ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದ ಬಸ್, ರೈಲು ನಿಲ್ದಾಣಗಳಲ್ಲಿ ತಪಾಸಣೆ ವ್ಯವಸ್ಥೆ: ಡಿಸಿ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಮಾರ್ಚ್ 18: ಕೊರೊನಾ ವೈರಸ್ ಸೋಂಕು ಶಿವಮೊಗ್ಗ ಜಿಲ್ಲೆಗೆ ಆವರಿಸಿಕೊಳ್ಳುವುದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ರೈಲ್ವೇ ಸ್ಟೇಷನ್ ಮತ್ತು ಬಸ್ ನಿಲ್ದಾಣಗಳಲ್ಲಿ ಜ್ವರ ತಪಾಸಣೆ ಮಾಡಲು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೊರೊನಾ ವೈರಸ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು.

ಪಟ್ಟಣಗಳು ಖಾಲಿ ಖಾಲಿ.. ಯುವಕರನ್ನು ಹಳ್ಳಿಗೆ ಕರೆತಂದ ಕೊರೊನಾಪಟ್ಟಣಗಳು ಖಾಲಿ ಖಾಲಿ.. ಯುವಕರನ್ನು ಹಳ್ಳಿಗೆ ಕರೆತಂದ ಕೊರೊನಾ

ಜ್ವರ, ನೆಗಡಿ, ಕೆಮ್ಮುನಂತಹ ರೋಗ ಲಕ್ಷಣ ಇರುವವರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಅಗತ್ಯವಿದ್ದರೆ, ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಿ, ಕೊರೊನಾ ವೈರಸ್ ಪರೀಕ್ಷೆ ನಡೆಸಬೇಕು. ಬಸ್ ನಿಲ್ದಾಣ, ರೈಲ್ವೇ ಸ್ಟೇಷನ್ ಗಳಲ್ಲಿ ಕ್ರಿಮಿನಾಶಕಗಳನ್ನು ನಿಯಮಿತವಾಗಿ ಸಿಂಪಡಿಸುವ ಕಾರ್ಯ ಆರಂಭಿಸಬೇಕು ಎಂದು ತಿಳಿಸಿದರು.

Shivamogga DC Said Inspection System Arranging in Bus Stand

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸರ್ಕಾರಿ ಕಚೇರಿಗಳಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು, ಆರೋಗ್ಯ ಅಧಿಕಾರಿಗಳು ಸೂಚನೆ ನೀಡಿದರು.

ಈಗಾಗಲೇ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಇದೇ ರೀತಿ ಜಾತ್ರೆ ಮತ್ತು ಮದುವೆ ಸಮಾರಂಭಗಳನ್ನು ದೊಡ್ಡ ಪ್ರಮಾಣದಲ್ಲಿ ಮಾಡದಂತೆ ಸೂಚನೆ ನೀಡಲಾಗಿದೆ. ಎಲ್ಲಾ ಮಾಲ್, ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ. ಕೊರೊನಾ ವೈರಸ್ ಕುರಿತಂತೆ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವಂತಹ, ಕಾನೂನು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ತಿಳಿಸಿದ್ದಾರೆ.

ಭದ್ರಾವತಿಯಲ್ಲಿ ಕೊರೊನಾ ತಪಾಸಣೆಗೆ ಸಹಕರಿಸದ ಇಟಲಿ ಪ್ರವಾಸಿಗರುಭದ್ರಾವತಿಯಲ್ಲಿ ಕೊರೊನಾ ತಪಾಸಣೆಗೆ ಸಹಕರಿಸದ ಇಟಲಿ ಪ್ರವಾಸಿಗರು

ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿರುವ ಪ್ರಯೋಗಾಲಯದಲ್ಲಿ ಇದುವರೆಗೆ 34 ಶಂಕಿತ ಪ್ರಕರಣಗಳ ಪರೀಕ್ಷೆ ನಡೆಸಲಾಗಿದ್ದು, ಎಲ್ಲಾ ಪ್ರಕರಣಗಳು ನೆಗಟಿವ್ ಬಂದಿವೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ 5 ಪರೀಕ್ಷೆ ನಡೆಸಲಾಗಿದೆ. ನೆರೆಯ ರಾಜ್ಯಗಳಿಂದಲೂ ಪರೀಕ್ಷೆಗಾಗಿ ಸ್ಯಾಂಪಲ್ಗಳನ್ನು ಸ್ವೀಕರಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ವಿದೇಶಗಳಿಂದ ಆಗಮಿಸಿದ 49 ಮಂದಿಯ ಮೇಲೆ ನಿಗಾ ಇರಿಸಲಾಗಿದ್ದು, 14 ದಿನಗಳ ಕಾಲ ನಿಗಾ ಇರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಅವರು ಮಾಹಿತಿ ನೀಡಿದರು.

ಮೆಗ್ಗಾನ್ ನಲ್ಲಿ ಸದ್ಯ 30 ಹಾಸಿಗೆಯ ಐಸೋಲೇಷನ್ ವಾರ್ಡ್ ಸಜ್ಜುಗೊಳಿಸಲಾಗಿದ್ದು, ಇನ್ನೂ 100 ಬೆಡ್ ವಾರ್ಡ್ ಸಿದ್ಧಪಡಿಸಲಾಗುತ್ತಿದೆ. ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ 100 ಬೆಡ್ ಐಸೋಲೇಷನ್ ವಾರ್ಡ್ ಸಜ್ಜುಗೊಳಿಸಲು ಸೂಚಿಸಲಾಗಿದೆ ಎಂದು ಹೇಳಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ ಹೆಚ್.ಟಿ, ಶಿಮ್ಸ್ ನಿರ್ದೇಶಕ ಡಾ.ಲೇಪಾಕ್ಷಿ, ಡಾ.ಶಂಕರಪ್ಪ ಮತ್ತಿತರರು ಉಪಸ್ಥಿತರಿದ್ದರು.

English summary
Shivamogga DC KB Shivakumar has instructed to the health department officials to arrange fever checks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X