕುಗ್ರಾಮದ ಬಡ ರೈತ ಕುಟುಂಬದ ಯಡಿಯೂರಪ್ಪ ದಿಢೀರ್ ನಾಯಕರಾದವರಲ್ಲ. ಯಾವುದೇ ಗಾಡ್ ಫಾದರ್ ಇಲ್ಲದೇ ಸ್ವಂತ ಪರಿಶ್ರಮ ಮೇಲೆ ಹಂತಹಂತವಾಗಿ ಬೆಳೆದು ಬಂದ ಧೀಮಂತ ನಾಯಕ. ಹಳ್ಳಿಯಿಂದಲೇ ಹೋರಾಟ ಆರಂಭಿಸಿ ರಾಜಕೀಯ ನೆಲೆಗಟ್ಟನ್ನು ಕಂಡುಕೊಂಡವರು.

ಪಕ್ಷ ಸಂಘಟನೆಯಲ್ಲಿ ನಿಪುಣರಾದ ಯಡಿಯೂರಪ್ಪ, ಹೋರಾಟದಲ್ಲಿ ಎತ್ತಿದ ಕೈ. ಭಾಷಣಕ್ಕೆ ನಿಂತರೆ ಗುಡುಗು ಸಿಡಿಲುಗಳ ಮೇಳೈಕೆ. ಇಂತಹ ಯಡಿಯೂರಪ್ಪ ಧೃತಿಗೆಡದೆ 80ರ ದಶಕದಲ್ಲಿ ಎರಡು ಶಾಸಕರಿದ್ದ ಪಕ್ಷವನ್ನು ಹಂತಹಂತವಾಗಿ ಬೆಳೆಸುತ್ತಾ ಇಂದು 110 ಶಾಸಕರ ಪಕ್ಷವಾಗಿ ಮಾಡಿದ್ದು ಕಡಿಮೆ ಸಾಧನೆ ಏನಲ್ಲ

ಜೆಡಿಎಸ್ ಜತೆ ಅಪವಿತ್ರ ಕೂಡಿಕೆ ಕಪ್ಪುಚುಕ್ಕೆ

ಜೆಡಿಎಸ್ ಜತೆ ಅಪವಿತ್ರ ಕೂಡಿಕೆ ಕಪ್ಪುಚುಕ್ಕೆ

ಬಿಜೆಪಿ ಜತೆಗೆ ಜೆಡಿಎಸ್ ಸರ್ಕಾರ ರಚಿಸಲು ಮುಂದಾಗಿದ್ದು, ಅಪವಿತ್ರ ಮೈತ್ರಿ ಯಡಿಯೂರಪ್ಪ ಜೀವನದಲ್ಲಿ ಕಪ್ಪುಚುಕ್ಕೆಯೂ ಹೌದು, ಬ್ಲೆಸಿಂಗ್ ಇನ್ ಡಿಸ್ಗೈಸ್ ಕೂಡ ಹೌದು. ಜೆಡಿಎಸ್ ಬಿಜೆಪಿಗೆ ಕೈಕೊಡದಿದ್ದರೆ ಬಿಜೆಪಿ ಪರ ಗಾಳಿ ಬೀಸುತ್ತಲೂ ಇರಲಿಲ್ಲ ಎಂಬುದು ಕೂಡ ಅಷ್ಟೇ ಸತ್ಯ. ಆದರೆ, ಆ ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ, ಹಣಕಾಸು ಸಚಿವರಾಗಿ ನೀಡಿದ ಅನೇಕ ಜನಪರ ಕಾರ್ಯಕ್ರಮಗಳಿಂದ ಯಡಿಯೂರಪ್ಪ ಮತ್ತಷ್ಟು ಜನಪ್ರಿಯತೆ ಪಡೆದುಕೊಂಡರು. ಆದರೆ, ವೈಯಕ್ತಿಕ ವರ್ಚಸ್ಸು ಬೆಳೆದರೂ ಒಟ್ಟಾರೆ ಪಕ್ಷದ ಹಿತದೃಷ್ಟಿಯಿಂದ ಭಾರಿ ಆಘಾತಕಾರಿ ಬೆಳವಣಿಗೆಯಾಯಿತು.

ಯಡಿಯೂರಪ್ಪ ಅಲಂಕರಿಸಿದ ಹುದ್ದೆಗಳು

ಯಡಿಯೂರಪ್ಪ ಅಲಂಕರಿಸಿದ ಹುದ್ದೆಗಳು

1975 : ಶಿಕಾರಿಪುರ ಪುರಸಭೆ ಸದಸ್ಯರಾಗಿ ಆಯ್ಕೆ, 1977ರಲ್ಲಿ ಅಧ್ಯಕ್ಷ.
1980 : ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ.
1983 : ಮಾಜಿ ಸಚಿವ ವೆಂಕಟಪ್ಪ ಅವರನ್ನು ಸೋಲಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ
1985 : 88 ವರೆಗೆ ಬಿಜೆಪಿ ಜಿಲ್ಲಾಧ್ಯಕ್ಷ, 1988 ರಲ್ಲಿ ರಾಜ್ಯಾಧ್ಯಕ್ಷ,
1992 ರಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನ ನಿರ್ವಹಣೆ
1994 : ವಿಧಾನಸಭೆ ಪ್ರತಿಪಕ್ಷದ ನಾಯಕ
1999 : ಮತ್ತೆ ರಾಜ್ಯಾಧ್ಯಕ್ಷ, 2000 ರಲ್ಲಿ ಮೇಲ್ಮನೆ ಸದಸ್ಯ
2004 : ಐದನೇ ಬಾರಿಗೆ ವಿಧಾನಸಭೆ ಪ್ರವೇಶ, ಇನ್ನೊಮ್ಮೆ ಪ್ರತಿಪಕ್ಷದ ನಾಯಕ
2006 : ಸಮ್ಮಿಶ್ರ ಸರ್ಕಾರ ರಚನೆ, ಉಪಮುಖ್ಯಮಂತ್ರಿ, ಹಣಕಾಸು ಮತ್ತು ಅಬಕಾರಿ ಖಾತೆಗಳ ನಿರ್ವಹಣೆ

7 ದಿನ ಮಾತ್ರ ಮುಖ್ಯಮಂತ್ರಿಯಾಗಿ ಪದವಿ

7 ದಿನ ಮಾತ್ರ ಮುಖ್ಯಮಂತ್ರಿಯಾಗಿ ಪದವಿ

2007 : ನವೆಂಬರ್ 12 ರಿಂದ 17ರ ವರೆಗೆ 7 ದಿನ ಮಾತ್ರ ಮುಖ್ಯಮಂತ್ರಿಯಾಗಿ ಪದವಿ ಅಲಂಕರಿಸಿದ್ದರು.
2008 : ಮೇ 30ರ ಶುಕ್ರವಾರ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ನಂತರ ಸದಾನಂದ ಗೌಡರಿಗೆ ಸಿಎಂ ಪಟ್ಟ ಒಲಿದಿದ್ದು, ಬಂಡಾಯವೆದ್ದು ಜಗದೀಶ್ ಶೆಟ್ಟರ್ ರನ್ನು ಕುರ್ಚಿಯಲ್ಲಿ ಕೂರಿಸಿದ್ದು ಸಾಧನೆಗಿಂತ ವೈಫಲ್ಯ ಎನ್ನಬಹುದು, ಬಿಜೆಪಿಯಿಂದ ಹೊರ ಬಿದ್ದ ಮೇಲೆ ಕರ್ನಾಟಕ ಜನತಾ ಪಕ್ಷ ಸ್ಥಾಪನೆ, ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದರು. ಕೆಜೆಪಿ ತಕ್ಕಮಟ್ಟಿನ ಸಾಧನೆ ಮಾಡಿದರೂ ಆಂತರಿಕ ಒತ್ತಡದಿಂದ ರಾಷ್ಟ್ರ ರಾಜಕೀಯದ ಕನಸಿನಿಂದ ತಾವೇ ಬೆಳೆಸಿದ ಪಕ್ಷವನ್ನು ತೊರೆದರು.
2016: ಬಿಜೆಪಿ ಸಂಸದರಾಗಿದ್ದ ಯಡಿಯೂರಪ್ಪ ಅವರು ಏಪ್ರಿಲ್ 14, 2016ರಂದು ಬಿಜೆಪಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ

ಹಗರಣಗಳ ನಡುವೆ ಮತ್ತೆ ಬಿಜೆಪಿ ಸೇರಿದ್ದೆ ಸಾಧನೆ

ಹಗರಣಗಳ ನಡುವೆ ಮತ್ತೆ ಬಿಜೆಪಿ ಸೇರಿದ್ದೆ ಸಾಧನೆ

ಗೋಲಿಬಾರ್ ನಲ್ಲಿ ರೈತನೊಬ್ಬ ಮೃತಪಟ್ಟ ಹಾವೇರಿಯಲ್ಲೇ ಉದಯವಾದ ಹೊಸ ಪ್ರಾದೇಶಿಕ ಪಕ್ಷದ ಚುಕ್ಕಾಣಿ ಹಿಡಿದ ಯಡಿಯೂರಪ್ಪ ಅವರ ಸುತ್ತ ಇನ್ನೂ ಅನೇಕ ಹಗರಣಗಳ ಬಲೆ ಇದ್ದೇ ಇದೆ. ಡಿ ನೋಟಿಫಿಕೇಷನ್, ಸ್ವಜನಪಕ್ಷಪಾತ, ಭೂ ಹಗರಣಗಳ ಜೊತೆ ಯಡಿಯೂರಪ್ಪ ಅವರ ಸಿಡುಕು ಕಂಡರೆ ಜನ ಮುಖ ಬೇರೆಡೆ ತಿರುಗಿಸುತ್ತಾರೆ. ಕೆಜೆಪಿ ಅಳಿವು ಉಳಿವಿನೊಂದಿಗೆ ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯ ನಿರ್ಧಾರ ಎನ್ನಲಾಗಿತ್ತು. ಆದರೆ, ಮತ್ತೊಮ್ಮೆ ಬಿಜೆಪಿ ಸೇರ್ಪಡೆಯೊಂದಿಗೆ ಕೊನೆ ಪ್ರಯತ್ನವನ್ನು ಮಾಡುತ್ತಿದ್ದಾರೆ. ಬಿಜೆಪಿ ಹಿರಿಯ ನಾಯಕರು, ವಿಪಕ್ಷಗಳ ವಿರೋಧದ ನಡುವೆ ಬಿಜೆಪಿಗೆ ಮರಳಿರುವ ಬಿಎಸ್ ವೈ ಮತ್ತೊಮ್ಮೆ ಏಳಿಗೆ ಕಾಣುವ ಉತ್ಸಾಹದಲ್ಲಿದ್ದಾರೆ.

ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕೆ

ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕೆ

ಕೆಜೆಪಿಯಿಂದ ಬಿಜೆಪಿಗೆ ಮರಳಿದ ಬಳಿಕ ಬಿಎಸ್ ಯಡಿಯೂರಪ್ಪ ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ. ಹಲವು ಲೆಕ್ಕಾಚಾರಗಳ ನಂತರ ಜೆಡಿಎಸ್ ಮಾಜಿ ಸಿಎಂ ದಿ.ಎಸ್.ಬಂಗಾರಪ್ಪ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರನ್ನು ಕಣಕ್ಕೆ ಇಳಿಸಿದೆ. ಕಾಂಗ್ರೆಸ್ ಪಕ್ಷದಿಂದ ಮಂಜುನಾಥ್ ಭಂಡಾರಿ, ಆಮ್ ಆದ್ಮಿ ಪಕ್ಷದ ಶ್ರೀಧರ್ ಕಲ್ಲಹಳ್ಳ ಅಭ್ಯರ್ಥಿಗಳಾಗಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ವಿಧಾನಸಭೆಯಲ್ಲಿ ಆರ್ಭಟಿಸುತ್ತಿದ್ದ ಯಡಿಯೂರಪ್ಪ ಅವರು ಲೋಕಸಭೆಯಲ್ಲಿ ಘರ್ಜಿಸಲು ಸಿದ್ಧತೆ ನಡೆಸಿದ್ದಾರೆ. ಆದರೆ, ಈ ಬಾರಿ ಗೆಲುವು ಅಷ್ಟು ಸುಲಭವಲ್ಲ ಎನ್ನಲಾಗಿದೆ.

ಯಡಿಯೂರಪ್ಪ ಅವರ ಕುಟುಂಬಕ್ಕೂ ಕನಸಿದೆ

ಯಡಿಯೂರಪ್ಪ ಅವರ ಕುಟುಂಬಕ್ಕೂ ಕನಸಿದೆ

ಮಂಡ್ಯದಲ್ಲಿ ಬಿ.ಎ. ಪದವಿಯನ್ನು ಪೂರೈಸಿದ ಮೇಲೆ ಕೆಲಸ ಅರಸಿ ಶಿಕಾರಿಪುರಕ್ಕೆ ಬಂದ ಯಡಿಯೂರಪ್ಪ ಅವರು ವೀರಭದ್ರ ಶಾಸ್ತ್ರೀ ಅವರ ರೈಸ್ ಮಿಲ್ ನಲ್ಲಿ ಗುಮಾಸ್ತನ ಕೆಲಸಕ್ಕೆ ಸೇರಿಕೊಂಡರು. ಕೊನೆಗೆ ಶಾಸ್ತ್ರೀ ಅವರ ಪುತ್ರಿ ಮೈತ್ರಾದೇವಿ ಅವರನ್ನು ವರಿಸಿ ಮಾವನ ಮನೆಯಲ್ಲಿ ನೆಲೆಸಿದರು. ಯಡಿಯೂರಪ್ಪ ಅವರಿಗೆ ಇಬ್ಬರು ಪುತ್ರರು(ರಾಘವೇಂದ್ರ, ವಿಜಯೇಂದ್ರ), ಹಾಗೂ ಮೂವರು ಪುತ್ರಿಯರು (ಅರುಣಾದೇವಿ, ಪದ್ಮಾವತಿ ಮತ್ತು ಉಮಾದೇವಿ). 2004ರಲ್ಲಿ ಪತ್ನಿ ಮೈತ್ರಾದೇವಿಯವರು ಆಕಸ್ಮಿಕವಾಗಿ ನೀರಿನ ತೊಟ್ಟಿಯಲ್ಲಿ ಬಿದ್ದು ತೀರಿಕೊಂಡರು.

ಯಡಿಯೂರಪ್ಪ ಅವರ ಆರೋಗ್ಯ, ಅರೈಕೆ ಜವಾಬ್ದಾರಿ ಹೊತ್ತಿರುವ ಪುತ್ರಿಯರು ಹಾಗೂ ಆಪ್ತರಿಗೆ ಸಂಸತ್ತಿನಲ್ಲಿ ಬಿಎಸ್ ವೈ ಮಿಂಚಬೇಕು ಎಂಬ ಕನಸಿದೆಯಂತೆ

English summary
Bookanakere Siddalingappa Yeddyurappa(@BSYBJP) Known as the farmers' leader among the Sangh Parivar, Yeddyurappa was catapulted from the ranks of the opposition to the ruling side. BS Yeddyurappa is offered Shimoga LS poll ticket by BJP after he rejoined BJP recently dumping KJP
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X