ಕಾರಿನೊಳಗೆ ಕೂತಿದ್ದ ಶಿವಮೊಗ್ಗ ಮಾರ್ಕೆಟ್ ಗಿರಿಯನ್ನು ಕೊಂದ ಮುಸುಕುಧಾರಿಗಳು
ಶಿವಮೊಗ್ಗ, ಸೆಪ್ಟೆಂಬರ್ 12: ನಗರದ ಸೂರ್ಯ ಕಂಫರ್ಟ್ಸ್ ನ ಬಳಿ ಮಂಗಳವಾರ ರೌಡಿ ಶೀಟರ್ ಮಾರ್ಕೆಟ್ ಗಿರಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾತ್ರಿ 9.45ರ ಹೊತ್ತಿಗೆ ಈ ಹತ್ಯೆ ಮಾಡಲಾಗಿದೆ. ಹಳೇ ದ್ವೇಷವೇ ಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ.
ಸೂರ್ಯ ಕಂಫರ್ಟ್ಸ್ ನಲ್ಲಿರುವ ಬಾರ್ ನ ಪ್ರವೇಶ ದ್ವಾರದಲ್ಲಿ ಗಿರಿಯನ್ನು ಹತ್ಯೆ ಮಾಡಲಾಗಿದೆ. ಈ ಕೊಲೆಯ ಕುರಿತು ಮಾತನಾಡಿದ ಎಸ್ಪಿ ಅಭಿನವ ಖರೆ, ರೌಡಿ ಶೀಟರ್ ಗಿರಿ ಮರ್ಡರ್ ಗೆ ಹಳೇ ವೈಷಮ್ಯವೇ ಕಾರಣವೆಂದು ತಿಳಿದುಬಂದಿದೆ. ಹತ್ಯೆಯ ಕುರಿತು ತನಿಖೆ ನಡೆದಾಗಲೇ ಯಾರು ಈ ಹತ್ಯೆಗೆ ಕಾರಣರು ಎಂಬ ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ.
ಐದು ಜನ ಮುಸುಕುಧಾರಿಗಳು ಬಂದು ಏಕಾಏಕಿ ಗಿರಿ ಮೇಲೆ ಎರಗಿದ್ದು, ಮಚ್ಚು ಮತ್ತು ಲಾಂಗು ಬೀಸಿದ್ದಾರೆ. ಇದರಿಂದಾಗಿ ಗಿರಿ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.

ಸೂರ್ಯ ಕಂಫರ್ಟ್ಸ್ ಎದುರು ನಿಲ್ಲಿಸಿದ್ದ ತನ್ನ ಸ್ನೇಹಿತನ ಕಾರಿನಲ್ಲಿ ಗಿರಿ ಹಿಂಭಾಗದಲ್ಲಿ ಕುಳಿತಿದ್ದ. ಕಾರಿನ ಹಿಂಭಾಗದ ಗಾಜು ಒಡೆದ ದುಷ್ಕರ್ಮಿಗಳು ಏಕಾಏಕಿ ಮಚ್ಚು- ಲಾಂಗ್ ಬೀಸಿದ್ದಾರೆ. ಅಲ್ಲಿಂದ ತಪ್ಪಿಸಿಕೊಳ್ಳಲು ಅವನಿಗೆ ಅವಕಾಶ ದೊರೆತಿಲ್ಲ. ಒಂದು ಕಾಲು ಕಾರಿನ ಒಳಗೆ ತುಂಡಾಗಿದೆ. ದೇಹ ಹೊರಗೆ ಬಿದ್ದಿದೆ.
ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಜಿಲ್ಲಾ ಹೆಚ್ಚುವರಿ ಎಸ್ ಪಿ ಮುತ್ತುರಾಜ್, ಡಿವೈಎಸ್ಪಿ ಸುದರ್ಶನ್, ದೊಡ್ಡಪೇಟೆ ಪೊಲೀಸ್ ಠಾಣೆಯ ಹರೀಶ್ ಪಾಟೀಲ್ ಮೊದಲಾದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications