ಹರ್ಷ ಹಿಂದೂ ಎಂದು ಹೆಸರಿಟ್ಟುಕೊಂಡಿದ್ದೇ ತಪ್ಪಾ: ಸಹೋದರಿ ಅಶ್ವಿನಿ ಅಳಲು
ಶಿವಮೊಗ್ಗ, ಫೆಬ್ರವರಿ 21: "ಜಯ್ ರಾಮ್, ಶ್ರೀರಾಮ್ ಎಂದುಕೊಂಡೆ ನನ್ನ ತಮ್ಮ ಪ್ರಾಣ ಬಿಟ್ಟ. ಹರ್ಷದ ಹತ್ಯೆ ಮಾಡಿದವರು ಯಾರು ಎಂದು ಗೊತ್ತಿಲ್ಲ, ಆದರೆ ನಮ್ಮ ಕುಟುಂಬಕ್ಕೆ ನ್ಯಾಯ ಬೇಕು," ಎಂದು ಭಜರಂಗದಳದ ಕಾರ್ಯಕರ್ತರ ಹರ್ಷ ಅವರ ಸಹೋದರಿ ಅಶ್ವಿನಿ ಒತ್ತಾಯಿಸಿದ್ದಾರೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಬಳಿ ಪ್ರತಿಕ್ರಿಯೆ ನೀಡಿದ ಅಶ್ವಿನಿ, "ಭಾನುವಾರ ತಾವು ಚಿಕ್ಕಮಗಳೂರಿಗೆ ಹೋಗಿದ್ದೆ. ನಿನ್ನ ತಮ್ಮನನ್ನು ಹೊಡೆದು ಹಾಕಿದ್ದಾರೆ ಎಂದು ಫೋಟ್ ಮೂಲಕ ತಿಳಿಸಿದರು. ವಿಡಿಯೋ, ಫೋಟೋಗಳನ್ನು ಕಳುಹಿಸಿದ್ದರು. ಈಗ ನಾವು ಯಾರ ಬಳಿ ನ್ಯಾಯ ಕೇಳಬೇಕು," ಎಂದು ಪ್ರಶ್ನಿಸಿದ್ದಾರೆ.
"ನನ್ನ ತಮ್ಮ ಹರ್ಷ ಯಾರಿಗೂ ತೊಂದರೆ ಕೊಟ್ಟ ಹುಡುಗನೇ ಅಲ್ಲ. ಹಾಗಿದ್ದರೂ ಹತ್ಯೆ ಮಾಡಿದವರು ಯಾರು ಎಂಬುದು ನನಗೆ ಗೊತ್ತಿಲ್ಲ. ಜಯ್ ರಾಮ್, ಶ್ರೀರಾಮ್ ಎಂದುಕೊಂಡೇ ಪ್ರಾಣ ಬಿಟ್ಟಿದ್ದಾನೆ. ನಮ್ಮ ಕುಟುಂಬಕ್ಕೆ ನ್ಯಾಯ ಸಿಗಬೇಕು. ಹರ್ಷ ಹಿಂದೂ ಅಂತಾ ಹೆಸರಿಟ್ಟುಕೊಂಡಿದ್ದೇ ತಪ್ಪಾಯಿತೇ," ಎಂದು ಅಶ್ವಿನಿ ಪ್ರಶ್ನೆ ಮಾಡಿದ್ದಾರೆ.

ಗೃಹ ಸಚಿವರಲ್ಲಿ ಅಶ್ವಿನಿ ಮನವಿ:
ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಸಾಂತ್ವನ ಹೇಳಿದರು. ಈ ವೇಳೆ ತಮ್ಮ ಸಹೋದರನ ಸಾವಿನ ನ್ಯಾಯ ಕೊಡಿಸುವಂತೆ ಗೃಹ ಸಚಿವರಲ್ಲಿ ಅಶ್ವಿನಿ ಮನವಿ ಮಾಡಿಕೊಂಡರು.
