Breaking; ಶಿವಮೊಗ್ಗ ಡಿಸಿ ಕಚೇರಿ ಉದ್ಯೋಗಿ ನಾಪತ್ತೆ

ಶಿವಮೊಗ್ಗ, ಸೆಪ್ಟೆಂಬರ್ 28: ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಉದ್ಯೋಗಿಯೊಬ್ಬರು ನಾಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್ ಮೆಸೇಜ್ ಮಾಡಿ ನಾಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯ ಸೆಕ್ಷನ್ ಒಂದರ ಪ್ರಥಮ ದರ್ಜೆ ಸಹಾಯಕ ಗಿರಿರಾಜ್ (39) ನಾಪತ್ತೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆಯಿಂದ ಅವರಿಗಾಗಿ ಹುಡುಕಾಟ ನಡೆಯುತ್ತಿದೆ. ಕುಟುಂಬದವರು ಆತಂಕಗೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್ ಮೆಸೇಜ್ ಕಳುಹಿಸಿ ಗಿರಿರಾಜ್ ನಾಪತ್ತೆಯಾಗಿದ್ದಾರೆ. ಇದು ಜಿಲ್ಲಾಧಿಕಾರಿ ಕಚೇರಿ ಮತ್ತು ಕಂದಾಯ ಇಲಾಖೆ ನೌಕರರಲ್ಲಿ ಆತಂಕ ಸೃಷ್ಟಿಸಿದೆ.

Shivamogga Deputy Commissioner Office Official Missing

ಗಿರಿರಾಜ್ ಬೆಳಗ್ಗೆ ಮನೆಯಿಂದ ಹೊರಟಿದ್ದಾರೆ. ತಮ್ಮ ವಾಹನವನ್ನು ಕೂಡ ತೆಗೆದುಕೊಂಡು ಹೋಗಿಲ್ಲ ಎಂದು ತಿಳಿದು ಬಂದಿದೆ. ಬಹು ಹೊತ್ತಾದರೂ ಗಿರಿರಾಜ್ ಮನೆಗೆ ಹಿಂತಿರುಗದ ಹಿನ್ನಲೆ ಮನೆಯವರು ಆತಂಕಕ್ಕೀಡಾಗಿದ್ದಾರೆ.

ನೆರೆಹೊರೆಯವರು, ಸ್ನೇಹಿತರನ್ನು ವಿಚಾರಿಸಿದ್ದಾರೆ. ಗಿರಿರಾಜ್ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯ ವಾಟ್ಸಪ್ ಗ್ರೂಪ್‌ಗೆ ಮೆಸೇಜ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕಾರ್ಯದ ಒತ್ತಡದ ಹಿನ್ನಲೆಯಲ್ಲಿ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಗಿರಿರಾಜ್ ವಾಟ್ಸಪ್ ಸಂದೇಶ ಮತ್ತು ಅವರ ಕುಟುಂಬದವರು ಎಲ್ಲೆಡೆ ಕರೆ ಮಾಡಿ ವಿಚಾರಿಸುತ್ತಿದ್ದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆತಂಕ ಸೃಷ್ಟಿಯಾಗಿದೆ. ಗಿರಿರಾಜ್‌ಗಾಗಿ ಇತರೆ ಸಿಬ್ಬಂದಿ ಹುಡಕಾಟ ಆರಂಭಿಸಿದ್ದಾರೆ.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಗಿರಿರಾಜ್ (39) ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರು ಮಂಗಳವಾರ ರಾತ್ರಿ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ನನ್ನ ಸಾವಿಗೆ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ನೇರ ಕಾರಣ ಎಂದು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯ ವಾಟ್ಸಪ್ ಗ್ರೂಪ್‌ಗೆ ಮೆಸೇಜ್ ಮಾಡಿರುವ ಗಿರಿರಾಜ್ ಮಂಗಳವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದಾರೆ.

ಹೆಚ್ಚಿನ ಮಾಹಿತಿ ತಿಳಿಯಬೇಕಿದೆ....

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+