ಶಿವಮೊಗ್ಗ : 2 ಲಕ್ಷ ಮತಗಳ ಅಂತರದಲ್ಲಿ ಬಿ.ವೈ.ರಾಘವೇಂದ್ರ ಜಯ
ಶಿವಮೊಗ್ಗ, ಮೇ 23 : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳ ನಡುವಿನ ಪೈಪೋಟಿಯಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರ ಅವರು ಗೆಲುವು ಸಾಧಿಸಿದರು.
ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಗುರುವಾರ ಲೋಕಸಭಾ ಚುನಾವಣೆ ಮತ ಎಣಿಕೆ ನಡೆಯಿತು. ಬಿಜೆಪಿಯ ಬಿ.ವೈ.ರಾಘವೇಂದ್ರ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ಕಣಕ್ಕಿಳಿದಿದ್ದ ಮಧು ಬಂಗಾರಪ್ಪ ಅವರನ್ನು ಸೋಲಿಸಿದರು.

ಬಿ.ವೈ.ರಾಘವೇಂದ್ರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ. ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರ. ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳ ಪೈಪೋಟಿ ಕುತೂಹಲಕ್ಕೆ ಕಾರಣವಾಗಿತ್ತು.
ಬಿ.ವೈ.ರಾಘವೇಂದ್ರ ಅವರು 2,23,360 ಮತಗಳ ಅಂತರದಿಂದ ಮಧು ಬಂಗಾರಪ್ಪ ಅವರನ್ನು ಸೋಲಿಸುವ ಮೂಲಕ 3ನೇ ಬಾರಿಗೆ ಸಂಸತ್ ಪ್ರವೇಶ ಮಾಡಿದರು. 2018ರ ವಿಧಾನಸಭೆ ಚುನಾವಣೆ, 2018ರ ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಸೋತಿದ್ದ ಮಧು ಬಂಗಾರಪ್ಪ ಅವರು ಈ ಬಾರಿಯೂ ಸೋಲು ಕಂಡರು.
ಪಡೆದ ಮತಗಳು
* ಬಿ.ವೈ.ರಾಘವೇಂದ್ರ - 7,29,872 ಮತ
* ಮಧು ಬಂಗಾರಪ್ಪ - 506512 ಮತ
* ಗೆಲುವಿನ ಅಂತರ - 2,23,360












Click it and Unblock the Notifications