Breaking; ಶಿವಮೊಗ್ಗ ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ವರ್ಗಾವಣೆ
ಶಿವಮೊಗ್ಗ, ಜನವರಿ 12; ಶಿವಮೊಗ್ಗ ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಡಾ. ಸೆಲ್ವಮಣಿ ಆರ್. ನೇಮಕಗೊಂಡಿದ್ದಾರೆ.
ಬುಧವಾರ ಕರ್ನಾಟಕ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಕೋಲಾರ ಜಿಲ್ಲಾಧಿಕಾರಿಯಾಗಿದ್ದ ಡಾ. ಸೆಲ್ವಮಣಿ ಆರ್. ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಕೆ. ಬಿ. ಶಿವಕುಮಾರ್ 2019ರ ಆಗಸ್ಟ್‌ನಿಂದ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಅನೇಕ ದಿನಗಳಿಂದ ಕೆ. ಬಿ. ಶಿವಕುಮಾರ್ ವರ್ಗಾವಣೆಗೊಳ್ಳಲಿದ್ದಾರೆ ಎಂಬ ಸುದ್ದಿಗಳು ಹಬ್ಬಿತ್ತು.

ಕೆ. ಬಿ. ಶಿವಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿರುವ ಸರ್ಕಾರ ಸ್ಥಳವನ್ನು ನಿಯೋಜನೆ ಮಾಡಿಲ್ಲ. ಡಾ. ಸೆಲ್ವಮಣಿ ಆರ್. ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಡಾ. ಸೆಲ್ವಮಣಿ ಆರ್. 2021ರ ಫೆಬ್ರವರಿಯಲ್ಲಿ ಕೋಲಾರ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡಿದ್ದರು. 2013ರ ಕರ್ನಾಟಕ ಕೆಡರ್ ಅಧಿಕಾರಿಯಾಗಿರುವ ಡಾ. ಸೆಲ್ವಮಣಿ ಆರ್. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
ಕೋವಿಡ್ ಪರಿಸ್ಥಿತಿ ಕುರಿತು ಸಭೆ; ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ಬುಧವಾರ ಅಧಿಕಾರ ವಹಿಸಿಕೊಂಡ ಡಾ. ಆರ್. ಸೆಲ್ವಮಣಿ ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಳ್ಳಿ ಮುಂತಾದವರು ಉಪಸ್ಥಿತರಿದ್ದರು.












Click it and Unblock the Notifications