ಶಾಸಕ ಕಿಮ್ಮನೆ ರತ್ನಾಕರಗೆ ಶಿವಮೊಗ್ಗ ಕೋರ್ಟ್‌ನಿಂದ ಸಮನ್ಸ್

ಶಿವಮೊಗ್ಗ, ನವೆಂಬರ್ 5 : ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಕಿಮ್ಮನೆ ರತ್ನಾಕರ ಅವರಿಗೆ ಶಿವಮೊಗ್ಗ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸಮನ್ಸ್ ಜಾರಿ ಮಾಡಿದ್ದು, ಡಿ.22ರಂದು ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಿದೆ.

ಶಿವಮೊಗ್ಗ 4ನೇ ಸಿವಿಲ್ ನ್ಯಾಯಾಲಯ ಶನಿವಾರ ಕಿಮ್ಮನೆ ರತ್ನಾಕರ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಕಿಮ್ಮನೆ ರತ್ನಾಕರ ಅವರು ಜುಲೈನಲ್ಲಿ ಪತ್ರಿಕಾಗೋಷ್ಠಿ ನಡೆಸಿದಾಗ ತಮ್ಮ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು ಎಂದು ವಕೀಲ ಕೆ.ಪಿ.ಶ್ರೀಪಾಲ್ ದೂರು ದಾಖಲು ಮಾಡಿದ್ದರು.

Shivamogga court summons to Kimmane Rathnakar

ಈ ದೂರಿನ ಅನ್ವಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಿರ್ಮಲಾ ಅವರು ಸಮನ್ಸ್ ಜಾರಿ ಮಾಡಿದ್ದಾರೆ. ಡಿ.22ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್‌ನಲ್ಲಿ ಸೂಚಿಸಲಾಗಿದೆ.

ಸಾಮಾಜಿಕ ಹೋರಾಟಗಾರ ಮತ್ತು ವಕೀಲ ಕೆ.ಪಿ.ಶ್ರೀಪಾಲ್ ಅವರು ಸದರಿ ಪ್ರಕರಣದಲ್ಲಿ ಐಪಿಸಿ ಸಕ್ಷನ್ 499& 500 ಅಡಿಯಲ್ಲಿ ಕಿಮ್ಮನೆ ರತ್ನಾಕರ ಅವರಿಗೆ ಶಿಕ್ಷೆ ವಿಧಿಸಬೇಕು ಎಂದು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+