Shivamogga Bus Accident: ಶಿವಮೊಗ್ಗ ಬಸ್ ದುರಂತ: ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು 36 ಅಮೂಲ್ಯ ಜೀವ
ಶಿವಮೊಗ್ಗ: ಕರ್ನಾಟಕವೂ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಖಾಸಗಿ ಬಸ್‌ಗಳು ಬೆಂಕಿ ಅವಘಡಕ್ಕೆ ತುತ್ತಾಗುವುದು ಹೆಚ್ಚಾಗಿದೆ. ಅಲ್ಲದೇ ಬಸ್ ಅಪಘಾತಗಳಿಂದ ಹಲವರು ಜೀವ ಕಳೆದುಕೊಳ್ಳುತ್ತಿದ್ದು, ಕೆಲವರಿಗೆ ಗಂಭೀರ ಗಾಯಗಳು ಆಗುತ್ತಿವೆ. ಕರ್ನಾಟಕ ಸರ್ಕಾರದ ಮಾರ್ಗಸೂಚಿಯ ಹೊರತಾಗಿಯೂ ಶಿವಮೊಗ್ಗದಲ್ಲಿ ಮತ್ತೊಂದು ಬಸ್ ಬೆಂಕಿ ಅವಘಡ ಸಂಭವಿಸಿದೆ. ಈ ಅಪಘಾತದಲ್ಲಿ 8ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ.
ಕರ್ನಾಟಕದ ಚಿತ್ರದುರ್ಗದ ಬಸ್ ದುರಂತ ಘಟನೆ ಮಾಸುವ ಮುನ್ನವೇ ಶಿವಮೊಗ್ಗದಲ್ಲಿ ಮತ್ತೊಂದು ಭಾರೀ ಬೆಂಕಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಖಾಸಗಿ ಸ್ಲೀಪರ್ ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸೂಡುರು ಬಳಿ ಮಂಗಳವಾರ ತಡರಾತ್ರಿ ಈ ಬೆಂಕಿ ಅವಘಡ ಸಂಭವಿಸಿದೆ. ಬೆಂಗಳೂರಿನ ಅನ್ನಪೂರ್ಣ ಟ್ರಾವೆಲ್ಸ್ ಸಂಸ್ಥೆಗೆ ಸೇರಿದೆ ಎನ್ನಲಾದ ಸ್ಲೀಪರ್ ಬಸ್ ಇದಾಗಿದೆ. ಮಂಗಳವಾರ ಈ ಬಸ್ ನಿಟ್ಟೂರಿನಿಂದ ಬಸ್ ಹೊರಟಿತ್ತು. ಅಲ್ಲಿಂದ ಹೊಸನಗರ, ರಿಪ್ಪನ್‌ಪೇಟೆ ಮಾರ್ಗವಾಗಿ ಶಿವಮೊಗ್ಗಕ್ಕೆ ಬಸ್ ಸಂಚರಿಸುತ್ತಿತ್ತು. ಶಿವಮೊಗ್ಗ ಮಾರ್ಗವಾಗಿ ಹೋಗುವ ಸಂದರ್ಭದಲ್ಲಿ ಅರಸಾಳು - ಸೂಡೂರು ಮಾರ್ಗದ ಕಾಡಿನಲ್ಲಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಈ ಬಸ್ ಹೊಸನಗರದಿಂದ ಬೆಂಗಳೂರಿಗೆ ಬರುತ್ತಿತ್ತು ಎಂದು ಹೇಳಲಾಗಿದ್ದು, ಬಸ್‌ನಲ್ಲಿ ಒಟ್ಟು 36 ಜನ ಪ್ರಯಾಣಿಕರಿದ್ದರು. ಈ ಅವಘಡದಲ್ಲಿ 8 ಮಂದಿ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಹೊಸನಗರದಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಶ್ರೀ ಅನ್ನಪೂರ್ಣೇಶ್ವರಿ ಬಸ್‌ನಲ್ಲಿ ಈ ಅವಘಡ ಸಂಭವಿಸಿದ್ದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Shivamogga Bus Accident: ಬೆಂಕಿ ಅವಘಡ ಸಂಭವಿಸಿದ್ದು ಹೇಗೆ ?
ಬೆಂಗಳೂರಿನ ಅನ್ನಪೂರ್ಣ ಟ್ರಾವೆಲ್ಸ್ ಸಂಸ್ಥೆಗೆ ಸೇರಿದೆ ಎನ್ನಲಾದ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಬಸ್ ಚಾಲಕ ಬಸ್‌ಅನ್ನು ನಿಯಂತ್ರಿಸಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ನಿಲ್ಲಿಸಿದ್ದಾರೆ. ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಪ್ರಯಾಣಿಕರಿಗೆ ಎಮರ್ಜೆನ್ಸಿ ಡೋರ್ ಮೂಲಕ ಹೊರಬರಲು ಸಾಧ್ಯವಾಗಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿದ್ದು, ಪ್ರಯಾಣಿಕರ ಬಟ್ಟೆ ಹಾಗೂ ಬೆಲೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಹೇಳಲಾಗಿದೆ.
ಸರ್ಕಾರದ ಮಾರ್ಗಸೂಚಿ ಹೊರತಾಗಿಯೂ ದುರಂತ
ಇನ್ನು ಇತ್ತೀಚಿನ ದಿನಗಳಲ್ಲಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಬಸ್ ದುರಂತಗಳು ಹೆಚ್ಚಾಗುತ್ತಿವೆ. ಖಾಸಗಿ ಬಸ್‌ಗಳಲ್ಲಿ ಸಂಭವಿಸುತ್ತಿರುವ ದುರಂತವನ್ನು ತಪ್ಪಿಸುವ ಉದ್ದೇಶದಿಂದ ಕೆಲವೊಂದು ಪ್ರಮುಖ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿತ್ತು. ಇದರ ಹೊರತಾಗಿಯೂ ದುರಂತಗಳು ಸಂಭವಿಸುವುದು ಮುಂದುವರಿದಿದೆ.
ಈಚೆಗೆ ಖಾಸಗಿ ಬಸ್‌ಗಳಿಗೆ ಸುರಕ್ಷತೆ ಸಂಬಂಧಿಸಿದಂತೆ ನೀಡಲಾಗಿದ್ದ ಮಾನದಂಡಗಳಲ್ಲಿ ಚಾಲಕನ ಆಸನದ ಹಿಂಭಾಗದಲ್ಲಿ ತುರ್ತು ನಿರ್ಗಮನ ಬಾಗಿಲು ವ್ಯವಸ್ಥೆ ಇರಬೇಕು ಹಾಗೂ ಸ್ವೀಪರ್ ಬರ್ತ್‌ಗಳಲ್ಲಿ ಸೈಡರ್ ಓಪನ್ ಕಡ್ಡಾಯ ಎನ್ನುವುದು ಸೇರಿದಂತೆ ಹಲವು ನಿಯಮಗಳನ್ನು ಜಾರಿ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ಆದರೆ ಇದರ ಹೊರತಾಗಿಯೂ ಖಾಸಗಿ ಬಸ್‌ಗಳ ಬೆಂಕಿ ಅವಘಡ ಮುಂದುವರಿದಿದೆ.












Click it and Unblock the Notifications