ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ; ವಿಮಾನ ನಿಲ್ದಾಣದ ಟರ್ಮಿನಲ್ ನೀಲನಕ್ಷೆ ಅನಾವರಣ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜೂನ್ 13; ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿದರು. ಮುಂದಿನ ವರ್ಷ ಜೂನ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಶಿವಮೊಗ್ಗ ತಾಲೂಕು ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಯಡಿಯೂರಪ್ಪ ಕನಸು. ಮುಖ್ಯಮಂತ್ರಿಯಾದ ಬಳಿಕ ಯೋಜನೆಗೆ ವೇಗವನ್ನು ನೀಡಿದ್ದಾರೆ. ಶನಿವಾರ ರನ್ ವೇ ಕಾಮಗಾರಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು, ಅಧಿಕಾರಿಗಳು, ಗುತ್ತಿಗೆದಾರರಿಂದ ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದರು.

ಮಂಗಳೂರಲ್ಲಿ ಲ್ಯಾಂಡ್ ಆದ ವಾಯುಸೇನೆ ಬೃಹತ್ ವಿಮಾನಮಂಗಳೂರಲ್ಲಿ ಲ್ಯಾಂಡ್ ಆದ ವಾಯುಸೇನೆ ಬೃಹತ್ ವಿಮಾನ

ವಿಮಾನ ನಿಲ್ದಾಣದ ಟರ್ಮಿನಲ್ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ. ಯಡಿಯೂರಪ್ಪ ಅದರ ಡಿಜಿಟಲ್ ನೀಲನಕ್ಷೆಯನ್ನು ಅನಾವರಣಗೊಳಿಸಿದರು. ಶುಕ್ರವಾರ ಸಂಜೆ ಶಿಕಾರಿಪುರಕ್ಕೆ ಆಗಮಿಸಿದ್ದ ಯಡಿಯೂರಪ್ಪ ಶನಿವಾರ ಶಿವಮೊಗ್ಗ ಪ್ರವಾಸದಲ್ಲಿದ್ದರು.

Yediyurappa

384 ಕೋಟಿ ವೆಚ್ಚ; ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, "384 ಕೋಟಿ ರೂ. ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾರ್ಯ ನಡೆಯುತ್ತಿದೆ. 216.06 ಕೋಟಿ ರೂ. ವೆಚ್ಚದಲ್ಲಿ ರನ್ ವೇ ಮತ್ತು ಇತರೆ ಕಾಮಗರಿಗಳು ನಡೆಯುತ್ತಿವೆ. 110 ಕೋಟಿ ರೂ. ವೆಚ್ಚದಲ್ಲಿ ಟರ್ಮಿನಲ್, ಏರ್ ಟ್ರಾಫಿಕ್ ಕಂಟ್ರೋಲ್ ಕಟ್ಟಡ ನಿರ್ಮಿಸಲಾಗುತ್ತಿದೆ" ಎಂದರು.

1 ವರ್ಷದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ1 ವರ್ಷದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ

"ಈಗಾಗಲೇ 900 ಮೀಟರ್ ರನ್ ವೇ ಕಾಮಗಾರಿಯ ಮಣ್ಣು ಅಗೆತ ಮತ್ತು ಎಂಬ್ಯಾಕ್ಟ್ಮೆಂಟ್ ಕಾಮಗಾರಿ ಮುಗಿದಿದೆ. 900 ಮೀಟರ್‌ನಿಂದ 2940 ಮೀಟರ್‌ವರೆಗಿನ ಮಣ್ಣು ಅಗೆತ ಮತ್ತು ಎಂಬ್ಯಾಕ್ಟ್ಮೆಂಟ್ ನಡೆಯುತ್ತಿದೆ" ಎಂದು ತಿಳಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣ; ಯೋಜನೆಯ ಮುಖ್ಯಾಂಶಗಳುಶಿವಮೊಗ್ಗ ವಿಮಾನ ನಿಲ್ದಾಣ; ಯೋಜನೆಯ ಮುಖ್ಯಾಂಶಗಳು

ಎರಡು ದಿನದ ಹಿಂದೆ ಕರಾರು; "ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡರೆ ಕೈಗಾರಿಕೋದ್ಯಮಿಗಳು ಶಿವಮೊಗ್ಗಕ್ಕೆ ಬರಲು ಅನುಕೂಲವಾಗಲಿದೆ. ಹತ್ತಾರು ಸಾವಿರ ಯುವಕರಿಗೆ ಉದ್ಯೋಗ ಸಿಗಲಿದೆ. ಬೆಂಗಳೂರು ನಂತರ ಅತ್ಯಂತ ಉತ್ತಮ ವಿಮಾನ ನಿಲ್ದಾಣ ಇದಾಗಲಿದೆ. ಪ್ರಯಾಣಿಕರ ಟರ್ಮಿನಲ್, ಎಟಿಸಿ, ಮತ್ತಿತರ ಮೂಲಸ ಸೌಕರ್ಯದ ಪ್ಯಾಕೇಜ್ 2 ಕಾಮಗಾರಿ ಕರಾರು ಪತ್ರಕ್ಕೆ ಎರಡು ದಿನದ ಹಿಂದೆ ಸಹಿ ಹಾಕಲಾಗಿದೆ" ಎಂದರು.

Shivamogga airport

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಸಂಸದ ಬಿ.ವೈ.ರಾಘವೇಂದ್ರ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಸಿಇಒ ವೈಶಾಲಿ ಸೇರಿದಂತೆ ಹಲವರು ಇದ್ದರು.

English summary
Chief minister B. S. Yediyurappa Saturday unveiled blueprint of the Shivamogga airport terminal. Airport project may complete in the month of June 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X