Lok Sabha Election 2024 Result: ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಹಿನ್ನಡೆ
ಶಿವಮೊಗ್ಗ, ಜೂನ್ 04: ಶಿವಮೊಗ್ಗ ಲೋಕಸಭಾ ಕ್ಷೇತ್ರದ 2024ರ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಇದೆ ಎಂದು ನಿರೀಕ್ಷೆ ಮಾಡಲಾಗಿದೆ. ಅಂಚೆ ಮತಗಳ ಎಣಿಕೆ ಮುಗಿದು ಇವಿಎಂ ಮತಗಳ ಮೊದಲ ಸುತ್ತಿನ ಎಣಿಕೆ ಆರಂಭವಾಗಿದೆ.
ಬಿ. ವೈ. ರಾಘವೇಂದ್ರ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ. ಕಾಂಗ್ರೆಸ್ನಿಂದ ಗೀತಾ ಶಿವರಾಜ್ ಕುಮಾರ್ ಕಣದಲ್ಲಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಕೆ. ಎಸ್. ಈಶ್ವರಪ್ಪ ಕಣಕ್ಕಿಳಿದು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಸಮಯ 8.35ರ ಮಾಹಿತಿಯಂತೆ ಶಿವಮೊಗ್ಗದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿಯ ಬಿ. ವೈ. ರಾಘವೇಂದ್ರ ಮುನ್ನಡೆ ಪಡೆದಿದ್ದಾರೆ. ರಾಘವೇಂದ್ರ 687 ಮತಗಳನ್ನು ಪಡೆದಿದ್ದು, 611 ಮತಗಳನ್ನು ಗೀತಾ ಶಿವರಾಜ್ ಕುಮಾರ್ ಪಡೆದಿದ್ದಾರೆ. ಅಂಚೆ ಮತಗಳ ಎಣಿಕೆಯಲ್ಲಿ ಪಕ್ಷೇತರ ಅಭ್ಯರ್ಥಿಗೆ ಹಿನ್ನಡೆಯಾಗಿದೆ. ಅಂಚೆ ಮತಗಳಲ್ಲಿ ಬಿಜೆಪಿ 2252, ಕಾಂಗ್ರೆಸ್ 2018, ಈಶ್ವರಪ್ಪ 260 ಮತಗಳನ್ನು ಪಡೆದಿದ್ದಾರೆ.
ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಹಾವೇರಿಯಲ್ಲಿ ಪುತ್ರ ಕಾಂತೇಶ್ಗೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಎಂದು ಅಸಮಾಧಾನಗೊಂಡರು. ಮಾಜಿ ಸಿಎಂ ಯಡಿಯೂರಪ್ಪ, ಬಿ. ವೈ. ವಿಜಯೇಂದ್ರ ಟೀಕೆ ಮಾಡಿದರು.
ಅಂತಿಮವಾಗಿ ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಕಾರಣ ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆಗೊಂಡರು.
ಶಿವಮೊಗ್ಗದಲ್ಲಿ ಇವಿಎಂ ಮತ ಎಣಿಕೆ ಮೊದಲ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿಯ ಬಿ. ವೈ. ರಾಘವೇಂದ್ರ 22,134. ಕಾಂಗ್ರೆಸ್ನ ಗೀತಾ ಶಿವರಾಜ್ ಕುಮಾರ್ 15,771 ಮತ್ತು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ 1092 ಮತಗಳನ್ನು ಪಡೆದಿದ್ದಾರೆ.
ಮೊದಲ ಸ್ಥಾನದಲ್ಲಿ ಬಿ. ವೈ. ರಾಘವೇಂದ್ರ ಇದ್ದು, 2ನೇ ಸ್ಥಾನದಲ್ಲಿ ಗೀತಾ ಶಿವರಾಜ್ ಕುಮಾರ್ ಇದ್ದಾರೆ. ಈಶ್ವರಪ್ಪ 3ನೇ ಸ್ಥಾನದಲ್ಲಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಬಿ. ವೈ. ರಾಘವೇಂದ್ರ 33,780 ಮತ, ಗೀತಾ ಶಿವರಾಜ್ ಕುಮಾರ್ 22,497 ಮತ್ತು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ 2145 ಮತಗಳನ್ನು ಪಡೆದಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications