Get Updates
Get notified of breaking news, exclusive insights, and must-see stories!

Lok Sabha Election 2024 Result: ಶಿವಮೊಗ್ಗದಲ್ಲಿ ಹಠ ಮಾಡಿ ಸೋತ ಈಶ್ವರಪ್ಪ!

ಶಿವಮೊಗ್ಗ, ಜೂನ್ 04: ಶಿವಮೊಗ್ಗ ಲೋಕಸಭಾ ಚುನಾವಣೆ 2024ರ ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಗೆಲವು ಸಾಧಿಸಿದ್ದಾರೆ. ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಸೋಲು ಕಂಡು, ಮೂರನೇ ಸ್ಥಾನಕ್ಕೆ ಕುಸಿದರು.

ಮಂಗಳವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ 2024ರ ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿಯ ಬಿ. ವೈ. ರಾಘವೇಂದ್ರ ಗೆಲುವು ಸಾಧಿಸಿದರೆ, ಕಾಂಗ್ರೆಸ್‌ನ ಗೀತಾ ಶಿವರಾಜ್‌ ಕುಮಾರ್ 2ನೇ ಸ್ಥಾನ ಪಡೆದರು.

Shivamogga Lok Sabha Election 2024 Result Set Back For KS Eshwarappa

ಶಿವಮೊಗ್ಗದಲ್ಲಿ ಬಿಜೆಪಿಯ ಬಿ. ವೈ. ರಾಘವೇಂದ್ರ, ಕಾಂಗ್ರೆಸ್‌ನ ಗೀತಾ ಶಿವರಾಜ್ ಕುಮಾರ್, ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ಸೇರಿ 23 ಅಭ್ಯರ್ಥಿಗಳು ಕಣದಲ್ಲಿದ್ದರು. ಹಠ ಮಾಡಿ ಚುನಾವಣಾ ಕಣಕ್ಕಿಳಿದಿದ್ದ ಈಶ್ವರಪ್ಪ 29,471 ಮತಗಳನ್ನು ಪಡೆದು ಹೀನಾಯ ಸೋಲು ಕಂಡರು.

ಹಠ ಮಾಡಿ ಸೋತ ಈಶ್ವರಪ್ಪ: ಮಾಜಿ ಸಚಿವ, ಕುರುಬ ಸಮುದಾಯದ ಪ್ರಭಾವಿ ನಾಯಕ ಕೆ. ಎಸ್. ಈಶ್ವರಪ್ಪ ಹಠ ಮಾಡಿ ಶಿವಮೊಗ್ಗದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲು ಕಂಡಿದ್ದಾರೆ. ಈಶ್ವರಪ್ಪ ಈ ಬಾರಿಯ ಚುನಾವಣೆಗೆ ಹಾವೇರಿಯಲ್ಲಿ ಪುತ್ರ ಕಾಂತೇಶ್‌ಗೆ ಟಿಕೆಟ್ ಕೇಳಿದ್ದರು. ಆದರೆ ಪಕ್ಷ ಬಸವರಾಜ ಬೊಮ್ಮಾಯಿ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿತು.

ಇದರಿಂದ ಕೆರಳಿ ಕೆಂಡವಾದ ಈಶ್ವರಪ್ಪ ಮಾಜಿ ಸಿಎಂ ಯಡಿಯೂರಪ್ಪ, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ವಿರುದ್ಧ ಟೀಕೆಗಳನ್ನು ಮಾಡಿದರು. ಬಿಜೆಪಿ ಎದುರು ಹಾಕಿಕೊಂಡು 'ರಾಷ್ಟ್ರ ಭಕ್ತರ ಬಳಗ' ಎಂದು ಮಾಡಿಕೊಂಡು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದರು.

ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದಾಗ ಈಶ್ವರಪ್ಪಗೆ ಆಹ್ವಾನ ನೀಡಲಾಯಿತು. ಆದರೆ ಸಮಾವೇಶಕ್ಕೆ ಗೈರಾಗಿ, ಈಶ್ವರಪ್ಪ ಪಕ್ಷಕ್ಕೆ ಸೆಡ್ಡು ಹೊಡೆರು. ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದರು.

ಈಶ್ವರಪ್ಪ ಮನವೊಲಿಕೆ ವಿಫಲವಾದ ಬಳಿಕ ಬಿಜೆಪಿ ನಾಯಕರು ಅವರ ವಿರುದ್ಧ ಶಿಸ್ತು ಕ್ರಮ ಕೈಗೊಂಡರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಕಾರಣ ಈಶ್ವರಪ್ಪ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದರು.

2023 ವಿಧಾನಸಭೆ ಚುನಾವಣೆಯಲ್ಲಿ ಈಶ್ವರಪ್ಪ ಶಿವಮೊಗ್ಗ ನಗರದ ಬಿಜೆಪಿ ಟಿಕೆಟ್ ಬಿಟ್ಟುಕೊಟ್ಟಿದ್ದರು. 2018ರ ಚುನಾವಣೆಯಲ್ಲಿ ಅವರು ಗೆದ್ದಿದ್ದರು. ಆದರೆ ಕಳೆದ ಚುನಾವಣೆಯಲ್ಲಿ ಅವರನ್ನು ಬಿಟ್ಟು ಎಸ್. ಎನ್. ಚನ್ನಬಸಪ್ಪಗೆ ಟಿಕೆಟ್ ನೀಡಲಾಯಿತು.

ಆಗ ಪುತ್ರನ ರಾಜಕೀಯ ಭವಿಷ್ಯ ಭದ್ರ ಮಾಡಲು ಈಶ್ವರಪ್ಪ ಹಾವೇರಿ-ಗದಗ ಲೋಕಸಭೆ ಚುನಾವಣೆಯ ಟಿಕೆಟ್ ಪುತ್ರನಿಗೆ ನೀಡುವ ದಾಳ ಉರುಳಿಸಿದರು. ಆದರೆ ಪಕ್ಷ ಇದನ್ನು ಒಪ್ಪಲಿಲ್ಲ. ಪುತ್ರನಿಗೆ ಟಿಕೆಟ್ ಕೈತಪ್ಪಿದ ಬಳಿಕ ಅಸಮಾಧಾನಗೊಂಡ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದರು.

ಬಿಜೆಪಿ ಎಂದರೆ ಈಶ್ವರಪ್ಪ, ಈಶ್ವರಪ್ಪ ಎಂದರೆ ಬಿಜೆಪಿ ಎಂದು ರಾಜಕಾರಣ ಮಾಡಿದ್ದ ಈಶ್ವರಪ್ಪ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಯಡಿಯೂರಪ್ಪ, ವಿಜಯೇಂದ್ರ, ಬಿಜೆಪಿ ಕಾರ್ಯಕರ್ತರನ್ನು ಎದುರು ಹಾಕಿಕೊಂಡರು. ಅಂತಿಮವಾಗಿ ಚುನಾವಣೆಯಲ್ಲಿ ಸೋಲು ಕಂಡರು.

ಚುನಾವಣೆಯಲ್ಲಿ ಬಿ. ವೈ. ರಾಘವೇಂದ್ರ 7,72,364 ಮತಗಳು. ಕಾಂಗ್ರೆಸ್‌ನ ಗೀತಾ ಶಿವರಾಜ್ ಕುಮಾರ್ 5,32,340 ಮತಗಳು ಮತ್ತು ಕೆ. ಎಸ್. ಈಶ್ವರಪ್ಪ 29,674 ಮತಗಳನ್ನು ಪಡೆದಿದ್ದಾರೆ. ಅಂತಿಮ ಮತ ಎಷ್ಟು ಎಂಬುದು ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ತಿಳಿಯಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+