• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕರ್ತವ್ಯ ಲೋಪ: ಶಿರಾಳಕೊಪ್ಪ ಪ.ಪಂ ಮುಖ್ಯಾಧಿಕಾರಿ ಅಮಾನತು

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ಮಾರ್ಚ್ 31: ಕೊರೋನಾ ವೈರಸ್ ನಿಯಂತ್ರಿಸುವ ಸಲುವಾಗಿ ಇಡೀ ದೇಶಾದ್ಯಂತ ವಿವಿಧ ಇಲಾಖೆ ಅಧಿಕಾರಿಗಳು ಶ್ರಮವಹಿಸಿ ದುಡಿಯುತ್ತಿದ್ದು, ಶಿರಾಳಕೊಪ್ಪ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಹನುಮಂತಪ್ಪ ಕರ್ತವ್ಯ ಲೋಪ ಎಸಗಿದ್ದರಿಂದ ಅವರನ್ನು ಅಮಾನತು ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕರ್ತವ್ಯ ಸಮಯದಲ್ಲಿ ಕೇಂದ್ರ ಸ್ಥಾನದಲ್ಲಿ ಇರದೇ ತಮ್ಮ ನಿವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು, ಅವರ ಕರ್ತವ್ಯ ಲೋಪದ ಕುರಿತು ಸಾರ್ವಜನಿಕರು ಮತ್ತು ಪತ್ರಕರ್ತರಿಂದ ಸಾಕಷ್ಟು ದೂರು ಬಂದಿದೆ.

ಹಾಗಾಗಿ ಕರ್ತವ್ಯ ಲೋಪ ಮಾಡಿರುವ ಹನುಮಂತಪ್ಪ ವೈ ಮಣ್ಣವಡರ್ ಇವರನ್ನು ತಕ್ಷಣವೇ ಜಾರಿ ಬರುವಂತೆ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಇವರ ಸ್ಥಾನಕ್ಕೆ ಹೇಮಂತ್ ಡೊಳ್ಳೆ ಅವರನ್ನು ಶಿರಾಳಕೊಪ್ಪ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿ ನಿಯೋಜಿಸಲಾಗಿದೆ.

English summary
The Shivamogga DC has ordered the suspended of Shiralakoppa town panchayat chief Hanumanthappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X