ಶಿವಮೊಗ್ಗ: ತಾಪಂ ಕಚೇರಿಯಲ್ಲೇ ನೇಣಿಗೆ ಶರಣು

ಶಿವಮೊಗ್ಗ, ಅ. 20: ಜಿಲ್ಲೆಯ ಸಾಗರ ತಾಲೂಕಿನ ತಾಲೂಕು ಪಂಚಾಯಿತಿ ಕಚೇರಿಯಲ್ಲೇ ಎಫ್ ಡಿಎ ಅಧಿಕಾರಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಯುವರಾಜ್ ನಾಯಕ್ (55) ಆತ್ಮಹತ್ಯೆ ಮಾಡಿಕೊಂಡವರು. ಸೊರಬಕ್ಕೆ ಭೇಟಿ ನೀಡಿದ್ದ ಶಿವಮೊಗ್ಗ ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿ ಭಾನುವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದರು. ಈ ವೇಳೆ ಕೆಲಸ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಎಫ್ ಡಿಎ ಅಧಿಕಾರಿ ಯುವರಾಜ್ ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು ಎನ್ನಲಾಗಿದೆ.[ಆತ್ಮಹತ್ಯೆಗೆ ಶರಣಾದ ಬಿಬಿಎಂ ವಿದ್ಯಾರ್ಥಿನಿಯರು]

shimoga

ಇದರಿಂದ ಮನನೊಂದು ಯುವರಾಜ್ ನಾಯಕ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು ಸ್ಪಷ್ಟ ಮಾಹಿತಿ ಸಿಗಬೇಕಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಹಿರಿಯ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತುರ್ತು ಕ್ರಮ ತೆಗೆದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+