ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಉಪ ಚುನಾವಣೆ : ನಾಮಪತ್ರ ಸಲ್ಲಿಸಿದ ಬಿ.ವೈ.ರಾಘವೇಂದ್ರ

|
Google Oneindia Kannada News

ಶಿವಮೊಗ್ಗ, ಅಕ್ಟೋಬರ್ 15 : ಶಿವಮೊಗ್ಗ ಲೋಕಸಭೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಸಿದರು. ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರು ಆಯ್ಕೆಯಾಗಿದ್ದಾರೆ.

ಸೋಮವಾರ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸಿದರು. ಶಿವಮೊಗ್ಗ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ಶಿವಮೊಗ್ಗ: ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಘೋಷಣೆಶಿವಮೊಗ್ಗ: ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಘೋಷಣೆ

ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ, ಸಾಗರ ಶಾಸಕ ಹರತಾಳು ಹಾಲಪ್ಪ, ಬಿಜೆಪಿ ಮುಖಂಡ ಭಾನುಪ್ರಕಾಶ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಳಿಕ ಎನ್‌ಇಎಸ್‌ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಿ, ಶಕ್ತಿ ಪ್ರದರ್ಶನ ಮಾಡಲಾಯಿತು.

ಬ್ರೇಕಿಂಗ್ ನ್ಯೂಸ್ : ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸೋಲ್ಲ!ಬ್ರೇಕಿಂಗ್ ನ್ಯೂಸ್ : ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸೋಲ್ಲ!

ಶಿವಮೊಗ್ಗ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಆಯ್ಕೆಯಾಗಿದ್ದಾರೆ. ಮಂಗಳವಾರ ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಬಿ.ವೈ.ರಾಘವೇಂದ್ರ ಅವರು 2ನೇ ಬಾರಿಗೆ ಸಂಸತ್ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ.

ಶಿವಮೊಗ್ಗ ಉಪ ಚುನಾವಣೆ : ಬಿ.ವೈ.ರಾಘವೇಂದ್ರ ಒಮ್ಮತದ ಅಭ್ಯರ್ಥಿಯೇ?ಶಿವಮೊಗ್ಗ ಉಪ ಚುನಾವಣೆ : ಬಿ.ವೈ.ರಾಘವೇಂದ್ರ ಒಮ್ಮತದ ಅಭ್ಯರ್ಥಿಯೇ?

ಬಿ.ವೈ.ರಾಘವೇಂದ್ರ ನಾಮಪತ್ರ

ಬಿ.ವೈ.ರಾಘವೇಂದ್ರ ನಾಮಪತ್ರ

ಶಿವಮೊಗ್ಗ ಲೋಕಸಭಾ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ಬೃಹತ್ ಮೆರವಣಿಗೆ ನಡೆಸಲಾಯಿತು. ನಾಮಪತ್ರ ಸಲ್ಲಿಕೆ ಬಳಿಕ ಎನ್ಇಎಸ್ ಮೈದಾನದಲ್ಲಿ ಕಾರ್ಯಕರ್ತರ, ಅಭಿಮಾನಿಗಳ ಬೃಹತ್ ಸಮಾವೇಶ ನಡೆಸಲಾಯಿತು.

ಶಿವಮೊಗ್ಗಕ್ಕೆ ಇದು ಎರಡನೇ ಲೋಕಸಭಾ ಉಪ ಚುನಾವಣೆಶಿವಮೊಗ್ಗಕ್ಕೆ ಇದು ಎರಡನೇ ಲೋಕಸಭಾ ಉಪ ಚುನಾವಣೆ

3 ಕ್ಷೇತ್ರದಲ್ಲೂ ಬಿಜೆಪಿ ಗೆಲುವು

3 ಕ್ಷೇತ್ರದಲ್ಲೂ ಬಿಜೆಪಿ ಗೆಲುವು

ಸೋಮವಾರ ಶಿವಮೊಗ್ಗದಲ್ಲಿ ಮಾತನಾಡಿದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, 'ಲೋಕಸಭೆ ಉಪ ಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯಗಳಿಸಲಿದೆ. ಶಿವಮೊಗ್ಗದಲ್ಲಿ ಎದುರಾಳಿ ಯಾರೇ ಆದರೂ ಬಿ.ವೈ.ರಾಘವೇಂದ್ರ ಅವರು ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಬಳ್ಳಾರಿಯಲ್ಲಿ ಯಾವುದೇ ಬಂಡಾಯವಿಲ್ಲ. ಸಣ್ಣಪುಟ್ಟ ವ್ಯತ್ಯಾಸಗಳಿವೆ ಅವು ಬಗೆಹರಿಯಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಧು ಬಂಗಾರಪ್ಪ ಅಭ್ಯರ್ಥಿ

ಮಧು ಬಂಗಾರಪ್ಪ ಅಭ್ಯರ್ಥಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿಯಲಿದ್ದಾರೆ. ಸೋಮವಾರ ಬೆಳಗ್ಗೆ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರಿಂದ ಅವರು ಬಿಫಾರಂ ಪಡೆದಿದ್ದಾರೆ. ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನವಾದ ಅಕ್ಟೋಬರ್ 16ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ.

2ನೇ ಬಾರಿಗೆ ಸಂಸತ್‌ಗೆ ಸ್ಪರ್ಧೆ

2ನೇ ಬಾರಿಗೆ ಸಂಸತ್‌ಗೆ ಸ್ಪರ್ಧೆ

ಬಿ.ವೈ.ರಾಘವೇಂದ್ರ ಅವರು 2 ನೇ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. 2009ರ ಚುನಾವಣೆಯಲ್ಲಿ ಅವರು 482783 ಮತಗಳನ್ನು ಪಡೆದಿದ್ದರು. ಆದರೆ, 2014ರ ಲೋಕಸಭೆ ಚುನಾವಣೆಯಲ್ಲಿ ತಂದೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದರು. ಈಗ ಯಡಿಯೂರಪ್ಪ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಪುನಃ ಅವರು ಸ್ಪರ್ಧೆ ಮಾಡುತ್ತಿದ್ದಾರೆ.

ಬಿಜೆಪಿ ಗೆಲುವು ಸುಲಭವೇ?

ಬಿಜೆಪಿ ಗೆಲುವು ಸುಲಭವೇ?

ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸುಲಭವೇ?. ಪ್ರಾಥಮಿಕ ಲೆಕ್ಕಾಚಾರದ ಪ್ರಕಾರ ಹೌದು. ಏಕೆಂದರೆ, ಜಿಲ್ಲೆಯಲ್ಲಿ 6 ಬಿಜೆಪಿ ಶಾಸಕರಿದ್ದಾರೆ. ಭದ್ರಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಜೆಡಿಎಸ್ ಪಕ್ಷದ ಯಾವುದೇ ಅಭ್ಯರ್ಥಿಗಳು ವಿಧಾಸಭೆ ಚುನಾವಣೆಯಲ್ಲಿ ಜಯಗಳಿಸಿಲ್ಲ.

English summary
Karnataka BJP President B.S.Yeddyurappa son B.Y.Raghavendra on October 15, 2018 filed the nomination for Shivamogga Lok Sabha by election scheduled on November 3.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X