ಹರ್ಷ ಯಾರ ತಂಟೆಗೂ ಹೋಗುತ್ತಿರಲಿಲ್ಲ:
ನನ್ನ ಮಗ ಕೆಟ್ಟವನಾಗಿದ್ದರೆ ಇಷ್ಟು ಜನರು ಸೇರುತ್ತಿರಲಿಲ್ಲ. ಸುಖಾಸುಮ್ಮನೆ ಹರ್ಷ ಯಾರ ತಂಟೆಗೂ ಹೋಗುತ್ತಿದ್ದವನಲ್ಲ. ಆದರೆ ದೇಶಾಭಿಮಾನ ತುಂಬಾ ಇತ್ತು. ಯಾವುದೇ ಹೆಣ್ಣು ಮಕ್ಕಳನ್ನು ಕಣ್ಣೆತ್ತಿ ನೋಡುತ್ತಿರಲಿಲ್ಲ. ಬೇರೆ ಯಾರನ್ನಾದರೂ ಕೇಳಿ ನೋಡಿ. ದೇಶದ ಸೇನೆಯ ಬಗ್ಗೆ ಅವನಿಗೆ ಬಹಳಷ್ಟು ಗೌರವವಿತ್ತು. ನನ್ನ ಮಗನ ಬಗ್ಗೆ ನನಗೆ ಹೆಮ್ಮೆಯಿದೆ. ಅವನು ಹಿಂದೂ ಪರ ಕೆಲಸ ಮಾಡುತ್ತಿದ್ದನೇ ಹೊರತೂ ಬೇರೆ ಯಾರಿಗೂ ಅನ್ಯಾಯ ಮಾಡುತ್ತಿರಲಿಲ್ಲ. ನನ್ನ ಮಗ ಯಾರ ಬಳಿಯೂ ಒಂದು ರೂಪಾಯಿಗೂ ಕೈ ಚಾಚಿದವನಲ್ಲ," ಎಂದು ಹರ್ಷ ತಂದೆ ನಾಗರಾಜ್ ಜಿಂಗಾಡೆ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಭಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ:
ಶಿವಮೊಗ್ಗ ನಗರದ ಎನ್.ಟಿ. ರಸ್ತೆಯ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ರಾತ್ರಿ ಯುವಕರ ಗುಂಪೊಂದು ಭಜರಂಗ ದಳ ಕಾರ್ಯಕರ್ತ ಹರ್ಷನ ಮೇಲೆ ಏಕಾಏಕಿ ದಾಳಿ ನಡೆಸಿದೆ. ಮಾರಕಾಸ್ತ್ರಗಳಿಂದ ನಡೆಸಿದ ಹಲ್ಲೆಯಿಂದಾಗಿ ಹೊಟ್ಟೆ, ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದ ಹರ್ಷನನ್ನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ 22 ವರ್ಷದ ಹರ್ಷ ಮೃತಪಟ್ಟಿದ್ದಾನೆ.
ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣ:
ಕಳೆದ ಐದು ವರ್ಷಗಳಿಂದ ಭಜರಂಗ ದಳದಲ್ಲಿ ಗುರುತಿಸಿಕೊಂಡಿದ್ದ ಹರ್ಷ ಹತ್ಯೆಗೆ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ರಾತ್ರೋರಾತ್ರಿ ಪೂರ್ವ ವಲಯದ ಐಜಿಪಿ ತ್ಯಾಗರಾಜನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದಾದ್ಯಂತ ಅಂಗಡಿ, ಹೋಟೆಲ್ ಬಂದ್ ಮಾಡಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಫೆಬ್ರವರಿ 23 ರಾತ್ರಿ 9 ಗಂಟೆವರೆಗೂ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಈ ಅವಧಿಯಲ್ಲಿ ಜನರು ಗುಂಪುಗೂಡಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications