Get Updates
Get notified of breaking news, exclusive insights, and must-see stories!

Lok Sabha Election 2024 Result: ಶಿವಮೊಗ್ಗದಲ್ಲಿ ಸೋತ ಗೀತಾ ಪ್ರತಿಕ್ರಿಯೆ

ಶಿವಮೊಗ್ಗ, ಜೂನ್ 04: ಶಿವಮೊಗ್ಗ ಕ್ಷೇತ್ರದ ಲೋಕಸಭಾ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ 2,43,715 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.

ಮಂಗಳವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿಯ ಬಿ. ವೈ. ರಾಘವೇಂದ್ರ ಗೆಲುವು ಸಾಧಿಸಿದರೆ, ಕಾಂಗ್ರೆಸ್‌ನ ಗೀತಾ ಶಿವರಾಜ್‌ ಕುಮಾರ್ 2ನೇ ಸ್ಥಾನ ಪಡೆದರು. ಪಕ್ಷೇತರ ಅಭ್ಯರ್ಥಿಯಾಗಿದ್ದ ಕೆ. ಎಸ್. ಈಶ್ವರಪ್ಪ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

Shivamogga Lok Sabha Election 2024 Result Geetha Shivarajkumar Reaction

ಗೀತಾ ಶಿವರಾಜ್‌ ಕುಮಾರ್ ಪ್ರತಿಕ್ರಿಯೆ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್‌ ಕುಮಾರ್ ಸಾಮಾಜಿಕ ಜಾಲತಾಣದ ಮೂಲಕ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

'ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ, ನಿಮ್ಮೊಂದಿಗಿನ ಈ ಪ್ರಯಾಣ ಮತ್ತು ನಮ್ಮ ಜನರ ಅಚಲವಾದ ಬೆಂಬಲಕ್ಕಾಗಿ ನಾವು ಸದಾ ಕೃತಜ್ಞರಾಗಿರುತ್ತೇವೆ. ಮತದಾರನ ನಿರ್ಣಯಕ್ಕೆ ತಲೆ ಬಾಗುತ್ತ, ನಾವು ಭವಿಷ್ಯದ ಬದಲಾವಣೆಗಾಗಿ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಹಾಗು ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು' ಎಂದು ಹೇಳಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಂತಿಮ ಫಲಿತಾಂಶ ಈಗಾಗಲೇ ಪ್ರಕಟವಾಗಿದೆ. ಬಿಜೆಪಿಯ ಬಿ. ವೈ. ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಂದ ಪ್ರಮಾಣ ಪತ್ರವನ್ನು ಪಡೆದಿದ್ದಾರೆ.

ಬಿ. ವೈ. ರಾಘವೇಂದ್ರ 7,78,721 ಮತಗಳನ್ನು ಪಡೆದಿದ್ದು, ಗೆಲುವಿನ ಅಂತರ 2,43,715 ಮತಗಳು. ಕಾಂಗ್ರೆಸ್‌ನ ಗೀತಾ ಶಿವರಾಜಕುಮಾರ್ 5,35,006 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ 30,050 ಮತಗಳನ್ನುಗಳಿಸಿ 3ನೇ ಸ್ಥಾನವನ್ನು ಪಡೆದಿದ್ದಾರೆ.

ಗೀತಾ ಶಿವರಾಜ್‌ ಕುಮಾರ್ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸೋಲು ಕಾಣುತ್ತಿರುವುದು ಇದೇ ಮೊದಲಲ್ಲ. 2014ರ ಚುನಾವಣೆಯಲ್ಲಿ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಬಿ. ಎಸ್. ಯಡಿಯೂರಪ್ಪ ವಿರುದ್ಧ ಸೋತಿದ್ದರು. 2024ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಡಿಯೂರಪ್ಪ ಪುತ್ರ ಬಿ. ವೈ. ರಾಘವೇಂದ್ರ ವಿರುದ್ಧ ಸೋಲು ಕಂಡಿದ್ದಾರೆ.

2009ರ ಲೋಕಸಭೆ ಚುನಾವಣೆಯಿಂದ ಶಿವಮೊಗ್ಗದಲ್ಲಿ ಯಡಿಯೂರಪ್ಪ ಮತ್ತು ಎಸ್. ಬಂಗಾರಪ್ಪ ಕುಟುಂಬದ ಪೈಪೋಟಿ ಆರಂಭವಾಯಿತು. 2009ರಲ್ಲಿ ತಮ್ಮ ಮೊದಲ ಚುನಾವಣೆಯಲ್ಲಿಯೇ ರಾಘವೇಂದ್ರ 4,82,783 ಮತಗಳನ್ನು ಪಡೆದು ಎಸ್. ಬಂಗಾರಪ್ಪ (429,890 ಮತ) ಸೋಲಿಸಿದರು.

ಈ ಚುನಾವಣೆ ಮೂಲಕ ಬಂಗಾರಪ್ಪ ಕುಟುಂಬಕ್ಕೆ ಮೊದಲ ಹಿನ್ನಡೆ ಆಯಿತು. ಬಳಿಕ 2014ರಲ್ಲಿ ಬಿ. ಎಸ್. ಯಡಿಯೂರಪ್ಪ ಜೆಡಿಎಸ್‌ ಅಭ್ಯರ್ಥಿ, ಬಂಗಾರಪ್ಪ ಪುತ್ರಿ ಗೀತಾ ಶಿವರಾಜ್ ಕುಮಾರ್ ಸೋಲಿಸಿದರು.

2018ರ ಉಪ ಚುನಾವಣೆಯಲ್ಲಿ ಬಿ. ವೈ. ರಾಘವೇಂದ್ರ ಎಸ್. ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ ಸೋಲಿಸಿದರು. 2019ರ ಚುನಾವಣೆಯಲ್ಲಿ ಪುನಃ ಬಿ. ವೈ. ರಾಘವೇಂದ್ರ, ಮಧು ಬಂಗಾರಪ್ಪ ಮುಖಾಮುಖಿಯಾದರು. ಮಧು ಬಂಗಾರಪ್ಪ ಸೋಲು ಕಂಡರು.

ಈ ಬಾರಿ 2024ರಲ್ಲಿ ಬಿ. ವೈ. ರಾಘವೇಂದ್ರ ಗೀತಾ ಶಿವರಾಜ್ ಕುಮಾರ್ ಸೋಲಿಸುವ ಮೂಲಕ ಎಸ್. ಬಂಗಾರಪ್ಪ. ಅವರ ಪುತ್ರ ಮಧು ಬಂಗಾರಪ್ಪ, ಪುತ್ರಿ ಗೀತಾ ಶಿವರಾಜ್ ಕುಮಾರ್ ಸೋಲಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+